Rolls Royce India Scholarship-ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 16, 2025 | Siddesh
Rolls Royce India Scholarship-ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Share Now:

2025-2026 ನೇ ಸಾಲಿನ ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ರೋಲ್ಸ್ ರಾಯ್ಸ್ ವಿಂಗ್ಸ್4ಹೆರ್ ಮಹಿಳಾ ಎಂಜಿನಿಯರಿಂಗ್(Engineering students scholarship India) ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನದ ಅಡಿಯಲ್ಲಿ 35,000 ರೂಪಾಯಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಭಾರತದಾದ್ಯಂತ AICTE- ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ(scholarship India)1 ನೇ, 2 ನೇ ಅಥವಾ 3 ನೇ ವರ್ಷದ ಪದವಿಪೂರ್ವ ಎಂಜಿನಿಯರಿಂಗ್ ಕಾರ್ಯಕ್ರಮಗಳಲ್ಲಿ ದಾಖಲಾದ ಮಹಿಳಾ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಈ ವಿದ್ಯಾರ್ಥಿವೇತನದ ಪ್ರಶಸ್ತಿ ಪಡೆದವರು ತಮ್ಮ ಎಂಜಿನಿಯರಿಂಗ್ ಅಧ್ಯಯನದಕ್ಕೆ ಅವರ ಶೈಕ್ಷಣಿಕ ವೆಚ್ಚಗಳನ್ನು ಬರಿಸಲು 35,000 ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: Udyogini Yojane-ರಾಜ್ಯ ಮಹಿಳಾ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

ಪ್ರಸ್ತುತ ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರ‍ೆಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಯಾವೆಲ್ಲ ಹಂತಗಳನ್ನು ಅನುಸರಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ಅವಶ್ಯಕ ದಾಖಲಾತಿಗಳಾವುವು? ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

Last Date To Apply-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 30 ನವೆಂಬರ್ 2025

Scholorship Amount-ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆದುಕೊಳ್ಳಬಹುದು?

ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ಮಹಿಳ ವಿದ್ಯಾರ್ಥಿನಿಯರಿಗೆ 35,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Aditya Birla Scholarship-ಆದಿತ್ಯ ಬಿರ್ಲಾ ಫೌಂಡೇಶನ್ ನ ವತಿಯಿಂದ ₹ 30,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Eligibility Critiria On this Scholorship-ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರಿರುತ್ತಾರೆ?

ಅರ್ಜಿದಾರ ಅಭ್ಯರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಅಭ್ಯರ್ಥಿಯು ಏರೋಸ್ಪೇಸ್, ​​ಕಂಪ್ಯೂಟರ್, ಎಲೆಕ್ಟ್ರಾನಿಕ್ಸ್, ಮೆರೈನ್ ಇತ್ಯಾದಿ ಕ್ಷೇತ್ರಗಳಲ್ಲಿ 1ನೇ, 2ನೇ ಅಥವಾ 3ನೇ ವರ್ಷದಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಮಹಿಳಾ ವಿದ್ಯಾರ್ಥಿಗಳು ಅರ್ಹರಿರುತ್ತಾರೆ.

ವಿದ್ಯಾರ್ಥಿಗಳು AICTE-ಮಾನ್ಯತೆ ಪಡೆದ ಸಂಸ್ಥೆಯಲ್ಲಿ ದಾಖಲಾಗಿರಬೇಕು , ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಬೇಕು.

ಅಭ್ಯರ್ಥಿಯು10 ನೇ ತರಗತಿ ಮತ್ತು 12ನೇ ತರಗತಿಯ ಪರೀಕ್ಷೆಗಳಲ್ಲಿ 60% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು .

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 4 ಲಕ್ಷ ಒಳಗಿರಬೇಕು.

ಇದನ್ನೂ ಓದಿ: PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

What Are The Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card

ವಿದ್ಯಾರ್ಥಿಯ 10 ಮತ್ತು 12 ನೇ ತರಗತಿಯ ಅಂಕಪಟ್ಟಿ/Marks Card

ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ/Student's previous year's mark sheet

ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ/Income Certificate

ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್/Mobile Passbook

ವಿದ್ಯಾರ್ಥಿಯ ಮೊಬೈಲ್ ನಂಬರ್/Mobile Number

ವಿದ್ಯಾರ್ಥಿಯ ಫೋಟೊ/Photocopy

ಇದನ್ನೂ ಓದಿ: Nikon India scholarship-ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

ಇದನ್ನೂ ಓದಿ: Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

How To Apply Online Application-ಅರ್ಜಿಯನ್ನು ಸಲ್ಲಿಸುವುದು ಹೇಗೆ?

ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಕೆಳಗೆ ತಿಳಿಸಿರುವ ವಿಧಾನಗಳನ್ನು ಪಾಲನೆ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Step-1: ಅಭ್ಯರ್ಥಿಗಳು ಮೊದಲಿಗೆ ಈ ಲಿಂಕ್ "Online Application" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ಅಧಿಕೃತ ವೆಬ್ಸೈಟ್ ಭೇಟಿ ಮಾಡಿದ ನಂತರ ಇಲ್ಲಿ”Apply Now” ಬಟನ್ ಮೇಲೆ ಕ್ಲಿಕ್ ಮಾಡಿ, ಮೊದಲ ಬಾರಿಗೆ ಈ ವೆಬ್ಸೈತ್ ಗೆ ಭೇಟಿ ಮಾಡುತ್ತಿರುವ ವಿದ್ಯಾರ್ಥಿಗಳು “Create an Account” ಬಟನ್ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು. ನಂತರ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಗೆ ಸಂಬಂದಿಸಿದ ಅಗತ್ಯ ವಿವರವನ್ನು ಹಾಕಿ ಲಾಗಿನ್ ಆಗಬೇಕು.

Step-3: “Login” ಆದ ಬಳಿಕ ಅರ್ಜಿ ನಮೂನೆ ಒಪನ್ ಅಗುತ್ತದೆ. ಇಲ್ಲಿ ಕೇಳುವ ಎಲ್ಲಾ ಅಗತ್ಯ ಮಾಹಿತಿಯನ್ನು ಹಾಕಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

More Information About Scholorship-ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: