Swavalambi Sarathi Application-ಸ್ವಾವಲಂಬಿ ಸಾರಥಿ ವಾಹನ ಖರೀದಿ ಮಾಡಲು ₹ 3.0 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ!

September 23, 2025 | Siddesh
Swavalambi Sarathi Application-ಸ್ವಾವಲಂಬಿ ಸಾರಥಿ ವಾಹನ ಖರೀದಿ ಮಾಡಲು ₹ 3.0 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ!
Share Now:

2025-26 ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆ(Swavalambi Sarathi) ಅಡಿಯಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama) ಪ್ರಸ್ತುತ ಈ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ನಿರುದ್ಯೋಗಿ ಯುವಕರು ಈ ಯೋಜನೆ ಅಡಿ ಸಹಾಯಧನದಲ್ಲಿ ಟ್ಯಾಕ್ಸಿ /ಸರಕು ವಾಹನ/ಆಟೋ ರಿಕ್ಷಾವನ್ನು ಖರೀದಿ ಮಾಡಿ ಸ್ವಂತ ಉದ್ಯೋಗವನ್ನು ಆರಂಭಿಸಬಹುದು.

ಇದನ್ನೂ ಓದಿ: U-Go Scholarship-ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ ಅಡಿ ಪದವಿ ವಿದ್ಯಾರ್ಥಿನಿಯರಿಗೆ 40,000 ವಿದ್ಯಾರ್ಥಿವೇತನ!

ಸ್ವಾವಲಂಬಿ ಸಾರಥಿ ಯೋಜನೆ(Swavalambi Sarathi Yojane)ಅಡಿಯಲ್ಲಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Last Date For Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 16 ಅಕ್ಟೋಬರ್ 2025

ಇದನ್ನೂ ಓದಿ: Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

Swavalambi Sarathi Eligibility Criteria-ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಹತಾ ಮಾನದಂಡಗಳು:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ವಿವಿಧ ಬಗ್ಗೆಯ ವಾಹನಗಳನ್ನು ಖರೀದಿ ಮಾಡಲು ನಿಗಮದಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪಟ್ಟಿ ಹೀಗಿದೆ:

  • ಅರ್ಜಿದಾರರು ಕರ್ನಾಟಕ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದವರಾಗಿರಬೇಕು.
  • ಅರ್ಜಿದಾರರು ಕರ್ನಾಟಕದ ಶಾಶ್ವತ ನಿವಾಸಿಯಾಗಿರಬೇಕು.
  • ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
  • ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಅರ್ಜಿದಾರರ ಆದಾಯವು ರೂ. 6,00,000/- ಕ್ಕಿಂತ ಕಡಿಮೆ ಇರಬೇಕು.
  • ಅರ್ಜಿದಾರರು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಚಾಲನಾ ಪರವಾನಗಿ ಹೊಂದಿರಬೇಕು
  • ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ಉದ್ಯೋಗಿಯಾಗಬಾರದು.
  • ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

ಇದನ್ನೂ ಓದಿ: Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

Swavalambi Sarathi

ಇದನ್ನೂ ಓದಿ: Jati Ganati Samikshe-ರಾಜ್ಯಾದ್ಯಂತ ಇಂದಿನಿಂದ ಜಾತಿಗಣತಿ ನಿಮ್ಮ ಬಳಿ ಈ ದಾಖಲೆಗಳನ್ನು ತೆಗೆದಿಟ್ಟುಕೊಳ್ಳಿ!

Online Application For Swavalambi Sarathi-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಮತ್ತು ಆಸಕ್ತ ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಕೆಳಗಿನ ವಿಧಾನಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಅರ್ಜಿದಾರರು ಮೊದಲಿಗೆ "Swavalambi Sarathi Online Application" ಇಲ್ಲಿ ಕ್ಲಿಕ್ ಮಾಡಿ "ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ" ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪುಟದಲ್ಲಿ ಕೆಳಗೆ ಕಾಣುವ "ಸ್ವಾವಲಂಬಿ ಸಾರಥಿ ಯೋಜನೆ" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ನಂತರ ಈ ಪುಟದಲ್ಲಿ ಕಾಣುವ "ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

Required Documents For Application-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಪ್ರಯೋಜನವನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ:

  • ಆಧಾರ್ ಕಾರ್ಡ್ ಪ್ರತಿ.
  • ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ.
  • ಆದಾಯ ಪ್ರಮಾಣಪತ್ರ.
  • ವಾಹನ ಚಾಲನಾ ಪರವಾನಗಿ ಪ್ರತಿ.
  • ಬ್ಯಾಂಕ್ ಪಾಸ್ ಬುಕ್ ಪ್ರತಿ.
  • ವಾಹನದ ಅಂದಾಜು ದರಪಟ್ಟಿ.
  • ಸ್ವಯಂ ಘೋಷಣೆ ಪತ್ರ.

Helpline Number-ಸಹಾಯವಾಣಿ- 8277799990

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: