Bele Vime Amount-2026: ಈ ಜಿಲ್ಲೆಯ ರೈತರ ಖಾತೆಗೆ 243.5 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

March 10, 2026 | Siddesh
Bele Vime Amount-2026: ಈ ಜಿಲ್ಲೆಯ ರೈತರ ಖಾತೆಗೆ 243.5 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!
Share Now:

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(Crop Insurance Scheme) ಅಡಿಯಲ್ಲಿ ನಿಗದಿತ ಪ್ರೀಮಿಯಂ ಅನ್ನು ಪಾವತಿ ಮಾಡಿ ಬೆಳೆ ವಿಮೆಯನ್ನು ಮಾಡಿಸಿಕೊಂಡಿರುವ ಕಲಬುರಗಿ ಜಿಲ್ಲೆಯ 2.9 ಲಕ್ಷ ರೈತರ ಖಾತೆಗೆ 243.5 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ ಮಾಡಲಾಗಿದ್ದು ಈ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಂಚಿಕೊಂಡಿರುವ ಪತ್ರಿಕಾ ಪ್ರಕಟಣೆ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ನಿನ್ನೆ ಕಲಬುರಗಿ ಜಿಲ್ಲೆಯಲ್ಲಿ ಆಯೋಜನೆ ಮಾಡಿರುವ ಜಿಲ್ಲಾಮಟ್ಟದ ಸಿರಿಧಾನ್ಯ ಮೇಳ ಕಾರ್ಯಕ್ರಮದಲ್ಲಿ ಮಧ್ಯಂತರ ಬೆಳೆ ವಿಮೆ ಪರಿಹಾರದ(Bele Vime Parihara) ಹಣವನ್ನು ರೈತರ ಖಾತೆಗೆ ಬಿಡುಗಡೆ ಮಾಡುವುದಕ್ಕೆ ಐವರು ರೈತರಿಗೆ ಸಾಂಕೇತಿಕವಾಗಿ ಬೆಳೆ ವಿಮೆ ಮಧ್ಯಂತರ ಪರಿಹಾರದ ಚೆಕ್ ಅನ್ನು ವಿತರಣೆ ಮಾಡಿದರು.

ಪ್ರಸ್ತುತ ಲೇಖನದಲ್ಲಿ ಮಧ್ಯಂತರ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆ ಮಾಡಲಾಗಿದೆ? ಮೊಬೈಲ್ ನಲ್ಲೇ ಬೆಳೆ ವಿಮೆ(Bele Vime) ಸ್ಟೇಟಸ್ ಅನ್ನು ಚೆಕ್ ಮಾಡುವುದು ಹೇಗೆ? ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Toll Plaza-ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಬದಲಾಗಲಿವೆ ಟೋಲ್ ನಿಯಮಗಳು!

ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ 'ಜಿಲ್ಲಾಮಟ್ಟದ ಸಿರಿಧಾನ್ಯ ಮೇಳ-2026' ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಐವರು ರೈತರಿಗೆ ಸಾಂಕೇತಿಕವಾಗಿ ಚೆಕ್ ವಿತರಿಸುವ ಮೂಲಕ ಈ ಪ್ರಕ್ರಿಯೆಗೆ ಚಾಲನೆ ನೀಡಿದರು.

Bele Vime Yojane-ರೈತರ ಹಿತ ಕಾಯುವಲ್ಲಿ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಚಿವರು, "ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಲ್ಲೆಯ ರೈತರಿಗೆ ಇದುವರೆಗೆ ₹657 ಕೋಟಿ ಬೆಳೆ ಪರಿಹಾರ ನೀಡಲಾಗಿದೆ. ಈ ಬಾರಿ ದಾಖಲೆಯ 3.01 ಲಕ್ಷ ರೈತರು ವಿಮೆ ನೋಂದಣಿ ಮಾಡಿಸಿದ್ದು, ಇದು ಕಳೆದ ಸರ್ಕಾರದ ಅವಧಿಗಿಂತ ದುಪ್ಪಟ್ಟಾಗಿದೆ. ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡದೆ, ನಾವು ರೈತರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದೇವೆ," ಎಂದು ತಿಳಿಸಿದರು.

ಇದನ್ನೂ ಓದಿ: Education Assistance-ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ!

Bele Vime Amount

ಇದನ್ನೂ ಓದಿ: Diploma Scholarship-ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿ ವೇತನ!

Bele Vime Status Check-2026: ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಜಮಾ ವಿವರವನ್ನು ತಿಳಿಯಿರಿ:

ಕೃಷಿಕರು ತಮ್ಮ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ? ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಿರುವ ವಿವರವನ್ನು ತಮ್ಮ ಮೊಬೈಲ್ ನಲ್ಲೇ ರಾಜ್ಯ ಸರಕಾರದ ಅಧಿಕೃತ ಸಂರಕ್ಷಣೆ ಪೋರ್ಟಲ್ ಅನ್ನು ಪ್ರವೇಶ ಮಾಡಿ ಕೇವಲ ಒಂದೆರಡು ಕ್ಲಿಕ್ ನಲ್ಲೇ ಚೆಕ್ ಮಾಡಿಕೊಳ್ಳಲು ಅವಕಾಶವಿದ್ದು ಇದಕ್ಕಾಗಿ ಈ ಕೆಳಗಿನ ವಿಧಾನವನ್ನು ಅನುಸರಿಸಿ.

Step-1: ಅರ್ಜಿದಾರರು ಮೊದಲಿಗೆ ಈ Crop Insurance Status Check ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸಂರಕ್ಷಣೆ ಪೋರ್ಟಲ್ ಅನ್ನು ಪ್ರವೇಶ ಮಾಡಿ.

ಇದನ್ನೂ ಓದಿ: Free Sewing Machine-ಈ ಜಿಲ್ಲೆಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Step-2: ಇದಾದ ನಂತರ ಈ ಪೇಜ್ ನಲ್ಲಿ ವರ್ಷ ಮತ್ತು ಋತು ಅನ್ನು ಆಯ್ಕೆ ಮಾಡಿಕೊಂಡು "Go" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ಇದಾದ ಬಳಿಕ ಈ ಪೇಜ್ ನಲ್ಲಿ "Farmers" ಕಾಲಂ ನಲ್ಲಿ ಕಾಣಿಸುವ "Check Status" ಬಟನ್ ಮೇಲೆ ಕ್ಲಿಕ್ ಮಾಡಿ "Mobile No" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ಮೊಬೈಲ್ ನಂಬರ್ ನಮೂದಿಸಿ ಪಕ್ಕದಲ್ಲಿ ಕಾಣಿಸುವ ಕ್ಯಾಪ್ಚ್ ಕೋಡ್ ಅನ್ನು ಹಾಕಿ "Search" ಆಯ್ಕಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಬೆಳೆ ವಿಮೆ ಅರ್ಜಿ ಸ್ಥಿತಿ ಮತ್ತು UTR Details ನಲ್ಲಿ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಿರುವ ವಿವರವನ್ನು ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: Mobile Canteen-ಒಕ್ಕಲಿಗ ನಿಗಮದಿಂದ 3.0 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಅರ್ಜಿ!

Agriculture Schemes-ಜಿಲ್ಲೆಯ ಕೃಷಿ ಕ್ಷೇತ್ರಕ್ಕೆ ಒದಗಿಸಿದ ಅನುದಾನದ ವಿವರ:

ನೆಟೆ ರೋಗ ಪರಿಹಾರ: 2022-23ರಲ್ಲಿ ನೆಟೆ ರೋಗದಿಂದ ಸಂಕಷ್ಟಕ್ಕೀಡಾಗಿದ್ದ 1.77 ಲಕ್ಷ ರೈತರಿಗೆ ₹181.86 ಕೋಟಿ ಪರಿಹಾರ ವಿತರಣೆ.

ಬೃಹತ್ ಅನುದಾನ: ಕಳೆದ 3 ವರ್ಷಗಳಲ್ಲಿ ವಿವಿಧ ಯೋಜನೆಗಳಡಿ 15.46 ಲಕ್ಷ ರೈತರಿಗೆ ಒಟ್ಟು ₹2,590.98 ಕೋಟಿ ನೇರ ನಗದು ವರ್ಗಾವಣೆ (DBT).

ಮಹಿಳಾ ಸಬಲೀಕರಣ: 'ಕಲಬುರಗಿ ರೊಟ್ಟಿ' ಯೋಜನೆ ಮೂಲಕ ಮಹಿಳೆಯರಿಗೆ ರೊಟ್ಟಿ ತಯಾರಿಸುವ ಯಂತ್ರಗಳ ವಿತರಣೆ. ಈಗ ಇಲ್ಲಿನ ರೊಟ್ಟಿಗಳು ಅಂತರರಾಷ್ಟ್ರೀಯ ಮಾರುಕಟ್ಟೆ ತಲುಪುತ್ತಿವೆ.

ತಾಂತ್ರಿಕ ನೆರವು: ಜಿಲ್ಲೆಯಲ್ಲಿ 9 ಕಸ್ಟಮರ್ ಹೈರ್ ಸೆಂಟರ್, ಡ್ರೋನ್ ಸಿಂಪರಣಾ ಕೇಂದ್ರ ಹಾಗೂ ಅಗ್ರಿಟೆಕ್ ಎಕ್ಸಲರೇಟರ್ ಸೆಂಟರ್ ಸ್ಥಾಪನೆ.

ಈ ಸಂದರ್ಭದಲ್ಲಿ ಕೃಷಿ ಯಂತ್ರೋಪರಣಗಳು ಹಾಗೂ ಸೂಕ್ಷ್ಮ ನೀರಾವರಿ ಮಳಿಗೆಯನ್ನು ಉದ್ಘಾಟಿಸಿ, ಕಬ್ಬು ಕಟಾವು ಯಂತ್ರಗಳು ಮತ್ತು ಕೃಷಿ ಪರಿಕರಗಳನ್ನು ವಿತರಿಸಿ. ಐವರು ರೈತರಿಗೆ ಸಾಂಕೇತಿಕವಾಗಿ ಬೆಳೆ ವಿಮೆ ಮಧ್ಯಂತರ ಪರಿಹಾರದ ಚೆಕ್ ವಿತರಿಸಲಾಯಿತು. ಕಲಬುರಗಿ ರೊಟ್ಟಿ ಉತ್ಪಾದಕರ ಸಂಘದ ಮಹಿಳೆಯರನ್ನು ಸನ್ಮಾನಿಸಿ. ಸಮಗ್ರ ಕೃಷಿಯಲ್ಲಿ ಸಾಧನೆ ಮಾಡಿದ ಜೇವರ್ಗಿ ತಾಲೂಕಿನ ರೈತ ಪರಶುರಾಮ್ ಅವರಿಗೆ ರಾಜ್ಯ ಮಟ್ಟದ 'ಕೃಷಿ ಪಂಡಿತ' ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: