Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!

January 18, 2026 | Siddesh
Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!
Share Now:

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಮಾಜ ಕಲ್ಯಾಣ ಇಲಾಕೆಖೆಯಿಂದ "ಪರಿಶಿಷ್ಟ ಜಾತಿ ವಿಧವಾ ಮರು-ವಿವಾಹ ಪ್ರೋತ್ಸಾಹಧನ" ಯೋಜನೆ(Re-Marriage Assistance Scheme) ಅಡಿಯಲ್ಲಿ ವಿಧವೆಯರು ಮರು ವಿವಾಹದ ಮೂಲಕ ಹೊಸ ಜೀವನವನ್ನು ಆರಂಭಿಸಲು ರೂ. 3.00 ಲಕ್ಷಗಳ ಪ್ರೋತ್ಸಾಹಧನವನ್ನು ಒದಗಿಸಲಾಗುತ್ತಿದ್ದು ಈ ಯೋಜನೆಯಡಿ ಅರ್ಥಿಕ ನೆರವು ಪಡೆಯುವುದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಪರಿಶಿಷ್ಟ ಜಾತಿಯ ವಿಧವೆಯರು ಮರು ವಿವಾಹದ ಮೂಲಕ ಹೊಸ ಜೀವನವನ್ನು ಆರಂಭಿಸಲು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯ(Marriage Assistance Application) ಪ್ರಯೋಜನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇದಕ್ಕಾಗಿ ಅವಶ್ಯವಿರುವ ದಾಖಲೆಗಳೇನು? ಇನ್ನಿತರೆ ಅಗತ್ಯ ವಿವರವನ್ನು ಇಲ್ಲಿ ತಿಳಿಸುವ ಪ್ರಯತ್ನವನ್ನು ಮಾಡಲಾಗಿದೆ.

ಇದನ್ನೂ ಓದಿ: JK Tyre Scholarship-ಜೆಕೆ ಟೈರ್ & ಇಂಡಸ್ಟ್ರೀಸ್ ಲಿಮಿಟೆಡ್‌ನ ವತಿಯಿಂದ 25,000 ವಿದ್ಯಾರ್ಥಿವೇತನಕ್ಕೆ ಅರ್ಜಿ!

ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ಮರುಮದುವೆಯಾಗುವ ದಂಪತಿಗಳಿಗೆ ಒಟ್ಟು ರೂ. 3.00 ಲಕ್ಷಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಅರ್ಹ ಫಲಾನುಭವಿಯು ಮದುವೆಯಾಗಿ ಒಂದು ವರ್ಷದ ಒಳಗಾಗಿ ವಿಧವೆಯಾದರೆ ಈ ಯೋಜನೆಯು(Re-Marriage Assistance In Karnataka)ಸೌಲಭ್ಯವನ್ನು ಪಡೆಯಬಹುದು ಇದಕ್ಕಾಗಿ ಅರ್ಜಿ ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿ ಈ ಕೆಳಗೆ ಹಂಚಿಕೊಳ್ಳಲಾಗಿದೆ.

Re-Marriage Assistance Eligibility-ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಮಾರ್ಗಸೂಚಿ ವಿವರ ಹೀಗಿದೆ:

ಮದುವೆಯಾದ ಒಂದು ವರ್ಷದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಮಾತ್ರ ಅವಕಾಶವಿರುತ್ತದೆ.

ಅರ್ಜಿಯನ್ನು ಸಲ್ಲಿಸಲು ಇಲಾಖೆಯಿಂದ ಯಾವುದೇ ಆದಾಯದ ಮಿತಿಯನ್ನು ನಿಗದಿಪಡಿಸಿರುವುದಿಲ್ಲ.

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಈ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಸಂಗಾತಿಯ ಜಾತಿ/ಧರ್ಮದ ನಿರ್ಬಂಧಗಳಿಲ್ಲಿ ಅದರೆ ವಿಧವೆಯು ಪರಿಶಿಷ್ಟ ಜಾತಿ(SC) ವರ್ಗಕ್ಕೆ ಸೇರಿದವರಾಗಿರಬೇಕು.

ಅಂತರ್ಜಾತಿ ವಿವಾಹಕ್ಕೆ ಈಗಾಗಲೇ ಪ್ರೋತ್ಸಾಹಧನ ಪಡೆದುಕೊಂಡಿರುವವರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಮರು ವಿವಾಹ ಅದ ಬಗ್ಗೆ ಉಪನೋಂದಾವಣೆ ಕಚೇರಿಯಲ್ಲಿ ನೋಂದಣಿ ಆಗಿರುವುದು ಕಡ್ಡಾಯ.

ಇದನ್ನೂ ಓದಿ: Vasati Yojane-ರಾಜೀವ ಗಾಂಧಿ ವಸತಿ ನಿಗಮದಿಂದ ಕೇವಲ 9.7 ಲಕ್ಷಕ್ಕೆ 1BHK ಫ್ಲಾಟ್ ಪಡೆಯಲು ಅರ್ಜಿ ಆಹ್ವಾನ!

Re-Marriage Assistance Yojane

Online Apply Method-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಇಲಾಖೆಯಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವವರು ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಅರ್ಜಿದಾರರು ಮೊದಲಿಗೆ ಈ ಲಿಂಕ್ "Apply Online" ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Vermicompost subsidy-ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣಕ್ಕೆ 20,000 ಸಹಾಯಧನ!

Re-Marriage Assistance

ಇದನ್ನೂ ಓದಿ: Housing Subsidy-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಸ್ವಂತ ಮನೆ ನಿರ್ಮಾಣಕ್ಕೆ ರೂ 2.0 ಲಕ್ಷ ಸಹಾಯಧನ!

Step-2: ಇದಾದ ಬಳಿಕ "ಪರಿಶಿಷ್ಟ ಜಾತಿ ವಿಧವಾ ಮರು-ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ" ಪುಟ ತೆರೆದುಕೊಳ್ಳುತ್ತದೆ ಇಲ್ಲಿ ಕಾಣುವ "Register/ನೋಂದಣಿ" ಬಟನ್ ಮೇಲೆ ಕ್ಲಿಕ್ ಮಾಡಿ ಕೆಳಗೆ ಕಾಣಿಸುವ Click Here ಆಯ್ಕೆಯ ಮೇಲೆ ಒತ್ತಿ ಅರ್ಜಿದಾರರ ಆಧಾರ್ ಕಾರ್ಡ ನಂಬರ್ ಮತ್ತು ಹೆಸರನ್ನು ನಮೂದಿಸಿ ಕೆಳಗೆ ಕಾಣುವ ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ OTP ಅನ್ನು ಪಡೆದು ಅದನ್ನು ದಾಖಲಿಸಿ ಮುಂದಿನ ಪೇಜ್ ಪ್ರವೇಶ ಪಡೆಯಬೇಕು.

Step-3: ನಂತರ ಇಲ್ಲಿ ಅಧಿಕೃತ ಅರ್ಜಿ ನಮೂನೆ ಪೇಜ್ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ಕೊನೆಯಲ್ಲಿ ಅವಶ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Myntra Scholarship-ಮೈಂತ್ರಾ ಕಂಪನಿಯಿಂದ ರೂ 60,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Required Documents For Application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳ ಪಟ್ಟಿ ಹೀಗಿದೆ:

ಅರ್ಜಿದಾರರ ಆಧಾರ್ ಕಾರ್ಡ/Aadhar
ಬ್ಯಾಂಕ್ ಪಾಸ್ ಬುಕ್/Bank Pass Book
ಫೋಟೋ/Photo
ವಿವಾಹ ನೋಂದಣಿ ಪ್ರಮಾಣ ಪತ್ರ/Marriage Registration Certificate
ಜಾತಿ ಪ್ರಮಾಣ ಪತ್ರ/Caste Certificate

ಇದನ್ನೂ ಓದಿ: Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

Helpline Number-ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ- 9482300400

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: