ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 5 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 26, 2024 | Siddesh
ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 5 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
Share Now:

ರಾಜ್ಯ ಸರಕಾರದ ಅದೀನದಲ್ಲಿ ಕಾರ್ಯ ನಿರ್ವಹಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಂದ 5 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ  ಸಮ್ಮಾನ ಯೋಜನೆಯಡಿ ವಾರ್ಷಿಕ 5 ಸಾವಿರ ಅರ್ಥಿಕ ನೆರವನ್ನು ಪಡೆಯಬಹುದಾಗಿದೆ.

ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: PM awas scheme-ಸ್ವಂತ ಮನೆ ಕಟ್ಟುವವರಿಗೆ PM Awas ಯೋಜನೆಯಡಿ1.2 ಲಕ್ಷ ಸಬ್ಸಿಡಿ!

ಅರ್ಜಿ ಸಲ್ಲಿಸಲು ಅರ್ಹರು ಯಾರು?

ಪ್ರಸಕ್ತ ಸಾಲಿನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ನೋಂದಣಿ ಮಾಡಿಕೊಂಡಿರುವ ನೇಕಾರರು ಸಮ್ಮಾನ ಯೋಜನೆಯಡಿ ವಾರ್ಷಿಕ 5 ಸಾವಿರ ಅರ್ಥಿಕ ನೆರವನ್ನು ಪಡೆಯಬಹುದಾಗಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು? 

ಈ ಅಂಕಣದಲ್ಲಿ ತಿಳಿಸಿರುವ ಅಗತ್ಯ ದಾಖಲೆಗಳನ್ನು ಸಿದ್ದಡಿಸಿಕೊಂಡು ಅರ್ಹ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: GTTC ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಅವಧಿ ವಿಸ್ತರಣೆ!

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ.
2) ಪೋಟೋ
3) ಬ್ಯಾಂಕ್ ಪಾಸ್ ಬುಕ್.
4) ನೇಕಾರ ಪ್ರಮಾಣ ಪತ್ರ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಅಕ್ಟೋಬರ್ 2024 ಅಗಿರುತ್ತದೆ.

ಕೈಮಗ್ಗ ಮತ್ತು ಜವಳಿ ಇಲಾಖೆ ಹಿನ್ನೆಲೆ:

ಕೈಮಗ್ಗ ಮತ್ತು ಜವಳಿ ಇಲಾಖೆಯು 1991-92 ನೇ ಸಾಲಿನಿಂದ ಪ್ರತ್ಯೇಕವಾಗಿ ಕಾರ್ಯ ನಿರ್ವಹಿಸುತ್ತಿರುತ್ತದೆ. ಇಲಾಖೆಯ ಮುಖ್ಯ ಉದ್ದೇಶ ಕೈಮಗ್ಗ ಮತ್ತು ವಿದ್ಯುತ್‍ಮಗ್ಗ ಕ್ಷೇತ್ರವನ್ನು ಅಭಿವೃದ್ದಿಪಡಿಸುವ ಗುರಿ ಹೊಂದಲಾಗಿದೆ ಹಾಗೂ ಜವಳಿ ಕ್ಷೇತ್ರದಲ್ಲಿ ಬಂಡವಾಳ ಹೂಡುವ ಸಣ್ಣ, ಅತಿ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳು ಬಂಡವಾಳ ಹೂಡುವುದಕ್ಕೆ ಮತ್ತು ಉದ್ಯೋಗ ಸೃಜನೆಗಾಗಿ ಉತ್ತೇಜಿಸಲಾಗುತ್ತಿದೆ. 

ಇದನ್ನೂ ಓದಿ: Navodaya admission- 6ನೇ ತರಗತಿಯಿಂದ 12ನೇ ತರಗತಿ ತನಕ ಸಂಪೂರ್ಣ ಉಚಿತ ಶಿಕ್ಷಣ! ನವೋದಯ ಶಾಲೆ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಅಹ್ವಾನ!

ಕರ್ನಾಟಕ ರಾಜ್ಯವು ಹೆಚ್ಚು ರೇಷ್ಮೆ ಉತ್ಪಾದಿಸುತ್ತಿದ್ದು ದೇಶದ ಶೇ.65ರಷ್ಟು ಪಾಲು ಕರ್ನಾಟಕದ್ದಾಗಿರುತ್ತದೆ. ಅದೇ ರೀತಿ ರಾಜ್ಯದಲ್ಲಿ ಹೆಚ್ಚು ಹತ್ತಿ ಉತ್ಪಾದನೆ ಮಾಡುತ್ತಿದ್ದು,ಸುಮಾರು 20.00 ಲಕ್ಷ ಬೇಲ್‍ಗಳ ಹತ್ತಿಯನ್ನು ವಾರ್ಷಿಕವಾಗಿ ಉತ್ಪಾದನೆಯಾಗುತ್ತಿದೆ. ಅದೇ ರೀತಿ ಕರ್ನಾಟಕ ರಾಜ್ಯವು ಸಿದ್ದ ಉಡುಪು ಘಟಕಗಳಲ್ಲಿ ಭಾರತದ ಒಟ್ಟು ಉತ್ಪಾದನೆಯಲ್ಲಿ ಶೇ.20ರಷ್ಟು ಸಿದ್ದ ಉಡುಪು ಉತ್ಪಾದನೆಯನ್ನು ಮಾಡುತ್ತಿದೆ.

Helpline-ಸಂಪರ್ಕಿಸಿ: 080 235 61628

website- ಇಲಾಖೆ ವೆಬ್ಸೈಟ್: Click here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: