Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

November 20, 2025 | Siddesh
Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!
Share Now:

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಳ(Anganwadi Worker Salary Hike) ಮಾಡುವುದರ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿಯನ್ನು ಪ್ರಕಟಿಸಿದ್ದು ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(laxmi hebbalkar) ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಸಮಗ್ರ ಶಿಶು ಅಭಿವೃದ್ದಿ ಯೋಜನೆಯ(ISIDS) ಸುವರ್ಣ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಆಯೋಜನೆ ಮಾಡಿರುವ ಪೂರ್ವಭಾವಿ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಳ(Anganwadi Worker Salary In Karnataka) ಮಾಡುವುದರ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು,ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ ಮಾಡುವುದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಈಗಾಗಲೇ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Loreal India Scholarship-ಲೋರಿಯಲ್ ಇಂಡಿಯಾ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ಪ್ರಸ್ತುತ ಲೇಖನದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಯರಿಗೆ ಗೌರವಧನ ಹೆಚ್ಚಳ(Anganwadi Teacher And Worker Salary Hike News) ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಂಚಿಕೊಂಡಿರುವ ಅಗತ್ಯ ಮಾಹಿತಿ ವಿವರ, ಮತ್ತು ಪ್ರಸುತ್ತ ಯಾವೆಲ್ಲ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸವ ವಿಧಾನ ಹೇಗೆ? ಈ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

Anganwadi Teacher And Worker Salary Hike-ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಗೌರವಧನ ಹೆಚ್ಚಳ:

ರಾಜ್ಯಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಡಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಕೆಲಸವನ್ನು ನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡುವ ಸಂಬಂಧ ಕಳೆದ ಅನೇಕ ವರ್ಷಗಳಿಂದ ಪ್ರತಿಭಟನೆಯನ್ನು ಮಾಡಿಕೊಂಡು ಬರುತ್ತಿದ್ದು, ರಾಜ್ಯ ಸರಕಾರವು ಈ ನಿಟ್ಟಿಯಲ್ಲಿ ಸೂಕ್ತ ಕ್ರಮ ಕೈಗೊಂಡಿರಲಿಲ್ಲ,

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಸಮಗ್ರ ಶಿಶು ಅಭಿವೃದ್ದಿ ಯೋಜನೆಯ(ISIDS) ಸುವರ್ಣ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಆಯೋಜನೆ ಮಾಡಿರುವ ಪೂರ್ವಭಾವಿ ಕಾರ್ಯಕ್ರಮದಲ್ಲಿ ಗೌರವಧನ ಹೆಚ್ಚಳದ ಕುರಿತು ಮಾತನಾಡಿದ್ದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರಿಗೆ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಳೆದ ಹಿಂದಿನ ಬಜೆಟ್ ನಲ್ಲಿ ₹1000/- ಗೌರವಧನವನ್ನು ಹೆಚ್ಚಿಸಲಾಗಿತ್ತು, ಇದೇ ಮಾದರಿಯಲ್ಲಿ ಮುಂದಿನ ಬಜೆಟ್ ನಲ್ಲಿ ಮತ್ತೆ ₹1000/- ಗೌರವಧನವನ್ನು ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

"ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನವನ್ನು ಇನ್ನೂ ₹1 ಸಾವಿರ ಹೆಚ್ಚಿಸಲಾಗುವುದು. ಈ ಮೊದಲು 2017ರಲ್ಲಿ ₹2 ಸಾವಿರ ಗೌರವಧನ ಏರಿಸಲಾಗಿತ್ತು. ಈ ಬಾರಿಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ₹1 ಸಾವಿರ ಹೆಚ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ₹1 ಸಾವಿರ ಜಾಸ್ತಿ ಮಾಡಲಾಗುವುದು" ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: PM Kisan Status-ಇಂದು ರೈತರ ಖಾತೆಗೆ ಪಿಎಂ ಕಿಸಾನ್ ಹಣ ಬಿಡುಗಡೆ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

Anganwadi Teacher And Worker Vacancy 2025-ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರಕಾರದಡಿ ಬರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಕಾಲ ಕಾಲಕ್ಕೆ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶವನ್ನು ಮಾಡಿಕೊಡಲಾಗಿದ್ದು ಆಸಕ್ತ ಅಭ್ಯರ್ಥಿಗಳಿಗೆ ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಸ್ವಂತ ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Rolls Royce India Scholarship-ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Anganwadi Worker Salary Hike

Anganavadi Teacher And Worker Requirements-ಯಾವೆಲ್ಲ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ?

ಅರ್ಜಿ ಸಲ್ಲಿಸಲು ಆಸಕ್ತಯನ್ನು ಹೊಂದಿರುವ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವೆಬ್ ಪೇಜ್ ಅನ್ನು ಭೇಟಿ ಮಾಡಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಯಾವೆಲ್ಲ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎನ್ನುವ ಮಾಹಿತಿಯನ್ನು ತಿಳಿಯಬಹುದು.

Step-1: ಅಭ್ಯರ್ಥಿಗಳು ಮೊದಲಿಗೆ ಈ Click Here ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Scholarship e-authentication-ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಇ-ದೃಡೀಕರಣ ಮಾಡುವುದು ಕಡ್ಡಾಯ!

Step-2: ನಂತರ ಇಲ್ಲಿ "Submit Application for the post of Anganawadi Worker/Mini Anganawadi Workers/Anganawadi Helper ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿ" ಈ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

Step-3: ಬಳಿಕ ಈ ಪೇಜ್ ನಲ್ಲಿ ಒಂದೊಂದೇ ಜಿಲ್ಲೆ ಮತ್ತು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡಾಗ Notification ಸಂಖ್ಯೆ ಬಂದು ಮುಂದಿನ ಪೇಜ್ ಪ್ರವೇಶಕ್ಕೆ ಅವಕಾಶ ನೀಡಿದ್ದರೆ ಆ ಜಿಲ್ಲೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಅರ್ಥ.

ಪ್ರಸ್ತುತ ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಯಲ್ಲಿ ಖಾಲಿರುವ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರ ಹುದ್ದೆ ಅರ್ಜಿಯನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.

ಇದನ್ನೂ ಓದಿ: Holiday List 2026-ರಾಜ್ಯ ಸರಕಾರದಿಂದ 2026 ನೇ ವರ್ಷದ ಸರಕಾರಿ ರಜೆ ಪಟ್ಟಿ ಬಿಡುಗಡೆ!

Anganwadi Teacher And Worker Online Application-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಅರ್ಹ ಅರ್ಜಿದಾರರು ಕೆಳಗಿನ ವಿಧಾನವನ್ನು ಅನುಸರಿಸಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲಿಗೆ ಈ "Apply Now" ಲಿಂಕ್ ಮೇಲ್ ಕ್ಲಿಕ್ ಮಾಡಿ ಅಧಿಕೃತ ವೆಬ್‌ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪುಟದಲ್ಲಿ ಅರ್ಜಿಯನ್ನು ಆಹ್ವಾನಿಸಿರುವ ಜಿಲ್ಲೆಯನ್ನು ಉದಾಹರಣೆಗೆ: ಮೈಸೂರು ಆಯ್ಕೆ ಮಾಡಿಕೊಂಡು ತಾಲ್ಲೂಕು ಮತ್ತು ಅಧಿಸೂಚನೆ ಸಂಖ್ಯೆಯನ್ನು ಸೆಲೆಕ್ಟ್ ಮಾಡಿ ನಂತರ ಹುದ್ದೆಯನ್ನು ಆಯ್ಕೆ ಮಾಡಿಕೊಂಡು "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ಮುಂದಿನ ಪೇಜ್ ತೆರೆದುಕೊಳ್ಳುತ್ತದೆ.

ಇದನ್ನೂ ಓದಿ: Dhanashree Yojana-ಧನಶ್ರೀ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ₹ 30,000 ಸಹಾಯಧನಕ್ಕೆ ಅರ್ಜಿ ಆಹ್ವಾನ!

Step-3: ಈ ಪೇಜ್ ನಲ್ಲಿ ಖಾಲಿಯಿರುವ ಸ್ಥಳದ ಮೇಲೆ ಟಿಕ್ ಮಾಡಿದರೆ ಸಾಕು ಅರ್ಜಿ ನಮೂನೆ ತೆರೆದುಕೊಳ್ಳಿತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ವಿವರ ಸಲ್ಲಿಸಿ.

Step-4: ದಾಖಲೆ ಅಪ್‌ಲೋಡ್ ವಿಭಾಗದಲ್ಲಿ: ಇತ್ತೀಚಿನ ಛಾಯಾಚಿತ್ರ, ಸಹಿ, ಮತ್ತು ಇತರ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

Step-5: ಅರ್ಜಿ ಶುಲ್ಕ: ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು (ಅನ್ವಯವಾದರೆ) ಆನ್‌ಲೈನ್ ಮೂಲಕ ಪಾವತಿಸಿ.

Step-6: ಅಂತಿಮ ಸಲ್ಲಿಕೆ: ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ ಅರ್ಜಿಯನ್ನು ಸಲ್ಲಿಸಿ.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲ್ಲೂಕಿನ ಅಥವಾ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ(CDPO) ಕಚೇರಿಯನ್ನು ಭೇಟಿ ಮಾಡಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: