Women SHG Subsidy-ಮಹಿಳೆಯರಿಗೆ ಗುಡ್ ನ್ಯೂಸ್! ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

December 16, 2025 | Siddesh
Women SHG Subsidy-ಮಹಿಳೆಯರಿಗೆ ಗುಡ್ ನ್ಯೂಸ್! ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!
Share Now:

2025-2026 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್(Women SHG subsidy) ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕ್ರಿಶ್ಚಿಯನ್ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು RBI ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕ ವೆಚ್ಚದ ಶೇ.50 ಅಥವಾ ಗರಿಷ್ಠ ರೂ.2.00 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳನ್ನು ಒದಗಿಸಬೇಕು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಮುಕ್ತಾಯದ ದಿನಾಂಕ ಯಾವುದು? ಈ ಯೋಜನೆಯ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆಯಬಹುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

A. ಯೋಜನೆಯಡಿಯಲ್ಲಿ ಸಬ್ಸಿಡಿ ಪಡೆಯುವ ಸ್ವ-ಸಹಾಯ ಗುಂಪುಗಳು ಕ್ರಿಶ್ಚಿಯನ್‌ ಸಮುದಾಯಕ್ಕೆ ಸೇರಿದ ಮಹಿಳೆಯರಾಗಿರಬೇಕು.

B. ಮಹಿಳಾ ಸ್ವಸಹಾಯ ಸಂಘದ ಸದಸ್ಯರು ರಾಜ್ಯದ ಖಾಯಂ ನಿವಾಸಿಗಳಾಗಿರತಕ್ಕದ್ದು.

C. ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರ ಸಂಖ್ಯೆ 10 ರಿಂದ 20 ರ ಒಳಗಿರಬೇಕು.

D. ಮಹಿಳಾ ಸ್ವಸಹಾಯ ಸಂಘದಲ್ಲಿ ಒಂದು ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶವಿರುತ್ತದೆ.

E. ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಕುಟುಂಬದ ಆದಾಯ ರೂ.6.00 ಲಕ್ಷ ಮೀರಿರಬಾರದು.

F. ಸ್ವಸಹಾಯ ಸಂಘದ ಸದಸ್ಯರ ವಯಸ್ಸು 18 ರಿಂದ 55 ವರ್ಷಗಳ ಒಳಗಿರತಕ್ಕದ್ದು.

ಇದನ್ನೂ ಓದಿ: Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

G. ಸ್ವಸಹಾಯ ಸಂಘವು ಕಡ್ಡಾಯವಾಗಿ ಉಪನೊಂದಾವಣಿ ಅಧಿಕಾರಿಯವರಿಂದ ನೊಂದಣಿಯಾಗಿರತಕ್ಕದ್ದು.

H. ಸ್ವಸಹಾಯ ಸದಸ್ಯರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ ಸರ್ಕಾರದ ಉದ್ಯೋಗಿಗಳಾಗಿರಬಾರದು.

I. ಸಂಘದ ಸದಸ್ಯರು ಅಥವಾ ಅವರ ಕುಟುಂಬದ ಸದಸ್ಯರು ಅರಿವು ಮತ್ತು ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಗಳನ್ನು ಹೊರತುಪಡಿಸಿ ಕಳೆದ 5 ವರ್ಷಗಳಲ್ಲಿ ನಿಗಮದಿಂದ ಯಾವುದೇ ಸಾಲ/ಸಹಾಯಧನ ಸೌಲಭ್ಯ ಪಡೆದಿರಬಾರದು
ಸ್ವಸಹಾಯ ಸಂಘದ ಸದಸ್ಯರು ನಿಗಮದ ಸುಸ್ಥಿದಾರರಾಗಿರಬಾರದು.

J. ಮಹಿಳಾ ಸ್ವಸಹಾಯ ಗುಂಪು ನಿಯಮಿತವಾಗಿ ಸಭೆಗಳನ್ನು ನಡೆಸತಕ್ಕದ್ದು (ಕನಿಷ್ಠ ತಿಂಗಳಿಗೆ ಒಂದು ಸಭೆ)
ಸ್ವಸಹಾಯ ಗುಂಪು ನಿಗದಿತವಾಗಿ ಉಳಿತಾಯ ಮಾಡುವುದು ಮತ್ತು ಸ್ವಸಹಾಯ ಗುಂಪಿನ ಉಳಿತಾಯದ ಮೊತ್ತದಿಂದ ಗುಂಪಿನ ಸದಸ್ಯರಿಗೆ ಅವಶ್ಯಕತೆಗೆ ತಕ್ಕಂತೆ ಆಂತರಿಕ ಸಾಲವನ್ನು ನೀಡುವುದು.

ಇದನ್ನೂ ಓದಿ: Free Embroidery Training-ಮಹಿಳೆಯರಿಗೆ ಸಿಹಿ ಸುದ್ದಿ ಉಚಿತ ಎಂಬ್ರಾಯ್ಡರಿ ಕಲಿಕೆ ತರಬೇತಿ!

K. ಆಂತರಿಕ ಸಾಲದ ಮರುಪಾವತಿಗೆ ಒತ್ತುನೀಡಿ ಸಾಲದ ಮರುಪಾವತಿ ಉತ್ತಮವಾಗಿರುವ ಸ್ವಸಹಾಯ ಸಂಘಗಳಿಗೆ ನಿಗಮದಿಂದ ಸಹಾಯಧನ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದು.

L. ಸ್ವಸಹಾಯ ಗುಂಪಿನ, ದಾಖಲೆ ಪುಸ್ತಕಗಳನ್ನು ಸಮರ್ಪಕವಾಗಿ ನಿರ್ವಹಿಸುವುದು.

M. ನಿಗಮದ ಸಹಾಯಧನ ಪಡೆಯಲು ಸ್ವಸಹಾಯ ಗುಂಪು ರಚನೆಯಾಗಿ ಕನಿಷ್ಠ 6 ತಿಂಗಳಾಗಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಡಿಸೆಂಬರ್ 2025

ಇದನ್ನೂ ಓದಿ: Subsidy Scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ 1.00 ಲಕ್ಷ ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ಸ್ವಸಹಾಯ ಗುಂಪಿನ ಸ್ವಯಂ ಉದ್ಯೋಗ ಚಟುವಟಿಕೆಯ ಯೋಜನಾ ವರದಿ.

ಸ್ವಸಹಾಯ ಗುಂಪಿನ ಬ್ಯಾಂಕ್‌ ಪಾಸ್‌ ಪುಸ್ತಕದ ಪ್ರತಿ.

ಸ್ವ-ಸಹಾಯ ಸಂಘದ ಎಲ್ಲಾ ಸದಸ್ಯರ ಸಾಮೂಹಿಕ ಫೋಟೋ.

ಸ್ವಸಹಾಯ ಸಂಘದ ಸಾಮಾನ್ಯ ಸಭೆ ನಡವಳಿ ಪುಸ್ತಕದ ಪ್ರತಿ.

ಉಪ ನಿಬಂಧಕರು , ಸಹಕಾರ ಇಲಾಖೆ ಇವರಿಂದ ಪಡೆದ ಸಂಘದ ನೋಂದಣಿ ಪತ್ರ.

ಇದನ್ನೂ ಓದಿ: Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

SHG subsidy

ಇದನ್ನೂ ಓದಿ: Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

ಆನ್ಲೈನ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಆಯ್ಕೆಯಾದ ಆಸಕ್ತ ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಈ ಕೆಳಗೆ ತಿಳಿಸಿರುವ ವಿಧಾನಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು.

Step-1: ಮಹಿಳಾ ಅಭ್ಯರ್ಥಿಯು ಮೊದಲಿಗೆ "Online Application" ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ "ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ"ದ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ ಅದೇ ಪುಟದಲ್ಲಿ ಕಾಣುವ "ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ" ಯ ಮುಂದೆ ಕಾಣಿಸುವ "ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ನಿವೇನಾದರು ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿದ್ದರೆ? ಇಲ್ಲಿ ನೋಂದಾಯಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ OTP ಅನ್ನು ಪಡೆದು ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಂಡು Password ಅನ್ನು ಸಿದ್ದ ಮಾಡಿಕೊಂಡು Log In ಆಗಬೇಕು.

Step-4: ಲಾಗಿನ್ ಆದ ನಂತರ ಅಧಿಕೃತ ಅರ್ಜಿ ಪ್ರತಿ ತೆರೆದುಕೊಳ್ಳುತ್ತದೆ. ನಂತರ ಅಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

More Information this Scheme-ಈ ಯೋಜನೆಯ ಬಗ್ಗೆ ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: