Open University Admission-ಮುಕ್ತ ವಿಶ್ವವಿದ್ಯಾನಿಲಯದಿಂದ ಶಿಕ್ಷಣವನ್ನು ಪಡೆಯಲು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 10 ರವರೆಗೆ ಅವಕಾಶ!

April 6, 2026 | Siddesh
Open University Admission-ಮುಕ್ತ ವಿಶ್ವವಿದ್ಯಾನಿಲಯದಿಂದ ಶಿಕ್ಷಣವನ್ನು ಪಡೆಯಲು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 10 ರವರೆಗೆ ಅವಕಾಶ!
Share Now:

ಬೆಂಗಳೂರು: ಉನ್ನತ ಶಿಕ್ಷಣದ ಕನಸು ಹೊತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಸಿಹಿ ಸುದ್ದಿಯೊಂದನ್ನು ನೀಡಿದೆ. 2025-26ನೇ ಸಾಲಿನ ಜನವರಿ ಆವೃತ್ತಿಯ ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಯುಜಿಸಿ (UGC) ನಿರ್ದೇಶನದಂತೆ ಏಪ್ರಿಲ್ 10ರವರೆಗೆ ವಿಸ್ತರಿಸಲಾಗಿದೆ. ಉದ್ಯೋಗದ ನಡುವೆ ಅಥವಾ ವೈಯಕ್ತಿಕ ಕಾರಣಗಳಿಂದ ನಿಯಮಿತ ಕಾಲೇಜುಗಳಿಗೆ ಹೋಗಲು ಸಾಧ್ಯವಾಗದ ಆಸಕ್ತ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ವಿಶ್ವವಿದ್ಯಾನಿಲಯವು(KSOU Admission) ನೀಡುತ್ತಿರುವ ಈ ವಿಸ್ತರಣೆಯು ಕೇವಲ ಪದವಿಗಳಿಗಷ್ಟೇ ಸೀಮಿತವಾಗಿರದೆ, ವೃತ್ತಿಪರ ಕೋರ್ಸ್‌ಗಳಾದ ಎಂ.ಬಿ.ಎ, ಎಂ.ಸಿ.ಎ ಹಾಗೂ ವಿವಿಧ ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೂ ಅನ್ವಯವಾಗಲಿದೆ. ಗುಣಮಟ್ಟದ ಶಿಕ್ಷಣವನ್ನು ಕೈಗೆಟಕುವ ದರದಲ್ಲಿ ನೀಡುವ ಉದ್ದೇಶದಿಂದ ಕರಾಮುವಿ ಈ ಕ್ರಮ ಕೈಗೊಂಡಿದ್ದು, ಸಾವಿರಾರು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುವ ನಿರೀಕ್ಷೆಯಿದೆ. ಪ್ರವೇಶಾತಿ ಪಡೆಯಬಯಸುವ ವಿದ್ಯಾರ್ಥಿಗಳು ಕೊನೆಯ ದಿನಾಂಕದವರೆಗೂ ಕಾಯದೆ, ಕೂಡಲೇ ಅಗತ್ಯ ದಾಖಲೆಗಳೊಂದಿಗೆ ಪ್ರಕ್ರಿಯೆ ಪೂರ್ಣಗೊಳಿಸುವುದು ಸೂಕ್ತ.

ಇದನ್ನೂ ಓದಿ: Voter List-2026: ಪರಿಷ್ಕೃತ ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

ಪ್ರವೇಶಾತಿ ಪಡೆಯಲು ಇಚ್ಛಿಸುವವರು ವಿಶ್ವವಿದ್ಯಾನಿಲಯದ(KSOU Admission In 2026) ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ, ಆಯಾ ಭಾಗದ ಪ್ರಾದೇಶಿಕ ಕೇಂದ್ರಗಳಿಗೆ ಭೇಟಿ ನೀಡಿ ದಾಖಲಾತಿ ಪರಿಶೀಲನೆ ನಡೆಸಿಕೊಳ್ಳಬೇಕೆಂದು ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ. ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶೇಷವಾಗಿ ಬೆಂಗಳೂರು ಭಾಗದ ವಿದ್ಯಾರ್ಥಿಗಳು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿರುವ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.

KSOU Admission Details-ಯಾವೆಲ್ಲ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ?

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಈ ಕೆಳಗಿನ ಪಟ್ಟಿಯಲ್ಲಿರುವ ಪದವಿಗಳನ್ನು ವ್ಯಾಸಂಗ ಮಾಡಲು ಪ್ರವೇಶವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸ್ನಾತಕ ಪದವಿಗಳು (UG): ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ., ಮತ್ತು ಬಿ.ಲಿಬ್.ಐ. ಎಸ್ಸಿ.

ಇದನ್ನೂ ಓದಿ: FID Number-ರಸಗೊಬ್ಬರ ಮಾಫಿಯಾಗೆ ‘ಫ್ರೂಟ್ಸ್’ ಬ್ರೇಕ್: ಇನ್ಮುಂದೆ FID ನಂಬರ್ ಇದ್ದರೆ ಮಾತ್ರ ಗೊಬ್ಬರ!

ಸ್ನಾತಕೋತ್ತರ ಪದವಿಗಳು (PG): ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಸ್ಸಿ., ಮತ್ತು ಎಂ.ಲಿಬ್.ಐ. ಎಸ್ಸಿ.

ಇತರೆ: ಪಿಜಿ ಡಿಪ್ಲೊಮಾ, ಡಿಪ್ಲೊಮಾ ಮತ್ತು ವಿವಿಧ ಸರ್ಟಿಫಿಕೇಟ್ ಕೋರ್ಸ್‌ಗಳು.

ಇದನ್ನೂ ಓದಿ: SSLC Key Answer-SSLC ಪರೀಕ್ಷೆ 1ರ ಕೀ ಉತ್ತರಗಳು ಬಿಡುಗಡೆ: ಏಪ್ರಿಲ್ 24ಕ್ಕೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ!

Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ:

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಈ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Step-1: ಅರ್ಜಿದಾರ ವಿದ್ಯಾರ್ಥಿಗಳು ಮೊದಲಿಗೆ ಇಲ್ಲಿ ನೀಡಿರುವ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Free Tailoring Course-ಮಹಿಳೆಯರಿಗೆ ಉಚಿತ ಟೈಲರಿಂಗ್‌ ತರಬೇತಿಗಾಗಿ ಅರ್ಜಿ ಆಹ್ವಾನ!

ksou mysuru Application

Step-2: ಇದಾದ ಬಳಿಕ ಈ ಪೇಜ್ ನಲ್ಲಿ "2025-26 ಜನವರಿ ಆವೃತ್ತಿಯ ಪ್ರವೇಶಾತಿಗಾಗಿ ಕ್ಲಿಕ್ ಮಾಡಿ" ನಂತರ New Registration ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ ಅನ್ನು ರಚನೆ ಮಾಡಿಕೊಂಡು ಲಾಗಿನ್ ಅಗಬೇಕು.

Step-3: ಲಾಗಿನ್ ಅದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರ ಮತ್ತು ದಾಖಲೆಗಳನ್ನು ಸಲ್ಲಿಸಿ ಕೊನೆಯಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: