HDFC Scholarship-HDFC ಬ್ಯಾಂಕ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

September 19, 2025 | Siddesh
HDFC Scholarship-HDFC ಬ್ಯಾಂಕ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!
Share Now:

ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಅನೇಕ ವಿದ್ಯಾರ್ಥಿವೇತನಗಳು ಪ್ರಸ್ತುತ ಜಾರಿಯಲ್ಲಿದ್ದು ಇದೇ ಮಾದರಿಯಲ್ಲಿ HDFC ಬ್ಯಾಂಕ್ ವತಿಯಿಂದ HDFC Bank Parivartan's ECSS Programme ವಿದ್ಯಾರ್ಥಿವೇತನ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ.

HDFC Bank Parivartan ಸ್ಕಾಲರ್ಶಿಪ್ ಕಾರ್ಯಕ್ರಮ ತುಂಬಾ ವಿಶೇಷವಾಗಿದ್ದು ಈ ಕಾರ್ಯಕರ್ಮದಡಿಯಲ್ಲಿ 1ನೇ ತರಗತಿಯಿಂದ ಪದವಿ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

ಈ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎನ್ನುವ ಮಾಹಿತಿ ಸೇರಿದಂತೆ ವಿದ್ಯಾರ್ಥಿವೇತನವನ್ನು ಪಡೆಯಲು ಅಗತ್ಯವಿರುವ ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹರಿರುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.

ತರಗತಿವಾರು ವಿದ್ಯಾರ್ಥಿವೇತನದ ಮೊತ್ತ ಎಷ್ಟು?

HDFC Bank Parivartan ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಈ ಕೆಳಗಿನ ಪಟ್ಟಿಯಲ್ಲಿರುವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು ತರಗತಿವಾರು ವಿದ್ಯಾರ್ಥಿವೇತನದ ಮೊತ್ತ ಎಷ್ಟು? ಎನ್ನುವ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

  • 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ- ರೂ 15,000/-
  • 7 ರಿಂದ 12 ನೇ ತರಗತಿ ಮತ್ತು ITI,Diploma ವಿದ್ಯಾರ್ಥಿಗಳಿಗೆ- ರೂ 18,000/-
  • ಪದವಿ ವಿದ್ಯಾರ್ಥಿಗಳಿಗೆ- ರೂ 35,000/-
  • ವೃತ್ತಿಪರ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ- ರೂ 75,000/-

ಇದನ್ನೂ ಓದಿ: Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Scholarship Last Date-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 30 ಅಕ್ಟೋಬರ್ 2025

Who Can Apply HDFC Bank Parivartan's Scholarship- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳು:

ವಿದ್ಯಾರ್ಥಿಯು ಭಾರತೀಯ ನಿವಾಸಿಯಾಗಿರಬೇಕು.

1ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳು,ITI,ಡಿಪ್ಲೋಮಾ ವಿದ್ಯಾರ್ಥಿಗಳು,ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ (Classes 1 to 12, or pursuing diploma, ITI, and polytechnic courses in private, government, or government-aided schools.M.Com,M.A, M.Tech, M.B.A,B.Com., B.Sc., B.A., B.C.A., etc., and professional courses such as B.Tech., M.B.B.S., L.L.B., B.Arch., Nursing) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಿದ್ಯಾರ್ಥಿಯು ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ₹2.5 ಲಕ್ಷದ ಒಳಗಿರಬೇಕು.

ಸರ್ಕಾರಿ,ಅನುದಾನಿತ,ಖಾಸಗಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

UGC ಯಿಂದ ಮಾನ್ಯತೆ ಪಡೆಯಲು ಎಲ್ಲಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಇದನ್ನೂ ಓದಿ: Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

How To Apply For Scholarship-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಮುಗಿಯುವುದರ ಒಳಗಾಗಿ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ವಿದ್ಯಾರ್ಥಿಯು ಮೊದಲಿಗೆ ಈ HDFC Scholarship ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ www.buddy4study.com ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Azim Premji Foundation-ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ವಿದ್ಯಾರ್ಥಿನಿಯರಿಗೆ ₹30,000 ಸ್ಕಾಲರ್‌ಶಿಪ್!

HDFC Bank Parivartan Scholarship

ಇದನ್ನೂ ಓದಿ: Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Step-2: ತದನಂತರ ಈ ಪೇಜ್ ನಲ್ಲಿ ತರಗತಿವಾರು ಅನುಗುವಾಗಿ ಅರ್ಜಿ ಸಲ್ಲಿಸಲು "Apply Now" ಬಟನ್ ತೋರಿಸುತ್ತದೆ ಇದರಲ್ಲಿ ನಿಮ್ಮ ಶಿಕ್ಷಣಕ್ಕೆ ಅನುಗುಣವಾಗಿ ಒಂದನ್ನು ಆಯ್ಕೆ ಮಾಡಿಕೊಂಡು "Apply Now" ಬಟನ್ ಮೇಲೆ ಒತ್ತಿ “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚಿಸಿಕೊಳ್ಳಬೇಕು ಬಳಿಕ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಮಾಡಿಕೊಳ್ಳಲು ಅಗತ್ಯ ವಿವರವನ್ನು ಹಾಕಿ ಲಾಗಿನ್ ಮಾಡಿ.

Step-3: ಲಾಗಿನ್ ಅದ ನಂತರ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಇಲ್ಲಿ ಕೇಳುವ ಎಲ್ಲಾ ಅಗತ್ಯ ಮಾಹಿತಿ ಮತ್ತು ಅವಶ್ಯಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: Free Bike Repair Training-ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Documents For Scholarship-ಅರ್ಜಿ ಸಲ್ಲಿಸಲು ದಾಖಲೆಗಳು:

ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಒದಗಿಸಬೇಕಾದ ಅವಶ್ಯಕ ದಾಖಲೆಗಳ ಪಟ್ಟಿ ಹೀಗಿದೆ:

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar
  • ವಿದ್ಯಾರ್ಥಿಯ ಪೋಟೋ/Photo
  • ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್/Markscard
  • ವಿದ್ಯಾರ್ಥಿಯ ಶಾಲಾ-ಕಾಲೇಜು ವ್ಯಾಸಂಗ/ಪ್ರವೇಶ ಪ್ರಮಾಣ ಪತ್ರ/Study Certificate
  • ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ/Income Certificate
  • ವಿದ್ಯಾರ್ಥಿಯ ಮೊಬೈಲ್ ನಂಬರ್/Mobile Number
  • ವಿದ್ಯಾರ್ಥಿಯ ಇ-ಮೇಲ್ ವಿಳಾಸ/Email

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: