Anganavadi Worker Recruitment-ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ!

October 8, 2025 | Siddesh
Anganavadi Worker Recruitment-ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ!
Share Now:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ(Anganavadi Recruitment) ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಮೂರು ಜಿಲ್ಲೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ(Anganwadi Job Application) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇಂದಿನ ಅಂಕಣದಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳೇನು? ಅಗತ್ಯ ದಾಖಲಾತಿಗಳಾವುವು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Sukanya Samriddhi Yojane- ಪೋಸ್ಟ್ ಆಫೀಸ್‌ನಲ್ಲಿ ಅತೀ ಹೆಚ್ಚು ಬಡ್ಡಿ ನೀಡುವ ಯೋಜನೆ!

Education Qualification Anganwadi Recruitment-ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ:

  • ಅಂಗನವಾಡಿ ಕಾರ್ಯಕರ್ತೆ(Anganwadi Teacher): ಕನಿಷ್ಠ 12ನೇ ತರಗತಿ (ಪಿಯುಸಿ) ಉತ್ತೀರ್ಣರಾಗಿರಬೇಕು.
  • ಅಂಗನವಾಡಿ ಸಹಾಯಕಿ(Anganwadi Helper): ಕನಿಷ್ಠ 10ನೇ ತರಗತಿ (ಎಸ್‌ಎಸ್‌ಎಲ್‌ಸಿ) ಉತ್ತೀರ್ಣರಾಗಿರಬೇಕು.

Age Limit For Anganwadi Job-ಅರ್ಜಿ ಸಲ್ಲಿಸಲು ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಒಳಗಿರಬೇಕು.

ಸರ್ಕಾರಿ ನಿಯಮಗಳಂತೆ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

Anganwadi Job Details-ಯಾವೆಲ್ಲ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ?

ಪ್ರಸ್ತುತ ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ ಒಟ್ಟು ಮೂರು ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

How To Apply For Anganwadi Job-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಎರಡು ವಿಧಾನವನ್ನು ಅನುಸರಿಸಬಹುದು ಒಂದು ಅಗತ್ಯ ದಾಖಲೆಗಳನ್ನು ತೆಗೆದಿಕೊಂಡು ನೇರವಾಗಿ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ karnemakaone.kar.nic.in ವೆಬ್ಸೈಟ್ ಅನ್ನು ಪ್ರವೇಶ ಮಾಡಿ ನೀವೇ ಸ್ವಂತ ನಿಮ್ಮ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

Anganwadi Recruitment Online Application-ಅರ್ಜಿ ಸಲ್ಲಿಸುವ ಹಂತಗಳು:

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡಲು ಆಸಕ್ತಿಯನ್ನು ಹೊಂದಿರುವ ಆಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ತಮ್ಮ ಮೊಬೈಲ್ ನಲ್ಲೇ ಅರ್ಜಿಯನ್ನು ಸಲ್ಲಿಸಬಹುದು.

Step-1: ಅಭ್ಯರ್ಥಿಗಳು ಮೊದಲಿಗೆ ಇಲ್ಲಿ ಕ್ಲಿಕ್ "Apply Now" ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಬಳಿಕ ಇಲ್ಲಿ "ಚಿಕ್ಕಮಗಳೂರು/ದಕ್ಷಿಣಕನ್ನಡ/ಉಡುಪಿ" ಈ ಮೂರು ಜಿಲ್ಲೆಯಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ನಂತರ ತಾಲೂಕು, ಅಧಿಸೂಚನೆ ಸಂಖ್ಯೆ ಸೆಲೆಕ್ಟ್ ಮಾಡಿ ತದನಂತರ "ಜಾತಿ ಪ್ರಮಾಣ ಪತ್ರದ ಆರ್ ಡಿ ಸಂಖ್ಯೆ ನಮೂದಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ಯಾವೆಲ್ಲ ಗ್ರಾಮದಲ್ಲಿ ಹುದ್ದೆಗಳು ಖಾಲಿ ಇವೆ ಎನ್ನುವ ಮಾಹಿತಿ ತೋರಿಸುತ್ತದೆ.

ಇದನ್ನೂ ಓದಿ: Bike Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! 30 ದಿನದ ಉಚಿತ ಬೈಕ್ ರಿಪೇರಿ ತರಬೇತಿ!

Anganavadi Worker Recruitment

Step-3: ಇದಾದ ಬಳಿಕ ಈ ಪೇಜ್ ನಲ್ಲಿ ಹಳ್ಳಿವಾರು ಖಾಲಿಯಿರುವ ಹುದ್ದೆಯ ವಿವರ ತೋರಿಸುತ್ತದೆ ಇದರಲ್ಲಿ ಒಂದನ್ನು ಕ್ಲಿಕ್ ಮಾಡಿಕೊಂಡು ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿರುವ "Preview" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಬಳಿಕ ದಾಖಲೆ ಅಪ್‌ಲೋಡ್ ವಿಭಾಗದಲ್ಲಿ ಇತ್ತೀಚಿನ ಛಾಯಾಚಿತ್ರ, ಸಹಿ, ಮತ್ತು ಇತರ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ನಮ್ತರ ಅರ್ಜಿ ಶುಲ್ಕ: ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು (ಅನ್ವಯವಾದರೆ) ಆನ್‌ಲೈನ್ ಮೂಲಕ ಪಾವತಿಸಿ ಕೊನೆಯಲ್ಲಿ ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ "Submit" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

Required Documents For Anganwadi Recruitment-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

  • ಆಧಾರ್‌ ಕಾರ್ಡ್ ಮತ್ತು ಮೊಬೈಲ್‌
  • ವಾಸ ಸ್ಥಳ ದೃಢೀಕರಣ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಫೋಟೊ ಮತ್ತು ಸಹಿ
  • ಕಾರ್ಯಕರ್ತೆ ಹುದ್ದೆಗೆ SSLC & PUC Marks card
  • ಸಹಾಯಕಿ ಹುದ್ದೆಗೆ SSLC Marks card

ಇದನ್ನೂ ಓದಿ: Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

Candidate selection method-ಅಭ್ಯರ್ಥಿಯ ಆಯ್ಕೆ ವಿಧಾನ:

ಅಭ್ಯರ್ಥಿಗಳ ಆಯ್ಕೆಯು ಮೆರಿಟ್ ಲಿಸ್ಟ್ (ಅಂಕಗಳ ಆಧಾರದ ಮೇಲಿನ ಶ್ರೇಯಾಂಕ ಪಟ್ಟಿ) ಮೂಲಕ ನಡೆಯಲಿದೆ. ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಅಥವಾ ಸಂಬಂಧಿತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

Anganavadi Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now
Anganavadi Recruitment Guidelines- ಅಧಿಕೃತ ಮಾರ್ಗಸೂಚಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: Download Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: