Mojini Services: ಇನ್ನು ಮುಂದೆ ಜಮೀನಿನ ದಾಖಲೆ ಸರಿಪಡಿಸಿಕೊಳ್ಳಲು ಅರ್ಜಿ ಸಲ್ಲಿಸಲು ನಗರದ ಕಚೇರಿಗೆ ಹೊಗಬೇಕಿಲ್ಲ!

August 27, 2023 | Siddesh

ಇನ್ನು ಮುಂದೆ ರೈತರು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ(Agriculture land records) ವ್ಯವಸ್ಥೆಯಡಿರುವ ಸೇವೆಗಳನ್ನು ಪಡೆಯಲು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. 

ಈ ಹಿಂದೆ ಗ್ರಾಮೀಣ ಭಾಗದ ಜನರು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ(Land records) ಇಲಾಖೆಯ ಮೋಜಿನಿ(Mojini website) ವ್ಯವಸ್ಥೆಯಡಿ “11 ಇ ನಕ್ಷೆ", "ತತ್ಕಾಲ್ ಪೋಡಿ", "ಭೂ ಪರಿವರ್ತನೆಗಾಗಿ ಅರ್ಜಿ” ಮತ್ತು “ಹದ್ದುಬಸ್ತು.” ಸೇವೆಗಳನ್ನು ನೀಡಲಾಗುತ್ತಿದೆ. ಸದರಿ ಸೇವೆಗಳಿಗೆ ಅರ್ಜಿ ಸಲ್ಲಿಸಲು ಜನರು ತಾಲೂಕು ಹಂತದಲ್ಲಿರುವ ತಹಶೀಲ್ದಾರ್ ಕಚೇರಿಗೆ ಅಥವಾ ಹೋಬಳಿ ಮಟ್ಟದಲ್ಲಿರುವ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡಬೇಕಾಗಿರುತ್ತದೆ,

ಪ್ರತಿಯೊಂದು ತಾಲೂಕುಗಳು 30-40 ಗ್ರಾಮ ಪಂಚಾಯತಿಗಳನ್ನು ಹಾಗೂ ಪ್ರತಿಯೊಂದು ಹೋಬಳಿಯಲ್ಲಿ ಆರರಿಂದ ಏಳು ಗ್ರಾಮ ಪಂಚಾಯತಿಗಳನ್ನು ಹೊಂದಿರುತ್ತದೆ. ಈ ಎಲ್ಲಾ ಗ್ರಾಮ ಪಂಚಾಯತಿಯ(Grama panchayath) ಸುಮಾರು 20-50 ಸಾವಿರ ಜನರು ಸರ್ಕಾರಿ ಸೇವೆಯನ್ನು ತಾಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪಡೆಯಬೇಕಾದುದರಿಂದ ಜನಸಂದಣಿ ಹೆಚ್ಚುವುದರ ಜೊತೆಗೆ ಕೇಂದ್ರದಲ್ಲಿ, ತರಿತ ಗತಿಯಲ್ಲಿ, ಸೇವೆಯನ್ನು ಒದಗಿಸುವುದಕ್ಕೆ ತೊಡಕಾಗುತ್ತಿತ್ತು. 

ಜೊತೆಗೆ ಸಾರ್ವಜನಿಕರು ಸೇವೆಗಳನ್ನು ಪಡೆಯಲು ಸಾಕಷ್ಟು ದೂರ ಕ್ರಮಿಸ ಬೇಕಾದುದರಿಂದ ಸಾಕಷ್ಟು ಹಣ ವ್ಯಯಿಸಬೇಕಾಗುತ್ತಿತ್ತು. ಈ ಸಮಸ್ಯೆಗೆ ಪರಿಹಾರವಾಗಿ ಗ್ರಾಮೀಣ ಜನತೆ ತಮಗೆ ಅವಶ್ಯವಿರುವ ಭೂಮಾಪನ ಕಂದಾಯ ವ್ಯವಸ್ಥೆ, ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿರುವ ಸದರಿ ಸೇವೆಗಳನ್ನು ಮತ್ತಷ್ಟ ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಯ ಪಡೆದುಕೊಳ್ಳುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸಲು ಸರ್ಕಾರವು ನಿರ್ಧರಿಸಿದೆ.

ಇದನ್ನೂ ಓದಿ: Bele samikshe app-2023: ಕೃಷಿ ಇಲಾಖೆಯಿಂದ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸಲು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ!

ಇದರಿಂದಾಗಿ, ಗ್ರಾಮೀಣಾ ಪ್ರದೇಶದಲ್ಲಿ, ವಾಸವಾಗಿರುವ 3.7 ಕೋಟಿ ಜನರಿಗೆ ಅಂದರೆ 78 ಲಕ್ಷ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಚಿಸಿ ವ್ಯವಸ್ಥೆಯಡಿರುವ "11 ಇ ನ”, “ತತ್ಕಾಲ್ ಪೋಡಿ", "ಭೂ ಪರಿವರ್ತನೆಗಾಗಿ ಅರ್ಜಿ' ಮತ್ತು "ಹದ್ದುಬಸ್ತು" ಸೇವೆಗಳನ್ನು ಪಡೆಯುವಲ್ಲಿ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳು(bapuji seva kendra) ಮಹತ್ವದ ಪಾತ್ರವಹಿಸಲಿವೆ.

Bapuji seva kendra website- ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯಾವೆಲ್ಲ ಅರ್ಜಿ ಸಲ್ಲಿಸಬವುದು?

1) 11ಇ ನಕ್ಷೆ ಅರ್ಜಿ 
2) ಭೂಪರಿವರ್ತನೆಗಾಗಿ ಅರ್ಜಿ 
3) ಜಮೀನಿನ ತತ್ಕಾಲ್‌ಪೋಡಿಗಾಗಿ ಅರ್ಜಿ
4) ಹದ್ದುಬದ್ದು ಮತ್ತು ದುರಸ್ತಿಗಾಗಿ ಅರ್ಜಿ
5) ಆಸ್ತಿ ತೆರಿಗೆ
6) ಆಕ್ಯುಪೆನ್ಸಿ ಸರ್ಟಿಫಿಕೇಟ್
7) ಕಟ್ಟಡ ನಿರ್ಮಾಣ ಲೈಸೆನ್ಸ್
8) ನಮೂನೆ 9/11 A
9) ನಮೂನೆ 11 B
10) ವ್ಯಾಪಾರ ಪರವಾನಗಿ
11) ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ
12) ನಿರಾಕ್ಷೇಪಣಾ ಪತ್ರ
13) ರಸ್ತೆ ಅಗೆವುದಾಕ್ಕಾಗಿ ಅನುಮತಿ
14) ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿಸುವಿಕೆ
15) ಹೊಸ/ಅಸ್ತಿತ್ವದಲ್ಲಿರುವ ಓವರ್‌ಗ್ರೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಅನುಮತಿ.
16) MGNREGA ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ
17) ಆರ್‌.ಟಿ.ಸಿ/ಪಹಣಿ ನೀಡಿಕೆಗೆ ಅರ್ಜಿ ಸಲ್ಲಿಸುವುದು
18) ಜನನ ಮತ್ತು ಮರಣ ಪ್ರಮಾಣಪತ್ರವನ್ನು ಪಡೆಯುವುದು
19) ಯುಡಿಐಡಿ(ಯುಡಿಐಡಿ ಕಾರ್ಡ್ ಎಂದೂ ಕರೆಯಲ್ಪಡುವ ವಿಶಿಷ್ಟ ಅಂಗವೈಕಲ್ಯ ಗುರುತಿನ ಕಾರ್ಡ್ ವಿಕಲ ಚೇತನ ವ್ಯಕ್ತಿಗಳಿಗೆ      ಒದಗಿಸಲಾಗುವ ವಿಶೇಷ ಗುರುತಿನ ಸಂಖ್ಯೆಯಾಗಿದೆ)
20) ಇಶ್ರಾಮ್ ಕಾರ್ಡ್‌ಗಳು

ಹೆಚ್ಚಿನ ಮಾಹಿತಿಗಾಗಿ:

ಮೋಜಿನಿ ಜಾಲತಾಣ: https://bhoomojini.karnataka.gov.in

ಬಾಪೂಜಿ ಸೇವಾ ಕೇಂದ್ರ: https://bsk.karnataka.gov.in

ಸಹಾಯವಾಣಿ: 080-22032238, 080-22032650

ಕೃಷಿಕರಿಗೆ ಸಂಬಧಿಸಿದ ಇತರೆ ಯೋಜನೆಗಳ ಅಂಕಣಗಳು:

ಇದನ್ನೂ ಓದಿ: ನಿಮ್ಮ ಹಳ್ಳಿಯಲ್ಲಿ ಯಾವ ಸರ್ವೆ ನಂಬರ್ ಎಲ್ಲಿ ಬರುತ್ತದೆ ಎಂದು ಹೇಗೆ ತಿಳಿಯುವುದು?

ಇದನ್ನೂ ಓದಿ: ಮೀನುಗಾರಿಕೆ ಇಲಾಖೆಯಿಂದ ಶೇ. 40% ಮತ್ತು ಶೇ. 60% ರಷ್ಟು ಸಹಾಯಧನ ಯೋಜನೆಗಳಿಗೆ ಅರ್ಜಿ ಅಹ್ವಾನ.

ಇದನ್ನೂ ಓದಿ: Sheep Farming schemes: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಯಾವೆಲ್ಲ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆಯಬವುದು?

ಇದನ್ನೂ ಓದಿ: Nrega scheme Information-2023: ಉದ್ಯೋಗ ಖಾತರಿ ಯೋಜನೆ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ ಕುಟುಂಬ ಗರಿಷ್ಠ ರೂ. 2.50 ಲಕ್ಷದವರೆಗೆ ಸೌಲಭ್ಯ!

ಇದನ್ನೂ ಓದಿ: ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಯಾವೆಲ್ಲ ಸ್ವ-ಉದ್ಯೋಗ ಮಾಡಬವುದು? ಸಹಾಯಧನ ಎಷ್ಟು? ಒದಗಿಸಬೇಕಾಗದ ಅಗತ್ಯ ದಾಖಲಾತಿಗಳು

ಇದನ್ನೂ ಓದಿ: Chaff cutter subsidy: ಶೇ 50% ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.

ಇದನ್ನೂ ಓದಿ: ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: