Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 

December 27, 2025 | Siddesh
Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 
Share Now:

ಆಹಾರ ಇಲಾಖೆಯಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ತಮ್ಮ ಪಡಿತರ ಚೀಟಿ(Ration Card) ವಿವರವನ್ನು ತಿದ್ದುಪಡಿ ಮಾಡಿಕೊಳ್ಳಲು ಈ ತಿಂಗಳ ಕೊನೆಯ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿ ಸಲ್ಲಿಸಲು ಸಾರ್ವಜನಿಕರು ಯಾವೆಲ್ಲ ದಾಖಲಾತಿಗಳನ್ನು(Ration card correction documents) ಅಗತ್ಯವಾಗಿ ಒದಗಿಸಬೇಕು ಮತ್ತು ತಿದ್ದುಪಡಿವಾರು ಯಾವೆಲ್ಲ ದಾಖಲಾತಿಗಳಲ್ಲು ಸಲ್ಲಿಸಬೇಕಾಗುತ್ತದೆ ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Postal Life Insurance-ಪೋಸ್ಟ್ ಆಫೀಸ್ ಲೈಫ್ ಇನ್ಶೂರೆನ್ಸ್ ಕಡಿಮೆ ಕಂತು ಪಾವತಿಸಿ ಹೆಚ್ಚಿನ ಲಾಭ ಪಡೆಯಿರಿ

ಇದಲ್ಲದೇ ಒಮ್ಮೆ ಆನ್ಲೈನ್ ಮೂಲಕ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ ನಂತರ ಪಡಿತರ ಚೀಟಿದಾರರು ತಮ್ಮ ಮೊಬೈಲ್ ನಲ್ಲೇ ಅರ್ಜಿ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎನ್ನುವ ಮಾಹಿತಿಯನ್ನು ಸಹ ಈ ಅಂಕಣದಲ್ಲಿ ತಿಳಿಸಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

Ration card correction documents-ಪಡಿತರ ಚೀಟಿ ತಿದ್ದುಪಡಿವಾರು ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು:

ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳ ಪಟ್ಟಿ.

1) ಮಕ್ಕಳನ್ನು ಸೇರಿಸಲು:

A) 6 ವರ್ಷ ಮೇಲ್ಪಟ್ಟವರನ್ನು ಸೇರಿಸಲು ಆಧಾರ್ ಕಾರ್ಡ್ ಮತ್ತು ಆದಾಯ ಪ್ರಮಾಣ ಪತ್ರ

B) 6 ವರ್ಷ ಕೆಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ ಮತ್ತು ಆಧಾರ್ ಕಾರ್ಡ್

ಇದನ್ನೂ ಓದಿ: Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

2) ಪಡಿತರ ಚೀಟಿನಲ್ಲಿ ವಿಳಾಸ ತಿದ್ದುಪಡಿಗೆ:

ಬದಲಾವಣೆ ಅಗಿರುವ ವಿಳಾಸದ ಪೂರಾವೆ. ಅರ್ಜಿದಾರರ ಮೊಬೈಲ್ ನಂಬರ್ ರೇಷನ್ ಕಾರ್ಡ ಪ್ರತಿ

3) ಸದಸ್ಯರನ್ನು ತೆಗೆದುಹಾಕಲು:

ಮರಣ ದಾಖಲಾತಿ ಪ್ರಮಾಣ ಪತ್ರ

4) ಪಡಿತರ ಚೀಟಿ ಹೊಸ ಸದಸ್ಯರ ಸೇರ್ಪಡೆಗೆ:

ಅರ್ಜಿದಾರ ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ ಪ್ರತಿ, ರೇಷನ್ ಕಾರ್ಡ ಪ್ರತಿ, ಮೊಬೈಲ್ ನಂಬರ್

ಸೂಚನೆ: ಮನೆಯ ಯಜಮಾನಿಯ ಆಧಾರ್ ಕಾರ್ಡ್ ವಿಳಾಸಕ್ಕೆ ರೇಷನ್ ಕಾರ್ಡ್ ವಿಳಾಸ ಹೊಂದಾಣಿಕೆ ಆಗಬೇಕು ಇಲ್ಲದಿದ್ದಲ್ಲಿ ಮನೆಯ ಯಜಮಾನಿಯು ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಖುದ್ದು ಹಾಜರು ಇದ್ದು KYC ಮಾಡಿಕೊಳ್ಳಬೇಕು.

ಇದನ್ನೂ ಓದಿ: Sewing Machine Training-ಮಹಿಳೆಯರಿಗೆ ಗುಡ್ ನ್ಯೂಸ್! 31 ದಿನಗಳ ಉಚಿತ ಹೊಲಿಗೆ ಯಂತ್ರ ತರಬೇತಿ!

Ration card

How to Apply-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅರ್ಜಿದಾರ ಅಭ್ಯರ್ಥಿಗಳು ಅಗತ್ಯ ದಾಖಲೆಯನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ/Grama ಒನ್, ಕರ್ನಾಟಕ ಒನ್ ಕೇಂದ್ರ/Karnataka ಒನ್, ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

Ration Card Status-ಅರ್ಜಿ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳುವ ವಿಧಾನ:

Step-1: ಮೊದಲಿಗೆ ಈ ಲಿಂಕ್ Ration Card Status ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಬಳಿಕ ಈ ಪೇಜ್ ನಲ್ಲಿ "ಇ-ಸ್ಥಿತಿ" ಬಟನ್ ಮೇಲೆ ಕ್ಲಿಕ್ ಮಾಡಿ "ತಿದ್ದುಪಡಿ ವಿನಂತಿಯ ಸ್ಥಿತಿ" ಆಯ್ಕೆ ವಿಭಾಗದಲ್ಲಿ ನಿಮ್ಮ ಜಿಲ್ಲೆಯ ವ್ಯಾಪ್ತಿಯ ವಿಭಾಗದ ಮೇಲೆ ಕ್ಲಿಕ್ ಮಾಡಬೇಕು.

Step-3: ತದನಂತರ ಈ ಪುಟದಲ್ಲಿ "ಪಡಿತರ ಚೀಟಿಯ ಬದಲಾವಣೆ ಕೋರಿಕೆ ಸ್ಥಿತಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಪಡಿತರ ಚೀಟಿಯ ನಂಬರ್ ಮತ್ತು ತಿದ್ದುಪಡಿ ಅರ್ಜಿಯ ಸ್ವೀಕೃತಿ ಸಂಖ್ಯೆಯನ್ನು ನಮೂದಿಸಿ "Go" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ತಿಳಿದುಕೊಳ್ಳಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: