Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

September 30, 2025 | Siddesh
Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!
Share Now:

ಬೆಂಗಳೂರು: ರಾಜ್ಯ ಸರಕಾರದ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವರ್ಷಗಳ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷ ಸಡಿಲಿಕೆ ಮಾಡಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.

ಕಳೆದ ವಾರ ದಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ ಪ್ರತಿಭಟನೆ ಬೆನ್ನಲ್ಲೇ ರಾಜ್ಯ ಸರಕಾರವು ಅನೇಕ ವಿದ್ಯಾರ್ಥಿಗಳ ಬೇಡಿಕೆಯ ಪ್ರಕಾರ ರಾಜ್ಯ ಸರ್ಕಾರದ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

ಒಳ ಮೀಸಲಾತಿ ಕಾರಣಕ್ಕೆ ನೇಮಕಾತಿ ತಡೆ ಹಿನ್ನೆಲೆಯಿಂದ ಅನ್ಯಾಯಕ್ಕೆ ಒಳಗಾದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಈ ಕ್ರಮವನ್ನು ತೆಗೆದುಕೊಳ್ಳಲಾಗಿದ್ದು ಈ ಕುರಿತು ಹೊರಡಿಸಿರುವ ಅಧಿಕೃತ ಆದೇಶದ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ಸಡಿಲಿಕೆ:

ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ಸಡಿಲಿಕೆ ಉದ್ಯೋಗ ಆಕಾಂಕ್ಷಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ‌ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

2 ವರ್ಷ ನೇಮಕಾತಿ ಸಡಿಲಿಕೆ ಆದೇಶ ವಾಪಸ್ ಪಡೆದ‌ ಸರ್ಕಾರ ಒಳಮೀಸಲಾತಿ ಜಾರಿಯಾಗುವವರೆಗೆ ನೇಮಕಾತಿ ತಡೆದಿದ್ದರಿಂದ ಈ ಕ್ರಮ ಉದ್ಯೋಗ ಆಕಾಂಕ್ಷಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ವಯೋಮಿತಿ ಸಡಲಿಕೆಗೆ ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಮೂರು ವರ್ಷ ಸಡಿಲಿಕೆಗೆ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಯಾವೆಲ್ಲ ವರ್ಷದ ನೇಮಕಾತಿಗೆ ಈ ಆದೇಶ ಅನ್ವಯ?

ರಾಜ್ಯ ಸರಕಾರ ಪ್ರಸ್ತುತ ಹೊರಡಿಸಿರುವ ಆದೇಶದ ಪ್ರಕಾರ 2025ರ ಸೆಪ್ಟೆಂಬರ್ 29 ರಿಂದ 2027ರ ಡಿಸೆಂಬರ್ 31ರ ವರೆಗಿನ ನೇಮಕಾತಿಗಳಿಗೆ ಈ ಆದೇಶವು ಅನ್ವಯವಾಗುತ್ತದೆ.

ಅಧಿಕೃತ ಆದೇಶದ ಪ್ರತಿಗಳು:

Employment age relaxation
job

ಇದನ್ನೂ ಓದಿ: Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

ಸರ್ಕಾರ ಮನವಿ ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿದೆ. ಇದಲ್ಲದೆ, 2025ರ ಸೆಪ್ಟೆಂಬರ್ 6ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 2027ರ ಡಿಸೆಂಬರ್ 31ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: