JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

September 12, 2025 | Siddesh
JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!
Share Now:

ಜೆಕೆ ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿವೇತನ ಕಾರ್ಯಕ್ರಮ(JK Tyre Scholarship) ಅಡಿಯಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮಾ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿನಿಯರಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಉತೇಜನ ನೀಡಲು ಆರ್ಥಿಕ ನೆರವನ್ನು ಒದಗಿಸಲು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ.

ಜೆಕೆ ಟೈರ್ ಮತ್ತು ಇಂಡಸ್ಟ್ರೀಸ್ ಲಿಮಿಟೆಡ್‌ ಸಂಸ್ಥೆಯಿಂದ ಜೆಕೆ ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿವೇತನ ಯೋಜನೆಯನ್ನು(JK Tyre Scholarship Application) ಅನುಷ್ಥಾನ ಮಾಡಲಾಗುತ್ತಿದ್ದು ಪ್ರಸ್ತುತ ಈ ಯೋಜನೆಯಡಿ ವೃತ್ತಿಪರ ಪದವಿ ಪೂರ್ವ ಕೋರ್ಸ್‌ಗಳು,ಸಾಮಾನ್ಯ ಪದವಿ ಪೂರ್ವ ಕೋರ್ಸ್‌ಗಳು, ಹಾಗೂ ಡಿಪ್ಲೊಮಾ ಕೋರ್ಸ್‌ಗಳನ್ನು ವ್ಯಾಸಂಗ ಮಾಡಲು ಪ್ರವೇಶವನ್ನು ಪಡೆದಿರುವ ಅರ್ಹ ಮಹಿಳಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸುವ ಗುರಿಯನ್ನು ಈ ಯೋಜನೆಯಡಿ ಹಾಕಿಕೊಳ್ಳಲಾಗಿದೆ.

ಇದನ್ನೂ ಓದಿ: BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

ಇಂದಿನ ಅಂಕಣದಲ್ಲಿ ಜೆಕೆ ಟೈರ್ ಮತ್ತು ಇಂಡಸ್ಟ್ರೀಸ್ ಲಿಮಿಟೆಡ್‌ ಸಂಸ್ಥೆಯಿಂದ ವಿದ್ಯಾರ್ಥಿವೇತನವನ್ನು(Scholarship Online Application) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇನ್ನಿತರೆ ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Important Dates For JK Tyre Scholarship-ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

2025-26 ನೇ ವರ್ಷದಲ್ಲಿ JK ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿವೇತನ ಕಾರ್ಯಕ್ರಮ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆಸಕ್ತ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಪ್ರಮುಖ ದಿನಾಂಕಗಳ ಮಾಹಿತಿ ಹೀಗಿದೆ:

  • ಅರ್ಜಿ ಸಲ್ಲಿಸಲು ಆರಂಭ: 09 ಸೆಪ್ಟೆಂಬರ್ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09 ಅಕ್ಟೋಬರ್ 2025

ಇದನ್ನೂ ಓದಿ: IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Who Can Apply For JK Tyre Scholarship-ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳು:

ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಸಂಬಂಧಪಟ್ಟ ಸಂಸ್ಥೆಯಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪಟ್ಟಿ ಹೀಗಿದೆ:

ಅರ್ಜಿದಾರರ ವಿದ್ಯಾರ್ಥಿಯು ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಕರ್ನಾಟಕ ಮತ್ತು ತಮಿಳುನಾಡು ನಿವಾಸಿಗಳಾಗಿರಬೇಕು.

ವಿದ್ಯಾರ್ಥಿಯು ಚಾಲಕರ ಕುಟುಂಬಕ್ಕೆ ಸೇರಿದ್ದು ಹೆಣ್ಣು ಮಕ್ಕಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯವು ₹5,00,000 ಕ್ಕಿಂತ ಕಡಿಮೆ ಅಥವಾ ಸಮಾನವಾಗಿರಬೇಕು.

ವಿದ್ಯಾರ್ಥಿಯು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು.

ಇದನ್ನೂ ಓದಿ: Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

JK Tyre Scholarship Amount-ವಿದ್ಯಾರ್ಥಿವೇತನದ ಮೊತ್ತ ಎಷ್ಟು?

ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಜೆಕೆ ಟೈರ್ ಸಾರಥಿ ಸ್ಕಾಲರ್ಶಿಪ್ ಕಾರ್ಯಕ್ರಮದಡಿ ಈ ಕೆಳಗಿನ ವಿವರದಲ್ಲಿ ತಿಳಿಸಿರುವ ರೀತಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಬಹುದು.

  • ವೃತ್ತಿಪರ ಪದವಿಪೂರ್ವ ಕೋರ್ಸ್‌ಗಳು/Degree scholarship: 25,000/-
  • ಸಾಮಾನ್ಯ ಪದವಿಪೂರ್ವ ಕೋರ್ಸ್‌ಗಳು: 15,000/-
  • ಡಿಪ್ಲೊಮಾ ಕೋರ್ಸ್‌ಗಳು/Diploma scholarship: 15,000/-

ಇದನ್ನೂ ಓದಿ: Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

Online Application For JK Tyre Scholarship-ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿವೇತನವನ್ನು ಪಡೆಯಲು ಆಸಕ್ತ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹಂತ-1: ಮೊದಲಿಗೆ ಇಲ್ಲಿ ಕ್ಲಿಕ್ "Online Shcolarship Application" ಮಾಡಿ ಅಧಿಕೃತ ವಿದ್ಯಾರ್ಥಿವೇತನ "www.buddy4study.com" ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

JK Tyre Scholarship

ಹಂತ-2: ಇದಾದ ಬಳಿಕ ಇಲ್ಲಿ ಮುಖಪುಟದಲ್ಲಿ ಮೇಲೆ ಬಲಗಡೆ ಕಾಣುವ "Apply Now" ಬಟನ್ ಮೇಲೆ ಕ್ಲಿಕ್ ಮಾಡಿ User ID ಮತ್ತು Password ಅನ್ನು ರಚನೆ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಿ.

ಹಂತ-3: ಲಾಗಿನ್ ಅದ ನಂತರ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಸಲ್ಲಿಸಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: B.Ed Admission-2025: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

Required Documents For JK Tyre Scholarship-ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೆಳಗಿನ ಪಟ್ಟಿಯಲ್ಲಿ ತಿಳಿಸಿರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

  • ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ.
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ.
  • ವಿದ್ಯಾರ್ಥಿಯ ಪೋಟೋ.
  • ವಿದ್ಯಾರ್ಥಿಯ ಶಾಲಾ ವ್ಯಾಸಂಗ ಪ್ರಮಾಣ ಪತ್ರ.
  • ವಿದ್ಯಾರ್ಥಿ ಪೋಷಕರ ಆದಾಯ ಪ್ರಮಾಣ ಪತ್ರ.
  • ಪೋಷಕರ ವಾಹನ ಚಾಲನಾ ಪರವಾನಗಿ ಪತ್ರ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: