ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು.

June 10, 2023 | Siddesh

ರೈತರು ಮತ್ತು ನಾಗರಿಕರು ಮಳೆಗಾಲದ ಆರಂಭದಲ್ಲಿ ಗುಡುಗು ಮತ್ತು ಸಿಡಿಲು ಇರುವಂತಹ ಸಂದರ್ಭದಲ್ಲಿ ಯಾವೆಲ್ಲ ಮುನ್ನೆಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ.

ಸಿಡಿಲು ಪ್ರಕೃತಿಯಲ್ಲಿ ಉಂಟಾಗುವ  ಸ್ಥಳೀಯ ವಿದ್ಯಮಾನವಾಗಿದೆ. ಇದರಿಂದ ಜೀವ ಮತ್ತು ಆಸ್ತಿಯ ನಷ್ಟದ ವಿಷಯದಲ್ಲಿ ವಿನಾಶಕಾರಿ ಪರಿಣಾಮಗಳನ್ನು ಬೀರಬಹುದು.  ಪ್ರಸಕ್ತ ಮುಂಗಾರು ಪೂರ್ವ ಋತುವಿನಲ್ಲಿ (ಮಾರ್ಚ್ 1 ರಿಂದ ಮೇ 23 ರವರೆಗೆ) ಸಿಡಿಲಿನಿಂದಾಗಿ 34 ಮಾನವ ಜೀವಹಾನಿ ವರದಿಯಾಗಿವೆ.  

ಕಳೆದ 2 ವರ್ಷಗಳಲ್ಲಿ ಸಿಡಿಲು ಬಡಿದು ಒಟ್ಟು 200 ಸಾವುಗಳಳು ವರದಿಯಾಗಿವೆ. ಸಿಡಿಲು ಬಡಿತವನ್ನು ತಪ್ಪಿಸಲು ಸಾದ್ಯವಿಲ್ಲವಾದರೂ ಇದರಿಂದಾಗುವ ಸಾವು ನೋವುಗಳ ಪ್ರಮಾಣವನ್ನು ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ಪ್ರಮಾಣವನ್ನು ತಗ್ಗಿಸಬಹುದಾಗಿದೆ. 

ಈ ಹಿನ್ನೆಲೆಯಲ್ಲಿ, ಸಿಡಿಲಿನ ಸುರಕ್ಷತೆಯ ಬಗ್ಗೆ ಸಾಮೂಹಿಕ ಜಾಗೃತಿ ಮೂಡಿಸುವ ಮೂಲಕ ಸಿಡಿಲಿನಿಂದಾಗುವ ಸಾವುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಈ ಮಾಹಿತಿಯನ್ನು ನಿಮ್ಮ ಅಪ್ತರಿಗೆ ತಪ್ಪದೇ ಶೇರ್ ಮಾಡಿ.  

ಇದನ್ನೂ ಓದಿ: ಹೆಸ್ಕಾಂನಿಂದ ಉಚಿತ ವಿದ್ಯುತ್ ಯೋಜನೆ ಕುರಿತು ಗ್ರಾಹಕರ ಪ್ರಶ್ನೆಗಳಿಗೆ ಉತ್ತರಗಳ ವಿವರ.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು:

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು Common Alerting, Protocol (CAP) ಮುಖಾಂತರ ಬರುವ ಮೆಸೇಜ್‌ಗಳನ್ನು ಮೊಬೈಲ್‌ನಲ್ಲಿ ಗಮನಿಸಿಸುವುದು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. 

ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು, ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯುವುದು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು.

ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.

ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ.

ಅರಣ್ಯ ಪುದೇಶದಲ್ಲಿದ್ದರೆ ಸಣ್ಯ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು.

ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು.

ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.

ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ, ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು. ಗಮನಹರಿಸುವುದು.

ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು.

ಸಿಡಿಲು ಸಂದರ್ಭದಲ್ಲಿ, ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಹೊಗೆಯಬಾರದು.

ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು - ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು.

ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್ ಸೈಕಲ್ ಅಥವಾ ಇನ್ನಿತರ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು.

ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.

ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು. ಅರಣ್ಯ, ಪುದೇಶದಿಂದ, ಗಿಡ-ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು, ಮಿಂಚಿನ ಹೊಡೆತದಿಂದಾಗಿ ಕಾಡಿಚ್ಚು, ಸಂಭವಿಸುವ ಸಾಧ್ಯತೆಯಿದೆ.

Tags:
WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: