Sewing Machine Training-ಮಹಿಳೆಯರಿಗೆ ಗುಡ್ ನ್ಯೂಸ್! 31 ದಿನಗಳ ಉಚಿತ ಹೊಲಿಗೆ ಯಂತ್ರ ತರಬೇತಿ!

December 25, 2025 | Siddesh
Sewing Machine Training-ಮಹಿಳೆಯರಿಗೆ ಗುಡ್ ನ್ಯೂಸ್! 31 ದಿನಗಳ ಉಚಿತ ಹೊಲಿಗೆ ಯಂತ್ರ ತರಬೇತಿ!
Share Now:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದಾವಣಗೆರೆ ಇವರ ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ(Sewing Machine Training) 31 ದಿನಗಳ ಉಚಿತ ಟೈಲರಿಂಗ್ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಲು ಕೋರಿದೆ.

ಈ ಲೇಖನದಲ್ಲಿ ಉಚಿತ ಹೊಲಿಗೆ ಯಂತ್ರ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಹರು? ತರಬೇತಿಯನ್ನು ಎಷ್ಟು ದಿನಗಳ(Holige Yantra Tarabeti) ಕಾಲ ನೆಡೆಸಲಾಗಿದೆ? ತರಬೇತಿಯನ್ನು ಪಡೆಯಲು ಯಾವೆಲ್ಲ ದಾಖಲಾತಿಗಳನ್ನು ಒದಗಿಸಬೇಕು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ತರಬೇತಿ ನಡೆಯುವ ಸ್ಥಳ? ಇನ್ನಿತರ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

ಇಂದಿನ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದ ಗೃಹಿಣಿಯರು, ನಿರುದ್ಯೋಗಿ ಯುವತಿಯರು ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬದವರು ಈ ತರಬೇತಿಯನ್ನು ಪಡೆದ ನಂತರ ಮನೆಯಲ್ಲಿಯೇ ಕುಳಿತು ಆದಾಯ ಗಳಿಸುವ ಅವಕಾಶ, ಸ್ವ-ಉದ್ಯೋಗ ಆರಂಭಿಸುವ ಧೈರ್ಯ ಹಾಗೂ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಉತ್ತನ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.

Eligibility critiria-ಉಚಿತ ಹೊಲಿಗೆ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರ‍ ಅಭ್ಯರ್ಥಿಗೆ ಕನಿಷ್ಟ 18 ವರ್ಷ ಹಾಗೂ 50 ವರ್ಷದ ಒಳಗಿರಬೇಕು.

ಕನ್ನಡ ಓದಲು ಹಾಗೂ ಬರುವಂತವರಿಗೆ ಮಾತ್ರ ಅವಕಾಶವಿರುತ್ತದೆ.

ಅರ್ಜಿದಾರರಿಗೆ ಸ್ವ ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

ಅರ್ಜಿದಾರ ಮಹಿಳೆಯು ಕಡ್ಡಾಯವಾಗಿ ಬಿ ಪಿ ಎಲ್ ಕಾರ್ಡ ಅನ್ನು ಹೊಂದಿರಬೇಕು.

ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ತರಬೇತಿ ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

What are the documents required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ಮಹಿಳೆಯ ಆಧಾರ್ ಕಾರ್ಡ/Aadhar Card.
ರೇಶನ್ ಕಾರ್ಡ/Ration card
ಬ್ಯಾಂಕ್ ಪಾಸ್ ಬುಕ್/Bank Passbook.
ಪಾನ್ ಕಾರ್ಡ/Pan Card
ಪೋಟೋ/Photocopy
ಮೊಬೈಲ್ ನಂಬರ್/Mobile number.

Training duration time-ಹೊಲಿಗೆ ಯಂತ್ರ ತರಬೇತಿಯು ಎಷ್ಟು ದಿನಗಳ ಕಾಲ ನೆಡೆಯುತ್ತದೆ?

ಉಚಿತ ಹೊಲಿಗೆ ಯಂತ್ರ ತರಬೇತಿಯು ದಿನಾಂಕ: 29-12-2025 ರಿಂದ ಪ್ರಾರಂಭವಾಗಿ ದಿನಾಂಕ: 28-01-2026 ರ ವರೆಗೆ ಅಂದರೆ ಒಟ್ಟು 31 ದಿನಗಳ ಕಾಲ ಈ ತರಬೇತಿಯು ನೆಡೆಯುತ್ತದೆ.

ಇದನ್ನೂ ಓದಿ: Parivartan Scholarship-ಪರಿವರ್ತನ್ ಯೋಜನೆಯಡಿ ಪದವಿ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

ಇದನ್ನೂ ಓದಿ: Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

ಊಟ ವಸತಿಯೊಂದಿಗೆ ಸಂಪೂರ್ಣ ಉಚಿತ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಯಿಂದ ಈ ತರಬೇತಿಯನ್ನು ಆಯೋಜಿಸಲಾಗಿದ್ದು, ಒಟ್ಟು 31 ದಿನಗಳವರೆಗೆ ನೆಡೆಯಲಿದ್ದು, ತರಬೇತಿಯಲ್ಲಿ ಭಾಗವಹಿಸುವ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯು ಸಂಪೂರ್ಣ ಉಚಿತವಾಗಿರುತ್ತದೆ.

Training Place-ಹೊಲಿಗೆ ಯಂತ್ರ ತರಬೇತಿ ನಡೆಯುವ ಸ್ಥಳ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ
ರೇಷ್ಮೆ ಇಲಾಖೆ ಆವರಣ, ತೋಳಹುಣಸೆ, ದಾವಣಗೆರೆ

ಇದನ್ನೂ ಓದಿ: PM Surya Ghar Scheme-PM ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್! ಕೂಡಲೇ ಅರ್ಜಿ ಸಲ್ಲಿಸಿ!

How to apply-ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸುವ ವಿಧಾನ?

ತರಬೇತಿಯನ್ನು ಪಡೆಯಲು ಆಸಕ್ತಿ ಇರುವ ಅರ್ಹ ಮಹಿಳಾ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸುವ ಮುಂಚಿತವಾಗಿ ಈ 7975139332, 7019980484, 9481977076, 9964111314 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಹೆಸರುಗಳನ್ನು ರಿಜಿಸ್ಟರ್ ಮಾಡಿಸಿ. ತರಬೇತಿ ಪ್ರಾರಂಭವಾಗುವ ದಿನದಂದು ಲೇಖನದಲ್ಲಿ ತಿಳಿಸಿರುವ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ತರಬೇತಿಯಲ್ಲಿ ಭಾಗವಹಿಸಬೇಕು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: