Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

September 30, 2025 | Siddesh
Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!
Share Now:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ(Canara Bank) ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಗ್ರಾಮೀಣ ಮತ್ತು ನಗರ ಭಾಗದ ನಿರುದ್ಯೊಗಿ ಯುವತಿ/ಮಹಿಳೆಯರಿಗೆ ತಮ್ಮ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಕೆನರಾ ಬ್ಯಾಂಕ್ ಸಹಯೋಗದಲ್ಲಿ ಸ್ಥಾಪಿಸಿರುವ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಮೂಲಕ ವಿವಿಧ ಬಗ್ಗೆಯ ತರಬೇತಿಗಳನ್ನು ಕಾಲ ಕಾಲಕ್ಕೆ ಆಯೋಜನೆ ಮಾಡಲಾಗುತ್ತದೆ ಇದೇ ಮಾದರಿಯಲ್ಲಿ ಪ್ರಸ್ತುತ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್(Beauty Parlour Training)ತರಬೇತಿಯನ್ನು ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯಲ್ಲಿ(Free beauty parlour training course) ಭಾಗವಹಿಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿ ನಡೆಯುವ ಕೇಂದ್ರದ ವಿಳಾಸ ಯಾವುದು? ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳೇನು? ಇನ್ನಿತರೆ ಅವಶ್ಯಕ ಮಾಹಿತಿಯನ್ನು ಇಂದಿನ ಲೇಖನದಲ್ಲಿ ವಿವರಿಸಲಾಗಿದೆ.

Free Beauty Parlour Training Duration-ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಅವಧಿ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಿಂದ ಮಹಿಳೆಯರಿಗೆ ದಿನಾಂಕ: 06 ಅಕ್ಟೋಬರ್ 2025 ರಿಂದ ಒಟ್ಟು 35 ದಿನಗಳ ಕಾಲ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

Who Can Participate-ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು?

  • ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.
  • ಗ್ರಾಮೀಣ ಭಾಗದ ಮಹಿಳೆಯರಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
  • ಅಭ್ಯರ್ಥಿಯು ತರಬೇತಿಯನ್ನು ಪಡೆದ ಬಳಿಕ ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
  • ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Beauty Parlour Training

ಇದನ್ನೂ ಓದಿ: Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

Free Beauty Parlour Training Center-ತರಬೇತಿ ನಡೆಯುವ ಕೇಂದ್ರದ ವಿಳಾಸ:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

Free Beauty Parlour Training Certificate-ಪ್ರಮಾಣ ಪತ್ರ ವಿತರಣೆ:

ಅಭ್ಯರ್ಥಿಗಳು ತರಬೇತಿಯನ್ನು ಪಡೆದ ಬಳಿಕ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

Free Beauty Parlour Course-ತರಬೇತಿಗೆ ಯಾವುದೇ ಶುಲ್ಕವಿಲ್ಲ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಪ್ರಸ್ತುತ ಆಯೋಜನೆ ಮಾಡಿರುವ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಈ ತರಬೇತಿಗೆ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ, ಇದಲ್ಲೇ ಶಿಬಿರಾರ್ಥಿಗಳಿಗೆ ತರಬೇತಿ ಕೇಂದ್ರದಲ್ಲೇ ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

Beauty Parlour Interview-ನೇರ ಸಂದರ್ಶನ:

ಆಸಕ್ತಿಯುಳ್ಳ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ನೇರವಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬಹುದು ಅಥವಾ ಕೆಳಗೆ ನೀಡಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತರಬೇತಿಯಲ್ಲಿ ಭಾಗವಹಿಸುವುದರ ಕುರಿತು ಅಗತ್ಯ ಮಾಹಿತಿಯನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 9686248369, 8970446644, 9505894247 ಗಳಿಗೆ ಸಂಪರ್ಕಿಸಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Caste Survey-ಮೊಬೈಲ್ ನಲ್ಲೇ ಜಾತಿಗಣತಿ ಸಮೀಕ್ಷೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Documents For Beauty Parlour Training-ತರಬೇತಿಯಲ್ಲಿ ಭಾಗವಹಿಸಲು ಅವಶ್ಯಕ ದಾಖಲೆಗಳು:

ಅರ್ಹ ಅರ್ಜಿದಾರರು ಉಚಿತ ಬ್ಯೂಟಿ ಪಾರ್ಲರ್ ತರಬೇತಿಯಲ್ಲಿ ಭಾಗವಹಿಸಲು ಅವಶ್ಯಕ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

  • ಅರ್ಜಿದಾರರ ಅಧಾರ್ ಕಾರ್ಡ/Aadhar.
  • ಅರ್ಜಿದಾರರ ಪೋಟೋ/Photo.
  • ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass Book.
  • ಅರ್ಜಿದಾರ ಕುಟುಂಬದ ರೇಶನ್ ಕಾರ್ಡ ಪ್ರತಿ/Ration Card.
  • ಮೊಬೈಲ್ ಸಂಖ್ಯೆ/Mobile Number.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: