Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

December 12, 2025 | Siddesh
Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!
Share Now:

ರಾಜ್ಯ ಸರಕಾರದಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ(Bele Parihara) ರಾಜ್ಯದ ಒಟ್ಟು 14.21 ಲಕ್ಷ ರೈತರ ಖಾತೆಗೆ ಒಟ್ಟು 2249 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಂಚಿಕೊಂಡಿರುವ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಪ್ರಕಟಿಸಲಾಗಿದೆ.

ಅತೀಯಾದ ಮಳೆಯಿಂದ ಉಂಟಾಗುವ ಬೆಳೆ ಹಾನಿಗೆ ಪರಿಹಾರವನ್ನು ಒದಗಿಸಲು ಕಂದಾಯ ಇಲಾಖೆಯಿಂದ ಪರಿಹಾರ ತಂತ್ರಾಂಶವನ್ನು(Parihara Amount) ಅಭಿವೃದ್ದಿಪಡಿಸಲಾಗಿದ್ದು ಯಾವುದೇ ಮಧ್ಯವರ್ತಿಗೆ ಅವಕಾಶವನ್ನು ನೀಡದೆ ಪಾರದರ್ಶಕವಾಗಿ ಬೆಳೆ ಪರಿಹಾರದ ಹಣವನ್ನು ರೈತರ ಖಾತೆಗೆ ನೇರವಾಗಿ ಡಿಬಿಟಿ(DBT) ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಈ ಬಾರಿ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರ ಖಾತೆಗೆ ಪರಿಹಾರದ ಹಣವನ್ನು ಬಿಡುಗಡೆ ಮಾಡಿರುವ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿಂದು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಸದನಕ್ಕೆ ಮಾಹಿತಿ ಈ ಕುರಿತು ನೀಡಿದರು.

ಇದನ್ನೂ ಓದಿ: Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

ಈ ಲೇಖನದಲ್ಲಿ ರೈತರು ತಮಗೆ ಬೆಳೆ ಹಾನಿ ಪರಿಹಾರದ(Parihara Amount 2025) ಹಣ ಜಮಾ ಅಗಿರುವುದನ್ನು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡುವುದು? ಬೆಳೆ ಹಾನಿಯಾದ ಸಮಯದಲ್ಲಿ ರೈತರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಈ ಬಾರಿ ಎಷ್ಟು ಪ್ರಮಾಣದ ಬೆಳೆ ಹಾನಿ ಪರಿಹಾರವನ್ನು ವಿತರಣೆ ಮಾಡಲಾಗಿದೆ? ಇನ್ನಿತರೆ ಅವಶ್ಯಕ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

Bele Parihara Amount-ಈ ವರ್ಷದ ಮುಂಗಾರು ಹಂಗಾಮಿನಲ್ಲಿ 2,249 ಕೋಟಿ ರೂ. ಬೆಳೆ ಪರಿಹಾರ- ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ(Bele Hani) ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಚಳಿಗಾಲದ ಅಧಿವೇಶನದಲ್ಲಿ ಸದನಕ್ಕೆ ಮಾಹಿತಿಯನ್ನು ತಿಳಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ 86.81 ಲಕ್ಷ ರೈತ ಕುಟುಂಬಗಳಿದ್ದು, 118.5 ಲಕ್ಷ ಹೆಕ್ಟೇರ್ ಮಳೆ ಆಶ್ರಿತ ಪ್ರದೇಶವಿದೆ. ಆದರೆ ರಾಜ್ಯದಲ್ಲಿ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬುದಾಗಿ ಆರೋಪಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, 2023 ರಲ್ಲಿ ಬರ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದಾಗ, ಕೇಂದ್ರ ಸರ್ಕಾರ ನೆರವಿಗೆ ಬರಲಿಲ್ಲ. ನಮ್ಮ ಸರ್ಕಾರ ಸುಪ್ರಿಂಕೋರ್ಟ್ ಮೊರೆಹೋಗಿ ಪರಿಹಾರ ಕೇಳುವ ಪ್ರಸಂಗ ಬರುವಂತಾಯಿತು. ಪರಿಹಾರ ಅನುದಾನಕ್ಕಾಗಿ ಸುಪ್ರಿಂಕೊರ್ಟ್ ಮೊರೆಹೋಗಿ ಅನುದಾನ ಪಡೆದದ್ದು ದೇಶದ ಇತಿಹಾಸದಲ್ಲಿ ದಾಖಲಾಯಿತು.

ಇದನ್ನೂ ಓದಿ: Insurance Scholarship-TATA AIA ಲೈಫ್ ಇನ್ಶುರೆನ್ಸ್ ವತಿಯಿಂದ 15,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

ಈ ಸಂದರ್ಭದಲ್ಲಿ ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಪರಿಹಾರವನ್ನು ನಮ್ಮ ಸರ್ಕಾರ ಕೊಟ್ಟಿದೆ. 38 ಲಕ್ಷ ರೈತರಿಗೆ ಸುಮಾರು 4300 ಕೋಟಿ ರೂ. ಪರಿಹಾರವನ್ನು ನಾವು ಕೊಟ್ಟಿದ್ದೇವೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ ಈಗಾಗಲೇ 2,249 ಕೋಟಿ ರೂ. ಪರಿಹಾರವನ್ನು ನೀಡಿದ್ದೇವೆ. ಸರ್ಕಾರದ ವೈಫಲ್ಯ ಇದ್ದರೆ ಟೀಕೆ ಮಾಡಲಿ, ಆದರೆ ಮಾಡಿದ ಕೆಲಸವನ್ನು ಮಾಡಿಯೇ ಇಲ್ಲ ಎಂದರೆ, ಅದನ್ನು ಕೇಳಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಮುಖ್ಯಮಂತ್ರಿಗಳು ಈಗಾಗಲೇ ಕಂದಾಯ ಸಚಿವರೊಂದಿಗೆ ದೆಹಲಿಗೆ ತೆರಳಿ, ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ವರ್ಷ ರೈತರಿಗೆ ಪರಿಹಾರ ನೀಡಲು ಹಾಗೂ ಅತಿವೃಷ್ಟಿಯಿಂದ ಉಂಟಾದ ಆಸ್ತಿ ಪಾಸ್ತಿಗಳಿಗೆ ಪರಿಹಾರ ಮೊತ್ತ ಸೇರಿದಂತೆ ಕೇಂದ್ರ ಸರ್ಕಾರ ಇದುವರೆಗೂ ಯಾವುದೇ ಅನುದಾನ ಬಿಡುಗೆ ಮಾಡಿಲ್ಲ ಎಂದರು.

ಇದನ್ನೂ ಓದಿ: Old RTC And Mutation-ಮೊಬೈಲ್ ನಲ್ಲೇ ಹಳೆಯ ಪಹಣಿ ಮ್ಯುಟೇಷನ್ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Bele Parihara Farmer List-2025: ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ:

ಕಂದಾಯ ಇಲಾಖೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳೆ ಹಾನಿ ಪರಿಹಾರದ ಹಣವನ್ನು ಪಡೆದಿರುವ ಹಳ್ಳಿವಾರು ರೈತರ ಪಟ್ಟಿಯನ್ನು ಪರಿಹಾರ ತಂತ್ರಾಂಶದಲ್ಲಿ ಬಿಡುಗಡೆ ಮಾಡಲಾಗಿದ್ದು ಇದನ್ನು ರೈತರು ತಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

Step-1: ರೈತರು ಮೊದಲಿಗೆ "Bele Parihara Farmer List" ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಪರಿಹಾರ ವೆಬ್ಸೈಟ್ ಅನ್ನು ಪ್ರವೇಶ ಮಾಡಿ.

Parihara amount

Step-2: ಇದಾದ ನಂತರ ಈ ಪೇಜ್ ನ ಮುಖಪುಟದಲ್ಲಿ ಎಡಬದಿಯಲ್ಲಿ ಕಾಣುವ "Village Wise List" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ನಂತರ ಈ ಪುಟದಲ್ಲಿ ವರ್ಷ ಆಯ್ಕೆಯಲ್ಲಿ- 2025-26, ಋತು- ಮುಂಗಾರು, ವಿಪತ್ತಿನ ವಿಧ- ಪ್ರವಾಹ, ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮವನ್ನು ಆಯ್ಕೆ ಮಾಡಿಕೊಂಡು "ವರದಿ ಪಡೆಯಿರಿ" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯಲ್ಲಿ ಯಾರಿಗೆಲ್ಲ ಬೆಳೆ ಹಾನಿ ಪರಿಹಾರದ ಹಣ ಜಮಾ ಅಗಿದೆ? ಪರಿಹಾರ ಹಣದ ಮೊತ್ತ ಎಷ್ಟು? ಹಣ ಜಮಾ ದಿನಾಂಕ ಯಾವುದು? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀವು ನೋಡಬಹುದು.

ಇದನ್ನೂ ಓದಿ: Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

ಬೆಳೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

ಅನೇಕ ರೈತರಿಗೆ ಬೆಳೆ ಹಾನಿಯಾದ ಸಮಯದಲ್ಲಿ ಬೆಳೆ ಪರಿಹಾರವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಎನ್ನುವ ಕುರಿತು ಸಮರ್ಪಕ ಮಾಹಿತಿ ಇರುವುದಿಲ್ಲ ಈ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ತಿಳಿಸುವ ಪ್ರಯನ್ನವನ್ನು ಮಾಡಲಾಗಿದ್ದು ಇದರ ವಿವರ ಹೀಗಿದೆ:

ಅತೀಯಾದ ಮಳೆಯಿಂದ ಬೆಳೆ ಹಾನಿಯಾದ ಸಮಯದಲ್ಲಿ ತಕ್ಷಣ ರೈತರು ಹಾನಿಯಾದ ಜಮೀನಿನ ಪೋಟೋ ಮತ್ತು ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಬುಕ್, ಜಮೀನಿನ ಪಹಣಿ ಪ್ರತಿಯನ್ನು ತೆಗೆದುಕೊಂಡು ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಮತ್ತು ನಿಮ್ಮ ಹಳ್ಳಿ ವ್ಯಾಪ್ತಿಯ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾದಿಕಾರಿ ಕಚೇರಿ/ಗ್ರಾಮ ಚಾವಡಿಗೆ ಒಂದು ಕೈ ಬರಹದ ಅರ್ಜಿಯನ್ನು ಸಲ್ಲಿಸಿ ಸ್ವೀಕೃತಿಯನ್ನು ಸಲ್ಲಿಸಿ ಬಳಿಕ ಅಧಿಕಾರಿಗಳು ಹಾನಿಯಾದ ಸ್ಥಳವನ್ನು ಭೇಟಿ ಮಾಡಿ ಪರಿಶೀಲನೆ ಕೈಗೊಂಡು ಪರಿಹಾರ ತಂತ್ರಾಂಶದಲ್ಲಿ ನಿಮ್ಮ ಅರ್ಜಿಯನ್ನು ದಾಖಲಿಸಲಾಗುತ್ತದೆ, ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಅನುದಾನ ಬಿಡುಗಡೆ ಅದ ತಕ್ಷಣ ರೈತರ ಖಾತೆಗೆ ನೇರವಾಗಿ ಪರಿಹಾರದ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

ಇದನ್ನೂ ಓದಿ: Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Bele Parihara Wesbite-ಪರಿಹಾರ ವಿತರಣೆಗೆ ತಂತ್ರಾಶ:

ಬೆಳೆ ಹಾನಿ ಪರಿಹಾರದ ಹಣವನ್ನು ರೈತರಿಗೆ ವಿತರಣೆ ಮಾಡಲು ಮಧ್ಯವರ್ತಿಗೆ ಅವಕಾಶವನ್ನು ನೀಡದೇ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ ನೇರವಾಗಿ ರೈತರ ಖಾತೆಗೆ ಬೆಳೆ ಹಾನಿ ಪರಿಹಾರದ ಹಣವನ್ನು ಜಮಾ ಮಾಡಲು ಕಂದಾಯ ಇಲಾಖೆಯಿಂದ Parihara ತಂತ್ರಾಶವನ್ನು ಅಭಿವೃದ್ದಿಪಡಿಸಲಾಗಿದ್ದು, ಪ್ರಥಮ ಹಂತದಲ್ಲಿ ಬೆಳೆ ಹಾನಿಯಾದ ರೈತರ ಅರ್ಜಿಯನ್ನು ಗ್ರಾಮ ಲೆಕ್ಕಾದಿಕಾರಿಗಳು(VA) ಪರಿಹಾರ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲಾಗುತ್ತದೆ ಇದಾದ ಬಳಿಕ ಸರಕಾರದಿಂದ ಅನುದಾನ ಬಿಡುಗಡೆ ಆದ ತಕ್ಷಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು DBT ಮೂಲಕ ವರ್ಗಾವಣೆ ಮಾಡಲಾಗುತ್ತದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: