SSLC Exam Fee-ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಏರಿಕೆ! ಎಷ್ಟು ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ?

October 9, 2025 | Siddesh
SSLC Exam Fee-ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಏರಿಕೆ! ಎಷ್ಟು ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ?
Share Now:

2025-26 ನೇ ಸಾಲಿನಲ್ಲಿ SSLC ಪರೀಕ್ಷೆಯನ್ನು ಬರೆಯಲ್ಲಿರುವ ವಿದ್ಯಾರ್ಥಿಗಳಿಗೆ ಪ್ರರೀಕ್ಷಾ ಶುಲ್ಕವನ್ನು(SSLC Exam Fee) ರಾಜ್ಯ ಸರಕಾರವು ಪರಿಷ್ಕರಿಸಿ ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಇಂದಿನ ಅಂಕಣದಲ್ಲಿ ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅಂಶಗಳ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ(Karnataka SSLC Board) ಪ್ರತಿ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರಾಜ್ಯಾದ್ಯಂತ ಅಚ್ಚುಕಟ್ಟಾಗಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಈ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಯನ್ನು ಬರೆಯಲು ಪ್ರರೀಕ್ಷಾ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಈ ಶುಲ್ಕವನ್ನು ಮಂಡಳಿಯಿಂದ ಹೆಚ್ಚಳ ಮಾಡಲಾಗಿದೆ.

ಇದನ್ನೂ ಓದಿ: Sukanya Samriddhi Yojane- ಪೋಸ್ಟ್ ಆಫೀಸ್‌ನಲ್ಲಿ ಅತೀ ಹೆಚ್ಚು ಬಡ್ಡಿ ನೀಡುವ ಯೋಜನೆ!

ಇಂದಿನ ಅಂಕಣದಲ್ಲಿ ಎಸ್ಸೆಸ್ಸೆಲ್ಸಿ ಪ್ರರೀಕ್ಷಾ ಶುಲ್ಕವು ಕಳೆದ ವರ್ಷ ಎಷ್ಟಿತ್ತು? ಈ ವರ್ಷ ಎಷ್ಟು ನಿಗದಿ ಮಾಡಲಾಗಿದೆ? ಇನ್ನಿತರೆ ವಿವರವಾದ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ.

SSLC Exam Fee Information-ಅಂಕಣದ ಮುಖ್ಯಾಂಶಗಳು:

  • ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪರೀಕ್ಷಾ ಶುಲ್ಕ ಹೆಚ್ಚಳ.
  • 2025-26ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪರೀಕ್ಷಾ ಶುಲ್ಕ ಶೇ.5ರಷ್ಟು ಶುಲ್ಕ ಹೆಚ್ಚಳ ಮಾಡಿದ ಮಂಡಳಿ
  • ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ರೂ 676 ನಿಂದ ರೂ 710 ಏರಿಕೆ.
  • ನೋಂದಣಿಯಾಗಿ ಶುಲ್ಕ ಪಾವತಿಸಿದ ಖಾಸಗಿ ಅಭ್ಯರ್ಥಿ ನೋಂದಣಿ ನವೀಕರಣ ಶುಲ್ಕ 72 ರೂ ಪಾವತಿ ಮಾಡಬೇಕು.

ಇದನ್ನೂ ಓದಿ: Anganavadi Worker Recruitment-ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ!

SSLC Exam 2025-ಬೆಲೆ ಏರಿಕೆ ಬಿಸಿಯಲ್ಲೇ ಶುಲ್ಕದ ಬಿಸಿ:

ಈಗಾಗಲೇ ದಿನ ನಿತ್ಯ ಬಳಕೆ ವಸ್ತುಗಳ ಬೆಲೆ ಹೆಚ್ಚುತ್ತಿರುವ ಜೊತೆಗೆ ಶಾಲಾ ಪ್ರವೇಶ ಶುಲ್ಕವು ಸಹ ಹೆಚ್ಚಿದ್ದು ಇದರ ಜೊತೆಗೆ ಪ್ರರೀಕ್ಷಾ ಶುಲ್ಕವು ಹೆಚ್ಚಳ ಮಾಡಿರುವುದರಿಂದ ಪೋಷಕರಿಕೆ ಮತ್ತೊಂದು ಬೆಲೆ ಏರಿಕೆ ಬಿಸಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿದೆ.

SSLC Exam Details-ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ:

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯುಂಟಾಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಡಿದೆ. ಮಂಡಳಿಯ ಈ ನಿರ್ಧಾರದ ಬಗ್ಗೆ ಪೋಷಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಪರೀಕ್ಷಾ ಶುಲ್ಕ 676 ರೂ.ನಿಂದ 710 ರೂ. ಏರಿಕೆ ಮಾಡಲಾಗಿದೆ. ಖಾಸಗಿ ಮತ್ತು ಪುನಾವರ್ತಿತ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೂ ಪರೀಕ್ಷಾ ಶುಲ್ಕ ಏರಿಕೆ ಬಿಸಿ ತಟ್ಟಿದೆ.

ಇದನ್ನೂ ಓದಿ: Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

SSLC Exam Fee Hike-ಶೇ5% ರಷ್ಟು ಶುಲ್ಕ ಹೆಚ್ಚಳ:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆ ಬಿಸಿ ನೀಡಿದೆ. 2025 - 26 ನೆ ಸಾಲಿನ SSLC ಪರೀಕ್ಷಾ ಶುಲ್ಕ ಪರಿಷ್ಕರಣೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಿದ್ದು, ಈ ಹಿಂದೆ ಇದ್ದ ಶುಲ್ಕಕ್ಕೆ ಹೆಚ್ಚುವರಿಯಾಗಿ ಶೇ.5ರಷ್ಟು ಶುಲ್ಕ ಹೆಚ್ಚಳ ಮಾಡಿದೆ.

ಪರೀಕ್ಷಾ ಶುಲ್ಕ 710 ರೂ.ಗೆ ಏರಿಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರೀಕ್ಷಾ ಶುಲ್ಕವನ್ನು ಶೇ.5ರಷ್ಟು ಹೆಚ್ಚಿಸಿದೆ. ಇದರಿಂದಾಗಿ ಪರೀಕ್ಷಾ ಶುಲ್ಕ 676 ರೂ.ನಿಂದ 710 ರೂ.ಗೆ ಏರಿಕೆಯಾಗಲಿದೆ. ಖಾಸಗಿ ಶಾಲೆಯ ವಿದ್ಯಾರ್ಥಿಗಳು, ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಎಲ್ಲರಿಗೂ ಈ ಹೆಚ್ಚಳದ ಬಿಸಿ ತಟ್ಟಲಿದೆ.

ಇದನ್ನೂ ಓದಿ: Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

ಈಗಾಗಲೇ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಹೊಸ ನಿಯಮದಂತೆ, ಖಾಸಗಿ ಅಭ್ಯರ್ಥಿಗಳ ಶುಲ್ಕ 236 ರೂ.ನಿಂದ 248 ರೂ.ಗೆ ಹೆಚ್ಚಳವಾಗಿದೆ. ಅಲ್ಲದೆ, ಈಗಾಗಲೇ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಯಾಗಿ ಶುಲ್ಕ ಪಾವತಿಸಿದವರ ನೋಂದಣಿ ನವೀಕರಣ ಶುಲ್ಕವನ್ನು 69 ರೂ.ನಿಂದ 72 ರೂ.ಗೆ ಏರಿಸಲಾಗಿದೆ.

Karnataka SSLC Exam Fee-ಪರಿಷೃತ ಪರೀಕ್ಷಾ ಶುಲ್ಕದ ವಿವರ ಹೀಗಿದೆ:

SSLC Exam Fee

ಇದನ್ನೂ ಓದಿ: Bike Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! 30 ದಿನದ ಉಚಿತ ಬೈಕ್ ರಿಪೇರಿ ತರಬೇತಿ!

SSLC-ಯಾರು ಎಷ್ಟು ಶುಲ್ಕ ಪಾವತಿ ಮಾಡಬೇಕು?

ಪುನರಾವರ್ತಿತ ವಿದ್ಯಾರ್ಥಿಗಳಿಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಒಂದು ವಿಷಯಕ್ಕೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳು 427 ರೂ.ನಿಂದ 448 ರೂ. ಪಾವತಿಸಬೇಕು. ಎರಡು ವಿಷಯಗಳಿಗೆ 532 ರೂ.ನಿಂದ 559 ರೂ.ಗೆ, ಹಾಗೂ ಮೂರು ಅಥವಾ ಅದಕ್ಕಿಂತ ಹೆಚ್ಚು ವಿಷಯಗಳಿಗೆ 716 ರೂ.ನಿಂದ 752 ರೂ.ಗೆ ಶುಲ್ಕವನ್ನು ಹೆಚ್ಚಿಸಲಾಗಿದೆ. ಈ ಎಲ್ಲಾ ಬದಲಾವಣೆಗಳು 2025-26ನೇ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.‌

Karnataka SSLC Board-ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: