Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

October 12, 2025 | Siddesh
Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!
Share Now:

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ(Karnataka State Brahmin Development Board) "ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ(Self-Employment Direct Loan Yojana)" ಗರಿಷ್ಟ ₹2.0 ಲಕ್ಷ ಸಾಲ ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಪಡೆದು ವಿವಿಧ ಬಗ್ಗೆಯ ಸ್ವಂತ ಉದ್ಯೋಗವನ್ನು ಆರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ(Self-Employment Direct Loan) ಅತೀ ಕಡಿಮೆ ಅಂದರೆ ಶೇ 4% ಬಡ್ಡಿದರಲ್ಲಿ ಸಾಲವನ್ನು ಪಡೆಯಲು ಅವಕಾಶವಿದ್ದು ಇದಲ್ಲದೇ ಸಾಲದ ಮೇಲೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸಬ್ಸಿಡಿಯಲ್ಲಿ ಸಹ ಪಡೆಯಲು ಅವಕಾಶವಿದೆ. ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಮತ್ತು ಅವಶ್ಯಕ ದಾಖಲೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇನ್ನಿತರೆ ಅವಶ್ಯಕ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

Vipra Self-Employment Direct Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಉದ್ದೇಶವೇನು?

ಈಗಾಗಲೇ ರಾಜ್ಯದಲ್ಲಿ ಧರ್ಮ ಮತ್ತು ವಿವಿಧ ವರ್ಗವಾರು 10 ಕ್ಕೂ ಹೆಚ್ಚಿನ ನಿಗಮಗಳು ಅಸ್ತ್ವಿತವದಲ್ಲಿದ್ದು ಇದೇ ಮಾದರಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ- ಸಹಾಯಧನ ಮಂಜೂರು ಮಾಡಲು ಈ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

Self-Employment Loan Scheme Subsidy-ಎಷ್ಟು ಸಬ್ಸಿಡಿ-ಸಾಲ ನೀಡಲಾಗುತ್ತದೆ?

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಅಡಿಯಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕನಿಷ್ಠ ರೂ.1.00 ಲಕ್ಷ ಹಾಗೂ ಗರಿಷ್ಠ ರೂ.2.00 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುತ್ತದೆ.

ಈ ಮೊತ್ತದಲ್ಲಿ ಶೇ.20% ರಷ್ಟು ಸಬ್ಸಿಡಿ ಮತ್ತು ಉಳಿದ ಶೇ.80% ರಷ್ಟು ಮೊತ್ತಕ್ಕೆ ವಾರ್ಷಿಕ ಶೇ.4% ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ ಎಂದು ಮಂಡಳಿಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉದಾಹರಣೆಗೆ ನೀವೇನಾದರು ಈ ಯೋಜನೆಯಡಿ 1.0 ಲಕ್ಷ ಸಾಲ ಪಡೆದರೆ ರೂ 20,000/- ಸಬ್ಸಿಡಿ ಪಡೆಯಬಹುದು, ಅದೇ ರೀತಿ 2.0 ಲಕ್ಷ ಸಾಲ ಪಡೆದರೆ ರೂ 40,000/- ಸಬ್ಸಿಡಿ ಪಡೆಯಬಹುದು, ಉಳಿದ ಶೇ 80% ರಷ್ಟು ಅದರೆ ರೂ 1,60,000/- ಲಕ್ಷಕ್ಕೆ ವಾರ್ಷಿಕ ಶೇ 4% ರ ಬಡ್ಡಿ ದರದಲ್ಲಿ ಸಾಲವನ್ನು ಒದಗಿಸಲಾಗುತ್ತದೆ.

ಇದನ್ನೂ ಓದಿ: Bajaj scholarship 2025-ಇಂಜಿನಿಯರಿಂಗ್ ವಿದ್ಯಾರ್ಥಿನಿಯರಿಗೆ 8 ಲಕ್ಷ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

Vipra Self-Employment Loan Scheme Details-ಯಾವೆಲ್ಲ ಉದ್ದಿಮೆಯನ್ನು ಪ್ರಾರಂಭಿಸಬಹುದು?

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಅಡಿಯಲ್ಲಿ ಸಹಾಯಧನದಲ್ಲಿ ಸಾಲವನ್ನು ಪಡೆದು ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಅವಕಾಶವಿರುತ್ತದೆ.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 31 ಅಕ್ಟೋಬರ್ 2025

Who Can Apply For Vipra Self-Employment Scheme-ಅರ್ಜಿ ಸಲ್ಲಿಸಲು ಅರ್ಹರು:

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಅಡಿಯಲ್ಲಿ ಸಹಾಯಧನದಲ್ಲಿ ಸಾಲವನ್ನು ಪಡೆದು ತಮ್ಮದೇ ಅದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಈ ಕೆಳಗಿನ ಪಟ್ಟಿಯಲ್ಲಿ ನೀಡಿರುವ ಅರ್ಹತೆಯನ್ನು ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು ಎಂದು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

  • ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (EWS ಪ್ರಮಾಣ ಪತ್ರ) ಹೊಂದಿರಬೇಕು.
  • ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಅರ್ಜಿದಾರರ ವಯಸ್ಸು 18 ರಿಂದ 65 ವರ್ಷದ ಒಳಗಿನವರಾಗಿರಬೇಕು.
  • ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
  • ಮಹಿಳೆಯರಿಗೆ 33% ಮೀಸಲಾತಿಯನ್ನು ನೀಡಲಾಗುವುದು (ಈ 33% ಮೀಸಲಾತಿಯಲ್ಲಿ ವಿಧವೆಯರು, ವಿಚ್ಛೇದಿತ ಮಹಿಳೆಯರು ಹಾಗೂ ತೃತೀಯ ಲಿಂಗಿಗಳಿಗೆ ಶೇ 50% ರಷ್ಟು ಮೀಸಲಾತಿಯನ್ನು ನೀಡಲಾಗುವುದು)
  • ವಿಶೇಷಚೇತನರಿಗೆ ಶೇ 5% ಮೀಸಲಾತಿ ನೀಡಲಾಗುತ್ತದೆ.
  • ಅರ್ಜಿದಾರರ ಆಧಾರ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಸೀಡ್ ಆಗಿರಬೇಕು.

ಇದನ್ನೂ ಓದಿ: Vidyasiri Scholarship 2025-ವಿದ್ಯಾ ಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

Brahmin Development Board Yoajna

ಇದನ್ನೂ ಓದಿ: Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

Online Application-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಅವಶ್ಯಕ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನೀವೆ ಸ್ವಂತ ನಿಮ್ಮ ಮೊಬೈಲ್ ನಲ್ಲಿ ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಮಂಡಳಿಯ ಜಾಲತಾಣವನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Required Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು ಯಾವುವು?

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಅಡಿಯಲ್ಲಿ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲೆಗಳ ವಿವರ ಹೀಗಿದೆ:

  • ಅಭ್ಯರ್ಥಿಯ ಆಧಾರ್ ಕಾರ್ಡ
  • ಗುರುತಿನ ಚೀಟಿ/ವೋಟರ್ ಐಡಿ ಕಾರ್ಡ
  • ವ್ಯಾಪಾರ ಪರವಾನಗಿ ಪತ್ರ
  • ಯೋಜನಾ ವರದಿ
  • ಬ್ಯಾಂಕ್ ಪಾಸ್ ಬುಕ್
  • ಅಭ್ಯರ್ಥಿಯ ಪೋಟೋ
  • ಮೊಬೈಲ್ ನಂಬರ್

ಇದನ್ನೂ ಓದಿ: SSLC Exam Fee-ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಏರಿಕೆ! ಎಷ್ಟು ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ?

Karnataka State Brahmin Development Board Website- ಹೆಚ್ಚಿನ ಮಾಹಿತಿಯನ್ನು ಪಡೆಯಲು ಮಂಡಳಿಯ ಅಧಿಕೃತ ಜಾಲತಾಣ-Click Here
Helpline Numbers-ಸಹಾಯವಾಣಿ- 080-29605888

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: