Aditya Birla Scholarship-ಆದಿತ್ಯ ಬಿರ್ಲಾ ಫೌಂಡೇಶನ್ ನ ವತಿಯಿಂದ ₹ 30,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

November 15, 2025 | Siddesh
Aditya Birla Scholarship-ಆದಿತ್ಯ ಬಿರ್ಲಾ ಫೌಂಡೇಶನ್ ನ ವತಿಯಿಂದ ₹ 30,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
Share Now:

ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನ ವತಿಯಿಂದ 2025-26 ನೇ ಸಾಲಿನ ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿವೇತನದ(Aditya Birla Foundation Scholarship) ಅಡಿಯಲ್ಲಿ ಪದವಿ ಪೂರ್ವ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ₹ 30,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನವು ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಅನ್ವೇಷಣೆಯಲ್ಲಿ ಬೆಂಬಲ ನೀಡಲು ಬದ್ಧವಾಗಿದೆ. (Scholarship for students India)ಹಣಕಾಸಿನ ನೆರವು ಮತ್ತು ರಚನಾತ್ಮಕ ಮಾರ್ಗದರ್ಶನ ಎರಡನ್ನೂ ಒದಗಿಸುವ ಮೂಲಕ, ಅರ್ಹ ವಿದ್ಯಾರ್ಥಿಗಳು ಆರ್ಥಿಕ ಅಡಚಣೆಗಳಿಲ್ಲದೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಸಹಾಯಕಾರಿಯಾಗಿದೆ.

ಇದನ್ನೂ ಓದಿ: PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರ‍ೆಲ್ಲ ಅರ್ಹರಿರುತ್ತಾರೆ? ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Who Can Apply-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ‍ ವಿದ್ಯಾರ್ಥಿನಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಭಾರತದ ಮಾನ್ಯತೆ ಪಡೆದ ಸರ್ಕಾರಿ ಕಾಲೇಜುಗಳಲ್ಲಿ ಮೂರು ವರ್ಷಗಳ ಸಾಮಾನ್ಯ ಪದವಿಪೂರ್ವ ಕೋರ್ಸ್‌ಗಳನ್ನು ಅನುಸರಿಸುತ್ತಿರುವ ಪ್ರತಿಭಾನ್ವಿತ ಬಾಲಕಿಯರಿಗೆ ಮಾತ್ರ ಮುಕ್ತವಾಗಿದೆ .

ಅಭ್ಯರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು .

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ. 6 ಲಕ್ಷ ಮೀರಬಾರದು.

ಆದಿತ್ಯ ಬಿರ್ಲಾ ಕ್ಯಾಪಿಟಲ್ ಲಿಮಿಟೆಡ್ , ಅದರ ಅಂಗಸಂಸ್ಥೆಗಳು ಮತ್ತು ಬಡ್ಡಿ4ಸ್ಟಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Nikon India scholarship-ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Last Date To Apply-ಅರ್ಜಿ ಸಲ್ಲಿಸಲು ಮುಕ್ತಾಯದ ದಿನಾಂಕ: 07 ಡಿಸೆಂಬರ್ 2025

Scholorship Amount-ಈ ಯೋಜನೆಯ ಅಡಿಯಲ್ಲಿ ಪಡೆದುಕೊಳ್ಳುವ ಪ್ರಯೋಜನಗಳು?

ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನ ಅಡಿಯಲ್ಲಿ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ಒಂದು ವರ್ಷಕ್ಕೆ ₹ 30,000 ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳುವ ಅವಕಾಶವಿರುತ್ತದೆ.

Documents Required-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card
  • ವಿದ್ಯಾರ್ಥಿನಿಯ ಹಿಂದಿನ ತರಗತಿ ಅಂಕಪಟ್ಟಿ/Marks Card
  • ವಿದ್ಯಾರ್ಥಿನಿಯ ಪ್ರಸ್ತುತ ವರ್ಷದ ಶುಲ್ಕ ರಶೀದಿ/Student's current year's fee receipt
  • ವಿದ್ಯಾರ್ಥಿನಿಯ ಶೈಕ್ಷಣಿಕ ವೆಚ್ಚಗಳ ರಸೀದಿಗಳು/Student's educational expenses receipts
  • ವಿದ್ಯಾರ್ಥಿನಿಯ ಬ್ಯಾಂಕ್ ಪಾಸ್‌ಬುಕ್‌ ಪ್ರತಿ/Bank Passbook
  • ವಿದ್ಯಾರ್ಥಿನಿಯ ಆದಾಯ ಪ್ರಮಾಣ ಪತ್ರ/Income Certificate
  • ವಿದ್ಯಾರ್ಥಿನಿಯ ಮೊಬೈಲ್ ನಂಬರ್/Mobile number
  • ವಿದ್ಯಾರ್ಥಿನಿಯ ಫೋಟೊ/Photocopy

ಇದನ್ನೂ ಓದಿ: Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

birla foundation

ಇದನ್ನೂ ಓದಿ: KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

How To Apply-ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ:

ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನ ಅಡಿಯಲ್ಲಿ ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಅರ್ಹ ಅಭ್ಯರ್ಥಿಗಳು ಮೊದಲಿಗೆ ಈ ಲಿಂಕ್ "Online Application" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ ಅದೇ ಪುಟದಲ್ಲಿ ಕಾಣುವ ನಿಕಾನ್ ವಿದ್ಯಾರ್ಥಿವೇತನ ಆಯ್ಕೆಯ ಮುಂದೆ ಕಾಣಿಸುವ "Apply Now" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ತದನಂತರ "Not Registered Yet ? Create an account" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಎಲ್ಲಾ ವಿವರವನ್ನು ಭರ್ತಿ ಮಾಡಿ User Id ಮತ್ತು Password ಅನ್ನು ಸಿದ್ದ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು.

Step-4: ಬಳಿಕ ಅರ್ಜಿ ನಮೂನೆಯು ಓಪನ್ ಆಗುತ್ತದೆ ಅಲ್ಲಿ ಕೇಳುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: Krishi Mela Bengalure-2025: ಬೆಂಗಳೂರು ಜಿಕೆವಿಕೆಯಲ್ಲಿ ಇಂದಿನಿಂದ 4 ದಿನ ಕೃಷಿ ಮೇಳ!

More Information-ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: