Business Loan-ಶ್ರಮಶಕ್ತಿ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ರೂ 50,000/- ಸಹಾಯಧನ!

September 24, 2025 | Siddesh
Business Loan-ಶ್ರಮಶಕ್ತಿ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ರೂ 50,000/- ಸಹಾಯಧನ!
Share Now:

2025-26 ನೇ ಸಾಲಿನ ಶ್ರಮಶಕ್ತಿ ಸಾಲ ಯೋಜನೆ(Shramashakti Sala Yojane) ಅಡಿಯಲ್ಲಿ ಸಣ್ಣ ವ್ಯಾಪಾರವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama) ಪ್ರಸ್ತುತ ಶ್ರಮಶಕ್ತಿ ಸಾಲ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ನಿರುದ್ಯೋಗಿ ಯುವಕರು ಈ ಯೋಜನೆ ಅಡಿಯಲ್ಲಿ ಸಬ್ಸಿಡಿಯನ್ನು ಪಡೆದು ಸಣ್ಣ ವ್ಯಾಪಾರವನ್ನು ಆರಂಭಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Swavalambi Sarathi Application-ಸ್ವಾವಲಂಬಿ ಸಾರಥಿ ವಾಹನ ಖರೀದಿ ಮಾಡಲು ₹ 3.0 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ!

ಶ್ರಮಶಕ್ತಿ ಸಾಲ ಯೋಜನೆಯಡಿ(Shramashakti Sala Yojane Application)ಯಾರೆಲ್ಲ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಶ್ರಮಶಕ್ತಿ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ಸಾಲದ ಮೇಲೆ ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು "16 ಅಕ್ಟೋಬರ್ 2025" ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: U-Go Scholarship-ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ ಅಡಿ ಪದವಿ ವಿದ್ಯಾರ್ಥಿನಿಯರಿಗೆ 40,000 ವಿದ್ಯಾರ್ಥಿವೇತನ!

Shrama Shakti Sala Yojane Subsidy-ಶ್ರಮಶಕ್ತಿ ಸಾಲ ಯೋಜನೆ ಅಡಿಯಲ್ಲಿ ಎಷ್ಟು ಸಬ್ಸಿಡಿ ಪಡೆಯಬಹುದು?

ಈ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತ ವರ್ಗದ ಕುಲಕಸುಬುದಾರರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ದಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ದಿಗೊಳಿಸುವ ಸಲುವಾಗಿ, ನಿಗಮದಿಂದ ಕಡಿಮೆ ಬಡ್ಡಿದರದಲ್ಲಿ ರೂ.50,000/- ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ಇದರಲ್ಲಿ ಶೇ.50 ರಷ್ಟು ಸಾಲವನ್ನು ಮತ್ತು ಶೇ.50 ರಷ್ಟು ಸಹಾಯಧನವಾಗಿರುತ್ತದೆ.

How Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
  • ಎಲ್ಲಾ ಮೂಲಗಳಿಂದ ಅರ್ಜಿದಾರರ ವಾರ್ಷಿಕ ಆದಾಯ ರೂ. 6,00,000/- ಗಿಂತ ಕಡಿಮೆ ಇರಬೇಕು.
  • ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.
  • ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

ಇದನ್ನೂ ಓದಿ: Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

Business Loan

ಇದನ್ನೂ ಓದಿ: Jati Ganati Samikshe-ರಾಜ್ಯಾದ್ಯಂತ ಇಂದಿನಿಂದ ಜಾತಿಗಣತಿ ನಿಮ್ಮ ಬಳಿ ಈ ದಾಖಲೆಗಳನ್ನು ತೆಗೆದಿಟ್ಟುಕೊಳ್ಳಿ!

Online Apply Method-ಅರ್ಜಿ ಸಲ್ಲಿಸುವುದು ಹೇಗೆ?

Step-1: ಅಭ್ಯರ್ಥಿಗಳು ಪ್ರಥಮದಲ್ಲಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ "Shrama Shakti Sala Yojane Online Application" ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ನಂತರ ಇಲ್ಲಿ ಗೋಚರಿಸುವ "ಶ್ರಮಶಕ್ತಿ ಸಾಲ ಯೋಜನೆ" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ನಂತರ ಈ ಪುಟದಲ್ಲಿ ಕಾಣುವ "ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

Required Documents For Application-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು?

ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

  • ಆಧಾರ್ ಕಾರ್ಡ್ ಪ್ರತಿ/Aadhar Card
  • ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass Book
  • ಜಾತಿ ಮತ್ತು ಆದಾಯ ಪ್ರಮಾಣಪತ್ರ/Caste And Income Certificate
  • ಅರ್ಜಿದಾರರ ಪೋಟೋ/Photo
  • ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ/Self Declaration
  • ಯೋಜನಾ ವರದಿ/DPR
  • ಸ್ವಯಂ ಘೋಷಣೆ ಪತ್ರ/Self Declaration

ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಹಾಯವಾಣಿ ಸಂಖ್ಯೆ- 8277799990
ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: