Dairy Farm Subsidy-ಹೈನುಗಾರಿಕೆ ಆರಂಭಿಸಲು ₹1.25 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 14, 2025 | Siddesh
Dairy Farm Subsidy-ಹೈನುಗಾರಿಕೆ ಆರಂಭಿಸಲು ₹1.25 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
Share Now:

ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ವರ್ಗದ ನಿಗಮಗಳಿಂದ ಹೈನುಗಾರಿಕೆಯನ್ನು(Dairy Farm Subsidy Application) ಆರಂಭಿಸಲು ಎರಡು ಎಮ್ಮೆ ಅಥವಾ ಹಸುವನ್ನು ಖರೀದಿಸಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಮ್ಮ ರಾಜ್ಯದಲ್ಲಿ ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು(Dairy Farming Subsidy Yojane)ಕೃಷಿಕರಿಗೆ ಒಂದು ಸ್ಥಿರ ಆದಾಯವನ್ನು ಒದಗಿಸುವ ಕ್ಷೇತ್ರವಾಗಿದ್ದು ಈ ನಿಟ್ಟಿನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಎರಡು ಎಮ್ಮೆ ಅಥವಾ ಹಸುವನ್ನು ಖರೀದಿ ಮಾಡಲು ಸಹಾಯಹಧನವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Internship Program-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಇಂಟರ್ನ್‌ಶಿಪ್ ಯೋಜನೆ!ತಿಂಗಳಿಗೆ ರೂ 20,000/- ಗೌರವಧನ!

ಹೈನುಗಾರಿಕೆ(Dairy Farm) ಆರಂಭಿಸಲು ಎಷ್ಟು ಸಬ್ಸಿಡಿಯನ್ನು ಒದಗಿಸಲಾಗುತ್ತದೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Subsidy Amount Details-ಸಬ್ಸಿಡಿ ಮೊತ್ತ ಎಷ್ಟು?

ಹೈನುಗಾರಿಕೆಯನ್ನು ಆರಂಭಿಸಲು ನಿಗಮದಿಂದ ಸಹಾಯಧನವನ್ನು ಪಡೆಯಲು ಆಯ್ಕೆಯಾಗುವ ಅರ್ಹ ಫಲಾನುಭವಿಗಳಿಗೆ ಎರಡು ಎಮ್ಮೆ ಅಥವಾ ಹಸುಗಳನ್ನು ಖರೀದಿ ಮಾಡಲು ಶೇ 50% ಅಥವಾ ಗರಿಷ್ಟ 1.25 ಲಕ್ಷ ಸಬ್ಸಿಡಿ ಅನ್ನು ಒದಗಿಸಲಾಗುತ್ತದೆ.

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಲ್ಲಿ ನಿಗದಿಪಡಿಸಿರುವ ವರ್ಗಕ್ಕೆ ಸೇರಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಈ ಹಿಂದೆ ಯೋಜನೆಯಡಿ ಸಹಾಯಧನವನ್ನು ಪಡೆದವರು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿದಾರರ ಕುಟುಂಬದಲ್ಲಿ ಸರಕಾರಿ/ಅರೆ ಸರಕಾರಿ ನೌಕರಿಯಲ್ಲಿದ್ದರೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಸೆಪ್ಟೆಂಬರ್ 2025

ಇದನ್ನೂ ಓದಿ: BPL Card-ಶೀಘ್ರದಲ್ಲಿ ರಾಜ್ಯ ಸರಕಾರದಿಂದ 12.68 ಲಕ್ಷ ಅಕ್ರಮ BPL ಕಾರ್ಡ ರದ್ದು: ಸಚಿವ ಕೆ ಹೆಚ್ ಮುನಿಯಪ್ಪ!

How To Apply-ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಆರ್ಜಿದಾರರು ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು ಸ್ವಂತ ತಾವೇ ಮೊಬೈಲ್ ಮೂಲಕ ಕೆಳಗೆ ವಿವರಿಸಿರುವ ಹಂತವನ್ನು ಅನುಸರಿಸಿ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್,ಕರ್ನಾಟಕ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Online Apply Method-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿದಾರರು ಕೆಳಗಿನ ಹಂತಗಳನ್ನು ಅನುಸರಿಸಿ ರಾಜ್ಯ ಸರಕಾರದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ "Online Application For Dairy Farm" ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Bhu Odetana Yojana-ಭೂ ಒಡೆತನ ಯೋಜನೆಯಡಿ ಜಮೀನು ಖರೀದಿಗೆ ಶೇ 50% ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ!

Dairy Farm Subsidy

ಇದನ್ನೂ ಓದಿ: SIM Card Status-ನಿಮ್ಮ ಹೆಸರಿನ ಮೇಲೆ ಎಷ್ಟು ಸಿಮ್ ತೆಗೆದುಕೊಳ್ಳಲಾಗಿದೆ? ಈಗಲೇ ಚೆಕ್ ಮಾಡಿ!

Step-2: ಇದಾದ ಬಳಿಕ ಈ ವೆಬ್ ಪೇಜ್ ನಲ್ಲಿ ಕೆಳಗೆ ಕಾಣುವ "ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿದರೆ ಸೇವಾ ಸಿಂಧು ತಂತ್ರಾಂಶ ತೆರೆದುಕೊಳ್ಳುತ್ತದೆ ಇಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು OTP ಅನ್ನು ಹಾಕಿ ಕೆಳಗಿರುವ ಕ್ಯಾಪ್ಚ್ ಕೋಡ್ ಹಾಕಿ "Submit" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-3: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Grama One-ಗ್ರಾಮ ಒನ್ ಕೇಂದ್ರವನ್ನು ಆರಂಭಿಸಲು ಅರ್ಜಿ ಆಹ್ವಾನ!

Required Documents For Application-ಅರ್ಜಿ ಸಲ್ಲಿಸಲು ದಾಖಲೆಗಳು:

ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯಕವಾಗಿ ಒದಗಿಸಬೇಕಾದ ದಾಖಲೆಯ ಪಟ್ಟಿ ಹೀಗಿದೆ:

  • ಅಭ್ಯರ್ಥಿಯ ಆಧಾರ್ ಕಾರ್ಡ/Aadhar’.
  • ಪೋಟೋ/Photo.
  • ಬ್ಯಾಂಕ್ ಪಾಸ್ ಬುಕ್/Bank Pass Book.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste And Income Certificate.
  • ರೇಶನ್ ಕಾರ್ಡ/Ration Card.
  • ಮೊಬೈಲ್ ನಂಬರ್/Mobile Number.

Helpline Number-ಸಹಾಯವಾಣಿ- 9482300400
Official Website-ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: