KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!

January 14, 2026 | Siddesh
KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!
Share Now:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು(KSRTC) ನಾಗರಿಕರಿಗೆ ಇನ್ನು ಉತ್ತಮ ಮತ್ತು ಸರಳ ವಿಧಾನವನ್ನು ಅನುಸರಿಸಿ KSRTC ಬಸ್ ನಲ್ಲಿ ಪ್ರಯಾಣಿಸಲು ಮುಂಗಡ ಟಿಕೆಟ್ ಕಾಯ್ದಿರಿಸಲು ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಇದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಈ ಹಿಂದೆ ಸಾರ್ವಜನಿಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನ ಪ್ರಯಾಣಕ್ಕಾಗಿ ರೆಡ್ ಬಸ್ ಅನ್ನು ಹೊರತುಪಡಿಸಿ ಇತರೆ ಬಸ್ ನಲ್ಲಿ ಹೋಗಲು ಮುಂಚಿತವಾಗಿ ಮುಂಗಡ ಟಿಕೆಟ್ ಬುಕ್(KSRTC Online Ticket Booking) ಮಾಡಲು ನಿಗಮದ ವೆಬ್ಸೈಟ್,ಮೊಬೈಲ್ ಆಪ್, ಇಲಾಖಾ ಕೌಂಟರ್‍ಗಳು ಹಾಗೂ ಫ್ರಾಂಚೈಸಿ ಕೌಂಟರ್‍ಗಳ ಮೂಲಕ ಮಾತ್ರ ಟಿಕೆಟ್ ಪಡೆಯಲು ಅವಕಾಶ ನೀಡಲಾಗಿತ್ತು ಅದರೆ ಈಗ ಇದರ ಜೊತೆಗೆ ಇನ್ನೊಂದು ಮಾರ್ಗವನ್ನು ಅನುಸರಿಸಿ ಟಿಕೆಟ್ ಪಡೆಯಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Azeem Premji Scholarship-ಅಜೀಂ ಪ್ರೇಮ್‌ಜಿ ವತಿಯಿಂದ 30,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು KSRTC ಬಸ್ ನಲ್ಲಿ ಪ್ರಯಾಣಿಸಲು ಮುಂಗಡ ಟಿಕೆಟ್ ಕಾಯ್ದಿರಿಸಲು ನೂತನವಾಗಿ ಪರಿಚಯಿಸಿರುವ ವ್ಯವಸ್ಥೆ ಯಾವುದು? ಇದರಿಂದ ಸಾರ್ವಜನಿಕರಿಗೆ ಯಾವೆಲ್ಲ ಲಾಭಗಳಿವೆ? ಇದರ ಪ್ರಯೋಜನವನ್ನು ಪಡೆಯಲು ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು ಯಾವುವು? ಎನ್ನುವ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

KSRTC ಬಸ್ ಮುಂಗಡ ಟಿಕೆಟ್ ಕಾಯ್ದಿರಿಸುವುದು ಇನ್ನು ಭಾರೀ ಸುಲಭ:

ಸಾರ್ವಜನಿಕರು ಈ ಮೊದಲು KSRTC ಬಸ್ ನಲ್ಲಿ ಪ್ರಯಾಣಿಸಲು ಮುಂಗಡ ಟಿಕೆಟ್ ಕಾಯ್ದಿರಿಸಲು KSRTC ವೆಬ್ಸೈಟ್,ಮೊಬೈಲ್ ಆಪ್, ಇಲಾಖಾ ಕೌಂಟರ್ ಗಳು ಹಾಗೂ ಫ್ರಾಂಚೈಸಿ ಕೌಂಟರ್ ಗಳ ಮೂಲಕ ಮುಂಗಡ ಟಿಕೆಟ್ ಪಡೆಯಲು ಮಾತ್ರ ಅವಕಾಶ ಮಾಡಿಕೊಡಲಾಗಿತ್ತು ಅದರೆ ಈಗ ನಾಗರಿಕರು ತಮ್ಮ ಹಳ್ಳಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರಗಳನ್ನು ಭೇಟಿ ಮಾಡಿ ನೇರವಾಗಿ ಈ ಕೇಂದ್ರಗಳಿಂದಲೇ ಮುಂಗಡ ಟಿಕೆಟ್ ಪಡೆಯಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Poultry Shed Subsidy-ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ₹60,000 ಸಹಾಯಧನ!

KSRTC Online Ticket In Karnataka One-ಕೆಎಸ್‌ಆರ್‌ಟಿಸಿ ಬಸ್ ಮುಂಗಡ ಟಿಕೆಟ್ ಬುಕ್ಕಿಂಗ್‌ನ ಹೊಸ ಕ್ರಮದ ವಿವರಗಳು:

ಕೆಎಸ್‌ಆರ್‌ಟಿಸಿ ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್‌ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಬಲಪಡಿಸುತ್ತಿದೆ. ಸಾಂಪ್ರದಾಯಿಕವಾಗಿ, ಪ್ರಯಾಣಿಕರು ಕೆಎಸ್‌ಆರ್‌ಟಿಸಿ ವೆಬ್‌ಸೈಟ್, ಮೊಬೈಲ್ ಆಪ್, ಇಲಾಖಾ ಕೌಂಟರ್‌ಗಳು ಹಾಗೂ ಫ್ರಾಂಚೈಸಿ ಕೌಂಟರ್‌ಗಳ ಮೂಲಕ ಟಿಕೆಟ್ ಬುಕ್ ಮಾಡುತ್ತಿದ್ದರು. ಆದರೆ ಈಗ ಹೊಸದಾಗಿ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳನ್ನು ಸೇರಿಸಲಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ಬಸ್ ಟಿಕೆಟ್ ಬುಕ್ಕಿಂಗ್ ಸುಲಭವಾಗಿದೆ. ಕರ್ನಾಟಕ ಒನ್ ಕೇಂದ್ರಗಳ ಮೂಲಕ ಟಿಕೆಟ್ ಕಾಯ್ದಿರಿಸುವುದು ಇನ್ನು ಸಾಮಾನ್ಯರಿಗೆ ಸುಲಭವಾಗಿದೆ.

ಈ ಸೇವೆಯ ಮೂಲಕ ಪ್ರಯಾಣಿಕರು ಮುಂಗಡವಾಗಿ ಟಿಕೆಟ್ ಬುಕ್ ಮಾಡಿ, ಪ್ರಯಾಣದ ಸಮಯದಲ್ಲಿ ಆಸನಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳಬಹುದು. ಉದಾಹರಣೆಗೆ, ಬೆಂಗಳೂರಿನಿಂದ ಮೈಸೂರು, ಮಂಗಳೂರು ಅಥವಾ ಹುಬ್ಬಳ್ಳಿಗೆ ಪ್ರಯಾಣಿಸುವವರು ತಮ್ಮ ಸ್ಥಳೀಯ ಬೆಂಗಳೂರು ಒನ್ ಕೇಂದ್ರದಲ್ಲಿ ಟಿಕೆಟ್ ಪಡೆಯಬಹುದು. ಕರ್ನಾಟಕದ ಜಿಲ್ಲಾ ಕೇಂದ್ರಗಳಾದ ಬಳ್ಳಾರಿ, ಬೀದರ್, ಚಿಕ್ಕಮಗಳೂರು ಮುಂತಾದ ಸ್ಥಳಗಳಲ್ಲಿ ಕರ್ನಾಟಕ ಒನ್ ಕೇಂದ್ರಗಳು ಈ ಸೇವೆಯನ್ನು ಒದಗಿಸುತ್ತವೆ. ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಆನ್‌ಲೈನ್ ಕಾಯ್ದಿರಿಸುವಿಕೆಯೊಂದಿಗೆ ಈ ಆಫ್‌ಲೈನ್ ಸೌಲಭ್ಯವು ಪ್ರಯಾಣಿಕರ ಸಮಯ ಮತ್ತು ಶ್ರಮವನ್ನು ಉಳಿಸುತ್ತದೆ.

ಇದನ್ನೂ ಓದಿ: New Ration Card-ಹೊಸ ರೇಶನ್ ಕಾರ್ಡ ವಿತರಣೆ ಕುರಿತು ಮಹತ್ವದ ಮಾಹಿತಿ ಪ್ರಕಟ!

KSRTC Online Ticket Booking

KSRTC Bus Online Ticket-ನೂತನ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಆಗುವ ಪ್ರಯೋಜನಗಳೇನು?

ಈ ಹೊಸ ಸೇವೆಯ ಪ್ರಯೋಜನಗಳು ಅನೇಕ. ಮೊದಲನೆಯದಾಗಿ, ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಬುಕ್ಕಿಂಗ್ ಸಮಯ ಉಳಿತಾಯ ಮಾಡುತ್ತದೆ. ಪ್ರಯಾಣಿಕರು ತಮ್ಮ ಮನೆಯಿಂದ ಹೆಚ್ಚು ದೂರ ಹೋಗದೆಯೇ ಟಿಕೆಟ್ ಪಡೆಯಬಹುದು. ಎರಡನೆಯದು, ಇದು ಗ್ರಾಮೀಣ ಪ್ರದೇಶಗಳಲ್ಲಿರುವ ಜನರಿಗೆ ಹೆಚ್ಚು ಉಪಯುಕ್ತ. ಕರ್ನಾಟಕ ಒನ್ ಕೇಂದ್ರಗಳು ತಾಲ್ಲೂಕು ಮಟ್ಟದಲ್ಲೂ ಲಭ್ಯವಿರುವುದರಿಂದ ಗ್ರಾಮೀಣ ಪ್ರಯಾಣಿಕರು ಸುಲಭವಾಗಿ ಬಳಸಿಕೊಳ್ಳಬಹುದು. ಮೂರನೆಯದು, ಈ ಸೇವೆ ಡಿಜಿಟಲ್ ಇಂಡಿಯಾ ಉದ್ದೇಶಕ್ಕೆ ಸರಿಹೊಂದುತ್ತದೆ. ಕೆಎಸ್‌ಆರ್‌ಟಿಸಿ ಆನ್‌ಲೈನ್ ಬಸ್ ಟಿಕೆಟ್ ಕಾಯ್ದಿರಿಸುವಿಕೆಯನ್ನು ಹೆಚ್ಚು ವಿಸ್ತರಿಸುತ್ತಿದೆ.

ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ವಿವರಿಸುವುದಾದರೆ, ಪ್ರಯಾಣಿಕರು ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಕ್ಕೆ ಹೋಗಿ ತಮ್ಮ ಪ್ರಯಾಣದ ವಿವರಗಳನ್ನು ನೀಡಬೇಕು. ಮೂಲ ದಾಖಲೆಗಳಾದ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿಗಳನ್ನು ತೋರಿಸಿ ಟಿಕೆಟ್ ಬುಕ್ ಮಾಡಬಹುದು. ಈ ಕೇಂದ್ರಗಳಲ್ಲಿ ಎಲೆಕ್ಟ್ರಾನಿಕ್ ವ್ಯವಸ್ಥೆಯಿದ್ದು, ತಕ್ಷಣ ಟಿಕೆಟ್ ಪ್ರಿಂಟ್ ಮಾಡಿ ನೀಡುತ್ತಾರೆ. ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಆನ್‌ಲೈನ್ ಬುಕ್ಕಿಂಗ್ ಮಾಡುವವರಿಗೆ ಇದು ಪರ್ಯಾಯ ಮಾರ್ಗವಾಗಿದೆ. ಇಂಟರ್ನೆಟ್ ಸೌಲಭ್ಯವಿಲ್ಲದವರಿಗೆ ಅಥವಾ ಆಪ್ ಬಳಸಲು ತಿಳಿದಿಲ್ಲದವರಿಗೆ ಇದು ಉತ್ತಮ ಆಯ್ಕೆ.

ಇದನ್ನೂ ಓದಿ: PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

Karnataka One Center List-ನಿಮ್ಮ ಹತ್ತಿರದಲ್ಲಿ ಕರ್ನಾಟಕ ಒನ್ ಕೇಂದ್ರ ಎಲ್ಲಿದೆ ಎಂದು ಹೇಗೆ ತಿಳಿಯುವುದು?

ಸಾರ್ವಜನಿಕರು ತಮ್ಮ ಹಳ್ಳಿಗೆ ಹತ್ತಿರದಲ್ಲಿ ಕರ್ನಾಟಕ ಒನ್ ಕೇಂದ್ರವು ಯಾವ ಸ್ಥಳದಲ್ಲಿದೆ ಎಂದು ತಮ್ಮ ಮೊಬೈಲ್ ಮೂಲಕವೇ ತಿಳಿಯಲು ಅವಕಾಶವಿದ್ದು ಮೊದಲಿಗೆ ಈ Karnataka One Center List ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು ಇದಾದ ಬಳಿಕ ಈ ಪೇಜ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡರೆ ನಿಮ್ಮ ಜಿಲ್ಲೆಯಲ್ಲಿ ಯಾವೆಲ್ಲ ಸ್ಥಳದಲ್ಲಿ ಕರ್ನಾಟಕ್ ಒನ್ ಕೇಂದ್ರ ಇದೆ ಎನ್ನುವ ಮಾಹಿತಿ ಪಟ್ಟಿ ತೆರೆದುಕೊಳ್ಳುತ್ತದೆ ಇಲ್ಲಿ ನಿಮಗೆ ಹತ್ತಿರುವಿರುವ ಕೇಂದ್ರ ವಿಳಾಸ ಮತ್ತು ಮೊಬೈಲ್ ನಂಬರ್ ಅನ್ನು ಪಡೆದು KSRTC ಟಿಕೆಟ್ ಬುಕ್ ಮಾಡಿಕೊಳ್ಳಬಹುದು.

Karnataka One-ರಾಜ್ಯದ ವಿವಿಧ ಕೇಂದ್ರಗಳಲ್ಲು ಈ ಸೌಲಭ್ಯ ಲಭ್ಯ:

ಪ್ರಸ್ತುತ ಈ ಸೇವೆ ಬೆಂಗಳೂರು ನಗರದಲ್ಲಿರುವ 161 ಬೆಂಗಳೂರು-ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ 1021 ಕರ್ನಾಟಕ-ಒನ್ ಕೇಂದ್ರಗಳಲ್ಲಿ, ಲಭ್ಯವಿದೆ. ಪ್ರಯಾಣಿಕರು ಈ ಸುಲಭ ಮತ್ತು ಹತ್ತಿರದ ಟಿಕೆಟ್ ಬುಕ್ಕಿಂಗ್ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ.

ಟಿಕೆಟ್ ಕಾಯ್ದಿರಿಸುವಿಕೆ ಅಥವಾ ಯಾವುದೇ ಸಹಾಯಕ್ಕಾಗಿ, ಪ್ರಯಾಣಿಕರು ಕೆಎಸ್‍ಆರ್‍ಟಿಸಿ ಕರೆ ಕೇಂದ್ರವನ್ನು 080-26252625 ಅಥವಾ ಅವತಾರ್ ಸೆಲ್ 7760990034 / 7760990035 (ಬೆಳಿಗ್ಗೆ 7.00 ರಿಂದ ರಾತ್ರಿ 10.00 ಗಂಟೆವರೆಗೆ) ಅಥವಾ ಬೆಂಗಳೂರು-ಒನ್ ಕರೆ ಕೇಂದ್ರವನ್ನು 080-49203888 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: