SSLC Prize Money-ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಭರ್ಜರಿ ಕೊಡುಗೆ: ಲ್ಯಾಪ್‌ಟಾಪ್ ಬದಲು ₹50,000 ನಗದು ಬಹುಮಾನ!

January 25, 2026 | Siddesh
SSLC Prize Money-ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಭರ್ಜರಿ ಕೊಡುಗೆ: ಲ್ಯಾಪ್‌ಟಾಪ್ ಬದಲು ₹50,000 ನಗದು ಬಹುಮಾನ!
Share Now:

ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡಲಾಗುತ್ತಿದ್ದ ಲ್ಯಾಪ್‌ಟಾಪ್‌ಗಳ ಬದಲಿಗೆ, ಈಗ ₹50,000 ನಗದು ಬಹುಮಾನ(SSLC Prize Money Scheme In Karnataka) ನೀಡಲು ಸರ್ಕಾರ ಮುಂದಾಗಿದೆ.

ಈ ನೂತನ ಯೋಜನೆಯಿಂದ(SSLC Prize Money Scheme) ರಾಜ್ಯದಾದ್ಯಂತ ಒಟ್ಟು 758 ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದು, ಇದಕ್ಕಾಗಿ ಸರ್ಕಾರವು ಸುಮಾರು ₹3.25 ಕೋಟಿ ಹಣವನ್ನು ಮೀಸಲಿಟ್ಟಿದೆ. ಇಂದಿನ ಅಂಕಣದಲ್ಲಿ ಅರ್ಹ ವಿದ್ಯಾರ್ಥಿಗಳು ಬಹುಮಾನದ ಯೋಜನೆಯ ಪ್ರಯೋಜನವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ವಿದ್ಯಾರ್ಥಿಯ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Senior Citizen Card-ಹಿರಿಯ ನಾಗರಿಕರ ಕಾರ್ಡ್ ಪಡೆಯುವುದು ಹೇಗೆ? ಈ ಕಾರ್ಡನಿಂದ ಯಾವೆಲ್ಲ ಪ್ರಯೋಜನಗಳಿವೆ?

SSLC Prize Money Yojana-ಯೋಜನೆಯ ಹಿನ್ನೆಲೆ ಮತ್ತು ಬದಲಾವಣೆ ವಿವರ:

ಈ ಮೊದಲು ಸರ್ಕಾರವು ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಅಗ್ರಸ್ಥಾನ ಪಡೆಯುವ ಮೂವರು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸುವ ಯೋಜನೆಯನ್ನು ಹೊಂದಿತ್ತು. ಆದರೆ, ಲ್ಯಾಪ್‌ಟಾಪ್‌ಗಳ ಖರೀದಿ ಪ್ರಕ್ರಿಯೆಯಲ್ಲಿನ ವಿಳಂಬ, ತಾಂತ್ರಿಕ ಸಮಸ್ಯೆಗಳು ಮತ್ತು ವಿದ್ಯಾರ್ಥಿಗಳಿಗೆ ಅವರ ಅಗತ್ಯಕ್ಕೆ ತಕ್ಕಂತೆ ಹಣವನ್ನು ಬಳಸಿಕೊಳ್ಳುವ ಸ್ವಾತಂತ್ರ್ಯ ನೀಡುವ ಉದ್ದೇಶದಿಂದ ಈ ಬದಲಾವಣೆ ಮಾಡಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ (KSEAB) ಪ್ರಸ್ತಾವನೆಯನ್ನು ಅಂಗೀಕರಿಸಿರುವ ಸರ್ಕಾರ, ಇನ್ಮುಂದೆ ನೇರ ನಗದು ವರ್ಗಾವಣೆ (DBT) ಮೂಲಕ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಆದೇಶಿಸಿದೆ.

ಇದನ್ನೂ ಓದಿ: MGNREGA Scheme-ನರೇಗಾ ಯೋಜನೆಯಲ್ಲಿ ಏನಿಲ್ಲ ಬದಲಾವಣೆ ಮಾಡಲಾಗುತ್ತಿದೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

ನಗದು ಬಹುಮಾನದ ಹಂಚಿಕೆ ವಿವರ:

ವಿವರಮಾಹಿತಿ
ಪ್ರತಿ ವಿದ್ಯಾರ್ಥಿಗೆ ಸಿಗುವ ಮೊತ್ತ₹50,000
ಒಟ್ಟು ಫಲಾನುಭವಿಗಳ ಸಂಖ್ಯೆ758 ವಿದ್ಯಾರ್ಥಿಗಳು
ಮೀಸಲಿಟ್ಟ ಒಟ್ಟು ಅನುದಾನ₹3.25 ಕೋಟಿ
ಪಾವತಿ ವಿಧಾನನೇರ ನಗದು ವರ್ಗಾವಣೆ (DBT)

SSLC Prize Money Scheme Details-ಈ ಬಹುಮಾನದ ಮೊತ್ತವನ್ನು ಯಾರೆಲ್ಲ ಪಡೆಯಬಹುದು?

ಈ ಯೋಜನೆಯ ಲಾಭ ಪಡೆಯಲು ವಿದ್ಯಾರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:

ಈ ಯೋಜನೆಯು ಕೇವಲ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಉತ್ತಮ ಅಂಕ ಗಳಿದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಪ್ರತಿ ಜಿಲ್ಲೆಯ ಟಾಪ್-3 ಮತ್ತು ಪ್ರತಿ ತಾಲ್ಲೂಕಿನ ಟಾಪ್-3 ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ ಬಹುಮಾನ ಪಡೆಯಲು ಅರ್ಹರಾಗಿರುತ್ತಾರೆ.

ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ State Scholarship Portal - SSP ನಲ್ಲಿ ಅಗತ್ಯ ವಿವರವನ್ನು ಭರ್ತಿ ಮಾಡಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಇದನ್ನೂ ಓದಿ: Deepika Scholarship 2026-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು!

SSLC Prize Money

SSLC Prize Money Scheme Benefits-ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದ ಯಾವೆಲ್ಲ ಪ್ರಯೋಜನಗಳಿವೆ?

ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ವಿದ್ಯಾರ್ಥಿಗಳಿಗೆ ಇದು ಹಲವು ವಿಧಗಳಲ್ಲಿ ಅನುಕೂಲಕರವಾಗಿದೆ:

50 ಸಾವಿರ ರೂಪಾಯಿ ಸಿಗುವುದರಿಂದ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಕಂಪನಿಯ ಅಥವಾ ಹೆಚ್ಚಿನ ಫೀಚರ್ ಇರುವ ಲ್ಯಾಪ್‌ಟಾಪ್ ಖರೀದಿಸಬಹುದು.

ಕೇವಲ ಲ್ಯಾಪ್‌ಟಾಪ್ ಮಾತ್ರವಲ್ಲದೆ, ಪಿಯುಸಿ ಅಥವಾ ಡಿಪ್ಲೋಮಾ ಪ್ರವೇಶಾತಿ ಶುಲ್ಕ, ಪುಸ್ತಕಗಳ ಖರೀದಿ ಅಥವಾ ತಾಂತ್ರಿಕ ಕೋರ್ಸ್‌ಗಳಿಗೆ ಈ ಹಣವನ್ನು ಬಳಸಬಹುದು.

ಲ್ಯಾಪ್‌ಟಾಪ್ ವಿತರಣಾ ಸಮಾರಂಭಗಳಿಗಾಗಿ ಕಾಯುವ ಬದಲು, ನೇರವಾಗಿ ಖಾತೆಗೆ ಹಣ ಬರುವುದರಿಂದ ಸಮಯ ಉಳಿತಾಯವಾಗುತ್ತದೆ.

ಇದನ್ನೂ ಓದಿ: Akrama-Sakrama-ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ಸಬ್ಸಿಡಿಯಲ್ಲಿ ವಿದ್ಯುತ್ ಸಂಪರ್ಕ!

SSLC Prize Money Scheme Process-ಹಣ ಪಡೆಯುವುದು ಹೇಗೆ? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಈ ನಗದು ಬಹುಮಾನವನ್ನು ಪಡೆಯಲು ವಿದ್ಯಾರ್ಥಿಗಳು ಯಾವುದೇ ಪ್ರತ್ಯೇಕ ಸರಕಾರಿ ಇಲಾಖೆಯ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ.

ವಿದ್ಯಾರ್ಥಿಯು ತಮ್ಮ ಆಧಾರ್ ಕಾರ್ಡ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿದರೆ ಸಾಕು ಬಹುಮಾನದ ಹಣ ನೇರವಾಗಿ ಅರ್ಹ ಫಲಾನುಭವಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈಗಾಗಲೇ ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅವರ ಬ್ಯಾಂಕ್ ವಿವರಗಳನ್ನು ಪರಿಶೀಲಿಸುತ್ತಿದೆ.

ಸರ್ಕಾರದ 'ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮ' ಕ್ರಿಯಾ ಯೋಜನೆಯಡಿ, SSP ಪೋರ್ಟಲ್ ಮೂಲಕ ಡೇಟಾವನ್ನು ಪಡೆದು ನೇರವಾಗಿ ಹಣ ವರ್ಗಾಯಿಸಲಾಗುತ್ತದೆ.

ಇದನ್ನೂ ಓದಿ: BGM Foundation-ಬಿಜಿಎಂ ಫೌಂಡೇಶನ್ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ!

ಸರ್ಕಾರದ ಈ ನಡೆ ಪ್ರತಿಭಾವಂತ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ವರದಾನವಾಗಲಿದೆ. ₹50,000 ಮೊತ್ತವು ಒಬ್ಬ ವಿದ್ಯಾರ್ಥಿಯ ಉನ್ನತ ಶಿಕ್ಷಣದ ಕನಸಿಗೆ ದೊಡ್ಡ ಬುನಾದಿಯಾಗಬಲ್ಲದು. ಈ ಯೋಜನೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳತ್ತ ಆಕರ್ಷಿತರಾಗಲು ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ.

ನಿಮ್ಮ ಶಾಲೆಯ ಅಥವಾ ಪರಿಚಯದ ವಿದ್ಯಾರ್ಥಿಗಳು ಟಾಪರ್ ಆಗಿದ್ದರೆ, ಅವರ ಬ್ಯಾಂಕ್ ಖಾತೆ ಮತ್ತು ಆಧಾರ್ ಲಿಂಕ್ ಆಗಿದೆಯೇ ಎಂಬುದನ್ನು ಒಮ್ಮೆ ಖಚಿತಪಡಿಸಿಕೊಳ್ಳಿ! ಹಾಗೂ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಮ್ಮ ತಾಲ್ಲೂಕಿನ BEO ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: