Myntra Scholarship-ಮೈಂತ್ರಾ ಕಂಪನಿಯಿಂದ ರೂ 60,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

January 15, 2026 | Siddesh
Myntra Scholarship-ಮೈಂತ್ರಾ ಕಂಪನಿಯಿಂದ ರೂ 60,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Share Now:

ಮೈಂತ್ರಾ ಕಂಪನಿಯಿಂದ ಸಿಎಸ್‌ಆರ್ ಅನುದಾನದಲ್ಲಿ ವಿದ್ಯಾರ್ಥಿವೇತನವನ್ನು(Myntra Scholarship) ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವನ್ನು ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ವಿದ್ಯಾರ್ಥಿವೇತನವನ್ನು(Myntra Scholarship Application) ನೀಡಲಾಗುತ್ತದೆ ಇದೆ ಮಾದರಿಯಲ್ಲಿ ಖಾಸಗಿ ಸಂಸ್ಥೆಯಲ್ಲಿನ CSR ಅನುದಾನದಲ್ಲಿ ಪ್ರತಿ ವರ್ಷ ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ ಈ ನಿಟ್ಟಿನಲ್ಲಿ ಪ್ರಸ್ತುತ Myntra ಕಂಪನಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

ಮೈಂತ್ರಾ ಕಂಪನಿಯಿಂದ ವಿದ್ಯಾರ್ಥಿವೇತನವನ್ನು(Myntra Scholarship Amount) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಕಂಪನಿಯಿಂದ ಎಷ್ಟು ಮೊತ್ತದ ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ ಎನ್ನುವ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Myntra Scholarship Eligibility-ವಿದ್ಯಾರ್ಥಿವೇತನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಮೈಂತ್ರಾ ಕಂಪನಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ಮಾಹಿತಿ ಈ ಕೆಳಗಿನಂತಿದೆ:

ವಿದ್ಯಾರ್ಥಿಯು ದ್ವಿತೀಯ ಪಿಯುಸಿಯಲ್ಲಿ ಶೇ 60% ಕ್ಕಿಂತಲು ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.

ಪ್ರಸ್ತುತ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿಎ, ಬಿ.ಎಸ್ಸಿ., ಬಿ.ಕಾಂ., ಬಿಬಿಎ, ಬಿಸಿಎ, ಮತ್ತು ಯಾವುದೇ ತಾಂತ್ರಿಕ ಕೋರ್ಸ್‌ಗಳು - ಟೆಕ್ ಮತ್ತು ಎಂಜಿನಿಯರಿಂಗ್, ಇತ್ಯಾದಿ ಕೋರ್ಸ್ ಗೆ ಪ್ರವೇಶವನ್ನು ಪಡೆದಿರುಬೇಕು.

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಕುಟುಂಬದ ವಾರ್ಷಿಕ ಆದಾಯ INR 5,00,000 ಕ್ಕಿಂತ ಕಡಿಮೆ ಇರಬೇಕು.

ಅರ್ಜಿದಾರರ ಪೋಷಕರು ಪೂರ್ಣ ಸಮಯದ ಗಾರ್ಮೆಂಟ್ ಕೆಲಸಗಾರರಾಗಿ ಉದ್ಯೋಗದಲ್ಲಿರಬೇಕು.

ಇದನ್ನೂ ಓದಿ: Drone Pilot Training-ಇಲ್ಲಿದೆ ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

Myntra Scholarship Amount-ಎಷ್ಟು ವಿದ್ಯಾರ್ಥಿವೇತನ ಒದಗಿಸಲಾಗುತ್ತದೆ?

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ವಿದ್ಯಾರ್ಥಿಗಳು 3 ವರ್ಷಗಳವರೆಗೆ ವರ್ಷಕ್ಕೆ INR 20,000 ದಂತೆ ಒಟ್ಟು 3 ವರ್ಷಕ್ಕೆ ರೂ 60,000/-ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ.

Last Date For Myntra Scholarship Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಮೈಂತ್ರಾ ಕಂಪನಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ 15 ಫೆಬ್ರವರಿ 2026 ಅಗಿರುತ್ತದೆ.

ಇದನ್ನೂ ಓದಿ: KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!

Reqiuired Documents For Myntra Scholarship-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳವುವು?

ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ಅವಶ್ಯಕ ದಾಖಲಾತಿಗಳ ಪಟ್ಟಿ ಹೀಗಿದೆ:

ಅರ್ಜಿದಾರರ ಆಧಾರ್ ಕಾರ್ಡ್.

ಕಾಲೇಜು ಪ್ರವೇಶ ಪತ್ರ.

ಆದಾಯ ಪ್ರಮಾಣಪತ್ರ.

ನಿವಾಸಿ ದೃಡೀಕರಣ ಪತ್ರ.

ವೈದ್ಯಕೀಯ ಪ್ರಮಾಣಪತ್ರ(ಅಗತ್ಯವಿದ್ದಲ್ಲಿ).

ಪಾಸ್‌ಪೋರ್ಟ್ ಸೈಜ್ ಫೋಟೋ.

ಇದನ್ನೂ ಓದಿ: PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

Scholarship Online Application-ಆನ್ಲೈನ್ ಮೂಲಕ ಹೇಗೆ ಅರ್ಜಿ ಸಲ್ಲಿಸಬಹುದು:

ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ವಿದ್ಯಾರ್ಥಿಗಳು ಮೊದಲ ಹಂತದಲ್ಲಿ ಇಲ್ಲಿ ಕ್ಲಿಕ್ "Scholarship Online Application" ಮಾಡಿ ಅಧಿಕೃತ ವಿದ್ಯಾರ್ಥಿವೇತನದ ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Azeem Premji Scholarship-ಅಜೀಂ ಪ್ರೇಮ್‌ಜಿ ವತಿಯಿಂದ 30,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Myntra Scholarship

Step-2: ತದನಂತರ ಈ ಪುಟದಲ್ಲಿ ಗೋಚರಿಸುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. “Create an Account” ಬಟನ್ ಮೇಲೆ ಒತ್ತಿ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ಖಾತೆಯನ್ನು ರಚನೆ ಮಾಡಿಕೊಂಡ ಬಳಿಕ “Login” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: