B.Ed Admission-2025: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

September 10, 2025 | Siddesh
B.Ed Admission-2025: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ!
Share Now:

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಪ್ರವೇಶಾತಿಗೆ(B.Ed Admission) ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶಾತಿಯನ್ನು ಮಾಡಲಾಗುತ್ತದೆ ಈ ಕುರಿತು ಅಧಿಕೃತ ಪ್ರಕಟನೆಯನ್ನು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಹೊರಡಿಸಲಾಗಿದೆ.

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶ ಪಡೆಯಲು(KSOU B.Ed Admission)ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇತರೆ ಅವಶ್ಯಕ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

Who Can Apply For B.Ed Admission-2025: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅಭ್ಯರ್ಥಿಗಳು ವಿಜ್ಞಾನ/ಸಮಾಜ ವಿಜ್ಞಾನ/ವಾಣಿಜ್ಯ/ಮಾನವೀಯತೆ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಐವತ್ತು ಪ್ರತಿಶತ ಅಂಕಗಳನ್ನು ಪಡೆದ ಅಭ್ಯರ್ಥಿಗಳು, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ವಿಶೇಷತೆಯೊಂದಿಗೆ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಶೇಕಡ 55% ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ಪದವಿ ಜೊತೆಗೆ ಹೆಚ್ಚುವರಿಯಾಗಿ, ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ತರಬೇತಿ ಪಡೆದ ಸೇವಾ ಶಿಕ್ಷಕರು. ಎನ್‍ಸಿಟಿಇ ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮವನ್ನು ಮುಖಾಮುಖಿ ವಿಧಾನದ ಮೂಲಕ ಪೂರ್ಣಗೊಳಿಸಿದ ಅಭ್ಯರ್ಥಿಗಳು. (ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮ ಎಂದರೆ TCH/D.Ed./D.El.Ed./B.El.Ed.//ತತ್ಸಮಾನ). ದೂರಶಿಕ್ಷಣದಲ್ಲಿ ಬಿ.ಎಡ್. ಪ್ರವೇಶಾತಿ ಪಡೆಯಲು ಅರ್ಹತೆ ಹೊಂದಿರುತ್ತಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Grama One-ನಿಮ್ಮ ಹಳ್ಳಿಯ ಗ್ರಾಮ ಒನ್ ಕೇಂದ್ರದಲ್ಲಿ ಯಾವುದಕ್ಕೆಲ್ಲ ಅರ್ಜಿ ಸಲ್ಲಿಸಬಹುದು?

Last Date For B.Ed Admission-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ- 09 ಸೆಪ್ಟೆಂಬರ್ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 21 ಸೆಪ್ಟೆಂಬರ್ 2025
  • ಸಾಮಾನ್ಯ ಪ್ರವೇಶ ಪರೀಕ್ಷೆಯ ದಿನಾಂಕ- 28 ಸೆಪ್ಟೆಂಬರ್ 2025

Online Appliation For B.Ed Admission- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ:

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಕೆಳಗಿನ ಹಂತಗಳನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿವಿಯಿಂದ ಮಾಡಿಕೊಡಲಾಗಿದೆ.

ಹಂತ-1: ಮೊದಲಿಗೆ ಈ ಲಿಂಕ್ "B.Ed Admission Online Appliation" ಮೇಲೆ ಕ್ಲಿಕ್ ಮಾಡಿ ಅಧಿಕೃತ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

B.Ed Admission

ಹಂತ-2: ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿದ ಬಳಿಕ ಈ ಪೇಜ್ ನಲ್ಲಿ ಕಾಣುವ "Click here for Apply B.Ed Entrance Exam for the 2025-26 July cycle" ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ-3: ನಂತರ ಇಲ್ಲಿ ಎಡಬದಿಯಲ್ಲಿ ತೋರಿಸುವ "Click Here For New Registration" ಬಟನ್ ಮೇಲೆ ಕ್ಲಿಕ್ ಮಾಡಿ User Name ಮತ್ತು Password ಅನ್ನು ರಚನೆ ಮಾಡಿಕೊಂಡ ಬಳಿಕ ನಂತರ ಹಿಂದಿನ ಪುಟದಲ್ಲಿ User Name ಮತ್ತು Password ಅನ್ನು ಹಾಕಿ Security Code ಅನ್ನು ನಮೂದಿಸಿ "Login" ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

ಹಂತ-4: ಲಾಗಿನ್ ಅದ ಬಳಿಕ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

Documenst For B.Ed Admission-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲೆಗಳ ಪಟ್ಟಿ ಹೀಗಿದೆ:

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar
  • ಹಿಂದಿನ ತರಗತಿಯ ಅಂಕಪಟ್ಟಿ/Markscard
  • ವಿದ್ಯಾರ್ಥಿಯ ಪೋಟೋ/Photo.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ(ಅನ್ವಯಿಸಿದ್ದಲ್ಲಿ)/Caste And Income
  • ಮೊಬೈಲ್ ಮತ್ತು ಇ-ಮೇಲ್ ವಿಳಾಸ/Email and Mobile Number

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98806-26439/90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

KSOU Website-ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: