Gruhalakshmi Amount-ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಈಗಲೇ ಚೆಕ್ ಮಾಡಿ!

August 25, 2025 | Siddesh
Gruhalakshmi Amount-ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಈಗಲೇ ಚೆಕ್ ಮಾಡಿ!
Share Now:

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿರುವ ಗೃಹಲಕ್ಷ್ಮಿ(Gruhalakshmi) ಯೋಜನೆಯ ರೂ 2,000/- ಹಣವನ್ನು ರಾಜ್ಯದ ಎಲ್ಲಾ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಪ್ರಕಟಿಸಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗೃಹಲಕ್ಷ್ಮಿ ಯೋಜನೆಯಡಿ ಬಿಪಿಎಲ್ ಕಾರ್ಡ(BPL Card) ಅನ್ನು ಹೊಂದಿರುವ ಎಲ್ಲಾ ಮಹಿಳೆಯರಿಗೆ ಪ್ರತಿ ತಿಂಗಳು ರೂ 2,000/- ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವ ಯೋಜನೆಯನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ಈ ಯೋಜನೆಯಡಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗಿದ್ದು ಇದರ ವಿವರವನ್ನು ಇಂದಿನ ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Phonepe App Useful Tips-ನಿಮ್ಮ ಮೊಬೈಲ್ ನಲ್ಲಿ ಫೋನ್ ಪೇ ಇದೆಯಾ? ತಪ್ಪದೇ ಈ ಸುದ್ದಿ ನೋಡಿ!

ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Yojana)ಆರ್ಥಿಕ ನೆರವನ್ನು ಪಡೆಯುತ್ತಿರುವ ಅರ್ಹ ಫಲಾನುಭವಿ ಮಹಿಳೆಯರು ಈ ಯೋಜನೆಯ ಹಣ ಜಮಾ ಸ್ಥಿತಿಯನ್ನು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡುವುದು? ಹಾಗೂ ಇಲ್ಲಿಯವರೆಗೆ ಎಷ್ಟು ಕಂತಿನ ಹಣ ಬಿಡಗಡೆ ಮಾಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

Gruhalakshmi Hana-ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ:

ರಾಜ್ಯ ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ರೂ 2,000/- ಹಣವನ್ನು ಪಡೆಯಲು ಅರ್ಹರಿರುವ ಫಲಾನುಭವಿಗಳ ಖಾತೆಗೆ ಆಗಸ್ಟ್ 14 ರಿಂದ 20 ನೇ ತಾರಿಕೀನ ಮಧ್ಯದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ ಈ ಯೋಜನೆಯ ಆರ್ಥಿಕ ನೆರವನ್ನು ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: Free Medical Equipment-60 ವರ್ಷ ಮೇಲ್ಪಟವರಿಗೆ ಉಚಿತವಾಗಿ ವೈದ್ಯಕೀಯ ಸಾಧನಗಳನ್ನು ಪಡೆಯಲು ಅರ್ಜಿ ಆಹ್ವಾನ!

Gruhalakshmi Installment Dates-2025: ಪ್ರಸ್ತುತ ವರ್ಷದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ದಿನಾಂಕದ ವಿವರ:

2025-26 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಒಟ್ಟು ಮೂರು ಬಾರಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿ ಮಹಿಳೆಯರಿಗೆ ಈ ಯೋಜನೆಯಡಿ ರೂ 2,000/- ಆರ್ಥಿಕ ನೆರವನ್ನು ವರ್ಗಾವಣೆ ಮಾಡಲಾಗಿದ್ದು ಇದರ ವಿವರ ಈ ಕೆಳಗಿನಂತಿದೆ:

  • ಮೊದಲನೇ ಕಂತು- 19 ಮೇ 2025
  • ಎರಡನೇ ಕಂತು- 09 ಜೂನ್ 2025
  • ಮೂರನೇ ಕಂತು- 14 ಆಗಸ್ಟ್ 2025

ಈ ಮೇಲೆ ತಿಳಿಸಿದ ದಿನಾಂಕವಾರು ಒಟ್ಟು ಮೂರು ಬಾರಿ ತಲಾ ರೂ 2,000/- ದಂತೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ.

ಇದನ್ನೂ ಓದಿ: Reliance Foundation Scholarship-ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Gruhalakshmi Total Amount-ಇಲ್ಲಿಯವರೆಗೆ ಈ ಯೋಜನೆಯಡಿ ಎಷ್ಟು ಹಣ ಬಿಡುಗಡೆ ಮಾಡಲಾಗಿದೆ?

ಬಿಪಿಎಲ್ ಕಾರ್ಡ ಅನ್ನು ಹೊಂದಿರುವ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಈ ಯೋಜನೆಯಡಿ ಪ್ರತಿ ತಿಂಗಳು ರೂ 2,000/- ಆರ್ಥಿಕ ನೆರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದ್ದು ಇಲ್ಲಿಯವರೆಗೆ ಈ ಯೋಜನೆಯಡಿ ಒಬ್ಬ ಫಲಾನುಭವಿಗೆ 46,000/- ಕ್ಕೂ ಹೆಚ್ಚಿನ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ.

Gruhalakshmi Status Check-2025: ನಿಮ್ಮ ಮೊಬೈಲ್ ನಲ್ಲೇ ಗೃಹಲಕ್ಷ್ಮಿ ಹಣ ಬಂದಿರುವುದನ್ನು ಚೆಕ್ ಮಾಡಿ:

ಈ ಯೋಜನೆಯಡಿ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ಫಲಾನುಭವಿ ಮಹಿಳೆಯರು ಪ್ರತಿ ಬಾರಿ ವರ್ಗಾವಣೆ ಮಾಡುವ ಗೃಹಲಕ್ಷ್ಮಿ ಯೋಜನೆಯ ಆರ್ಥಿಕ ನೆರವು ಜಮಾ ಅಗಿರುವುದನ್ನು ಖಚಿತಪಡಿಸಿಕೊಳ್ಳು ನಿಮ್ಮ ಬ್ಯಾಂಕಿಗೆ ಹೋಗುವ ಅವಶ್ಯಕತೆ ಇರುವುದಿಲ್ಲ ನಿಮ್ಮ ಮೊಬೈಲ್ ನಲ್ಲೇ ಈ ಕೆಳಗಿನ ವಿಧಾನವನ್ನು ಅನುಸರಿಸಿ ಹಣ ಜಮಾ ವಿವರವನ್ನು ಪಡೆಯಬಹುದು.

ಇದನ್ನೂ ಓದಿ: Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

ವಿಧಾನ-1: ಬ್ಯಾಂಕಿನ "ಮಿಲ್ಡ್ ಕಾಲ್ ಬ್ಯಾಲೆನ್ಸ್ ಚೆಕ್ ಹೆಲ್ಪ್ ಲೈನ್ ನಂಬರ್/Bank Balance Check Helpline Number" ಗೆ ಕರೆ ಮಾಡುವ ಮೂಲಕ:

ಎಲ್ಲಾ ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಗ್ರಾಹಕರು ತಮ್ಮ ಉಳಿತಾಯ ಖಾತೆಯಲ್ಲಿ ಪ್ರಸ್ತುತ ಎಷ್ಟು ಬ್ಯಾಲೆನ್ಸ್ ಇದೆ ಎಂದು ತಮ್ಮ ಮೊಬೈಲ್ ನಲ್ಲಿ ಬ್ಯಾಂಕಿನ ಸಹಾಯವಾಣಿ ಸಂಕ್ಯೆಗೆ ಮಿಸ್ ಕಾಲ್ ನೀಡಿ ಬ್ಯಾಂಕ್ ಶಾಖೆಯನ್ನು ಭೇಟಿ ಮಾಡದೇ ನಿಮ್ಮ ಖಾತೆಯಲ್ಲಿ ಎಷ್ಟು ಹಣ ಇದೆ ಎನ್ನುವ ಮಾಹಿತಿಯನ್ನು ಪಡೆಯಬಹುದು.

ಇದೇ ಮಾದರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಿರುವ ಸುದ್ದಿಯು ನಿಮಗೆ ತಿಳಿದಾಗ ನಿಮ್ಮ ಖಾತೆಯಿರುವ ಬ್ಯಾಂಕಿನ ಮಿಲ್ಡ್ ಕಾಲ್ ಬ್ಯಾಲೆನ್ಸ್ ಚೆಕ್ ಹೆಲ್ಪ್ ಲೈನ್ ನಂಬರ್ ಗೆ ನೋಂದಾಯಿತ ಮೊಬೈಲ್ ನಂಬರ್ ನಿಂದ ಮಿಸ್ ಕಾಲ್ ಮಾಡಿ ನಿಮ್ಮ ಖಾತೆಯ ಬ್ಯಾಲೆನ್ಸ್ ಅನ್ನು ಚೆಕ್ ಮಾಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಅಗಿರುವುದನ್ನು ಖಚಿತಪಡಿಸಿಕೊಳ್ಳಬದು.

ಇದನ್ನೂ ಓದಿ: Bele Samikshe App-2025: ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ ಪ್ರಾರಂಭ!ಈಗಲೇ ನಿಮ್ಮ ಬೆಳೆ ವಿವರ ದಾಖಲಿಸಿ!

ನಿಮ್ಮ ಬ್ಯಾಂಕಿನ ಸಹಾಯವಾಣಿ ನಂಬರ್ ಅನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ- All Bank Balance Check Helpline Numbers

ವಿಧಾನ-2: "ಡಿಬಿಟಿ ಕರ್ನಾಟಕ/DBT Karnataka" ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ ಚೆಕ್ ಮಾಡಿ:

ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ಪಡೆಯಿತ್ತಿರುವ ಮಹಿಳೆಯರು ರಾಜ್ಯ ಸರಕಾರದ ಇ-ಆಡಳಿತ ಇಲಾಖೆಯಿಂದ ಅಭಿವೃದ್ದಿಪಡಿಸಿರುವ "DBT Karnataka" ಮೊಬೈಲ್ ಅಪ್ಲಿಕೇಶನ್ ಅನ್ನು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಕೆಳಗಿನ ಹಂತಗಳನ್ನು ಅನುಸರಿಸಿ ಮನೆಯಲ್ಲೇ ಕುಳಿತು ಈ ಯೋಜನೆಯಡಿ ಇಲ್ಲಿಯವರೆಗೆ ಎಷ್ಟು ಹಣ ಜಮಾ ಅಗಿದೆ? ಬ್ಯಾಂಕ್ ಖಾತೆ ವಿವರ, ಜಮಾ ದಿನಾಂಕ ಯಾವುದು? UTR ಸಂಖ್ಯೆ ಸೇರಿದಂತೆ ಸಂಪೂರ್ಣ ವಿವರವನ್ನು ನಿಮ್ಮ ಮೊಬೈಲ್ ನಲ್ಲೇ ಪಡೆಯಬಹುದು.

ಹಂತ-1: ಮೊದಲಿಗೆ "Download DBT Karnataka App" ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೈ ಸ್ಟೋರ್ ಪ್ರವೇಶ ಮಾಡಿ ಇ-ಆಡಳಿತ ಇಲಾಖೆಯ ಅಧಿಕೃತ "DBT Karnataka App" ಆಪ್ಲಿಕೇಶನ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು.

ಇದನ್ನೂ ಓದಿ: Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಹಂತ-2: ಇದಾದ ಬಳಿಕ ಅಪ್ಲಿಕೇಶನ್ ಅನ್ನು ಒಪನ್ ಮಾಡಿಕೊಂಡು ನಿಮ್ಮ 12 ಅಂಕಿಯ ಆಧಾರ್ ಕಾರ್ಡ್ ನಂಬರ್ ಯನ್ನು ಹಾಕಿ "Get OTP" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ಪಡೆದುಕೊಂಡು ಬಳಿಕ ನಮೂದಿಸಿ ಈ ಅಪ್ಲಿಕೇಶನ್ ಅನ್ನು ಬಳಕೆ ಮಾಡಲು ನಾಲ್ಕು ಅಂಕಿಯ ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು "Login" ಬಟನ್ ಮೇಲೆ ಕ್ಲಿಕ್ಕ್ ಮಾಡಿ ನೀವು ರಚನೆ ಮಾಡಿಕೊಂಡಿರುವ ಪಾಸ್ವರ್ಡ ಅನ್ನು ಹಾಕಿ ಅಪ್ಲಿಕೇಶನ್ ಗೆ ಲಾಗಿನ್ ಅಗಬೇಕು.

ಹಂತ-3: ಲಾಗಿನ್ ಅದ ನಂತರ ಇಲ್ಲಿ ಮುಖಪುಟದಲ್ಲಿ "ಪಾವತಿ ಸ್ಥಿತಿ/Payment Status" ಎಂದು ಕಾಣುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇಲ್ಲಿ ಕಾಣುವ "ಗೃಹಲಕ್ಷ್ಮೀ" ಬಟನ್ ಮೇಲೆ ಕ್ಲಿಕ್ ಮಾಡಿದರೆ ಇಲ್ಲಿಯವರೆಗೆ ಈ ಯೋಜನೆ ಅಡಿ ಎಷ್ಟು ಕಂತಿನ ಹಣ ಜಮಾ ಅಗಿದೆ ಇದರ ಸಂಪೂರ್ನ ವಿವರವನ್ನು ನೀವು ಇಲ್ಲಿ ಕಾಣಬಹುದು. ಗೃಹಲಕ್ಷ್ಮಿ ಹಣ ಜಮಾ ದಿನಾಂಕ, UTR ನಂಬರ್, ಬ್ಯಾಂಕ್ ಖಾತೆಯ ಕೊನೆಯ 4 ಸಂಖ್ಯೆ ಇತ್ಯಾದಿ ವಿವರವನ್ನು ನೋಡಬಹುದು.

Gruhalakshmi Scheme Website-ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು:

ಗೃಹಲಕ್ಷ್ಮಿ ಯೋಜನೆಯ ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: