PUC Scholarship-ಧಾರ್ಮಿಕ ದತ್ತಿ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ₹5,000/- ಪ್ರೋತ್ಸಾಹಧನ!

November 21, 2025 | Siddesh
PUC Scholarship-ಧಾರ್ಮಿಕ ದತ್ತಿ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ₹5,000/- ಪ್ರೋತ್ಸಾಹಧನ!
Share Now:

2024-25 ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ(Religious Institutions and Charitable Endowments Department) ಪಿಯುಸಿ ಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು(Scholarship Application) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇಂದಿನ ದಿನಮಾನದಲ್ಲಿ ಬಹುತೇಕ ಎಲ್ಲಾ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಲಾಗುತ್ತದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಉತೇಜನವನ್ನು ನೀಡಲು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ವಿವಿಧ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು(Scholarship Schemes In Karnataka)ಒದಗಿಸಲು ಅರ್ಹ ವಿದ್ಯಾರ್ಥಿಯನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: Nirani Sugars-ನಿರಾಣಿ ಶುಗರ್ಸ್ ವತಿಯಿಂದ ಕಬ್ಬಿನ ದರ ನಿಗದಿ ಕುರಿತು ಅಧಿಕೃತ ಆದೇಶ ಪ್ರಕಟ!

ಧಾರ್ಮಿಕ ದತ್ತಿ ಇಲಾಖೆಯಿಂದ ಪ್ರೋತ್ಸಾಹಧನವನ್ನು ಪಡೆಯಲು ಯಾರೆಲ್ಲ ಅರ್ಜಿ(Scholarship Application) ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇನ್ನಿತರೆ ಅಗತ್ಯ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ.

Karnataka Scholarship Yojana-ತರಗತಿವಾರು ಪ್ರೋತ್ಸಾಹಧನ ವಿವರ ಹೀಗಿದೆ:

ಕರ್ನಾಟಕ ರಾಜ್ಯ ಸರಕಾರದ ಅಡಿ ಬರುವ ಧಾರ್ಮಿಕ ದತ್ತಿ ಇಲಾಖೆವತಿಯಿಂದ ಪಿಯುಸಿ ಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ಒದಗಿಸಲು ಈ ಕೆಳಗಿನಂತೆ ಮೊತ್ತವನ್ನು ನಿಗದಿಪಡಿಸಲಾಗಿದೆ.

1) ಪಿಯುಸಿ/ಪದವಿ ಪೂರ್ವ- ₹5,000/-
2)ಐಟಿಐ/ಜೆಒಸಿ/ಡಿಪ್ಲೊಮಾ- ₹5,000/-
3)ಪದವಿ ಶಿಕ್ಷಣ- ₹7,000/-
4)ಸ್ನಾತ್ತಕೋತ್ತರ ಪದವಿ ಶಿಕ್ಷಣ- ₹15,000/-
5)ಇತರೆ ವೈದ್ಯಕೀಯ ಕೋರ್ಸ್- ₹25,000/-
(ಆಯುವೇದಿಕ್,ಹೋಮಿಯೋಪತಿ ಮತ್ತು ಯುನಾನಿ)
6)ಇಂಜಿನಿಯರಿಂಗ್- ₹25,000/-
7)ವೈದ್ಯಕೀಯ/ಡೆಂಡಲ್ ಶಿಕ್ಷಣ- ₹50,000/-
8)ವಿದೇಶ ವ್ಯಾಸಂಗ- ₹1,00,000/-

ಇದನ್ನೂ ಓದಿ: Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

Last Date ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 31 ಡಿಸೆಂಬರ್ 2025

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಧಾರ್ಮಿಕ ದತ್ತಿ ಇಲಾಖೆವತಿಯಿಂದ ಪ್ರೋತ್ಸಾಹಧನವನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿ ನಿಗದಿಪಡಿಸಿರುವ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಪ್ರಸ್ತುತ ಸಾಲಿನಲ್ಲಿ ಇಲಾಖೆಯಿಂದ ನಿಗದಿಪಡಿಸಿರುವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರ/ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: PM Kisan Status-ಇಂದು ರೈತರ ಖಾತೆಗೆ ಪಿಎಂ ಕಿಸಾನ್ ಹಣ ಬಿಡುಗಡೆ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

PUC Scholarship Application

ಇದನ್ನೂ ಓದಿ: Rolls Royce India Scholarship-ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

How To Apply-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಧಾರ್ಮಿಕ ದತ್ತಿ ಆಯುಕ್ತರ ಕಚೇರಿ/ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ/ತಾಲ್ಲೂಕು ತಹಶಿಲ್ದಾರ್ ಅವರ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ದೃಡೀಕೃತ ದಾಖಲಾತಿಗಳೊಂದಿಗೆ ಆಯಾ ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Loreal India Scholarship-ಲೋರಿಯಲ್ ಇಂಡಿಯಾ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Reqiured Documents For Application-ಅರ್ಜಿ ಸಲ್ಲಿಸಲು ದಾಖಲಾತಿಗಳು:

ಅರ್ಹ ವಿದ್ಯಾರ್ಥಿಗಳು ಸಂಬಂಧಪಟ್ಟ ಇಲಾಖೆಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯ ಜೊತೆಗೆ ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • ಪೋಷಕರ ಉದ್ಯೋಗದ ಗುರುತಿನ ಚೀಟಿ
  • ವಿದ್ಯಾರ್ಥಿ ಬ್ಯಾಂಕ್ ಪಾಸ್ ಬುಕ್
  • ವ್ಯಾಸಂಗ ಪ್ರಮಾಣ ಪತ್ರ
  • ಅಂಕಪಟ್ಟಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್

ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲ್ಲೂಕು/ಜಿಲ್ಲೆಯ ಧಾಮಿಕ ದತ್ತಿ ಇಲಾಖೆಯ ಕಚೇರಿಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸುವುದರ ಕುರಿತು ಮಾಹಿತಿಯನ್ನು ಪಡೆಯಬಹುದು.
ಕಚೇರಿ ದೂರವಾಣಿ ಸಂಖ್ಯೆ- 080-26709689
ಧಾರ್ಮಿಕ ದತ್ತಿ ಇಲಾಖೆ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: