Free School Admission-ಗವಿಸಿದ್ದೇಶ್ವರ ವಸತಿ ಶಾಲೆಯಲ್ಲಿ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನ!

April 13, 2026 | Siddesh
Free School Admission-ಗವಿಸಿದ್ದೇಶ್ವರ ವಸತಿ ಶಾಲೆಯಲ್ಲಿ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನ!
Share Now:

ಕೊಪ್ಪಳ: ಶಿಕ್ಷಣದ ಕಾಶಿಯೆಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಆವರಣದಲ್ಲಿರುವ 'ಶ್ರೀ ಗವಿಸಿದ್ದೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯ'ವು 2026-27ನೇ ಸಾಲಿಗೆ ಹೊಸ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಈ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಆಶೀರ್ವಾದದೊಂದಿಗೆ ನಡೆಯುತ್ತಿರುವ ಈ ಸಂಸ್ಥೆಯು ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿದೆ.

ಈ ಸಾಲಿನಲ್ಲಿ ಕನ್ನಡ ಮಾಧ್ಯಮದ 5 ರಿಂದ 9ನೇ ತರಗತಿಯವರೆಗೆ ಕೇವಲ ಬಾಲಕರಿಗೆ ಮಾತ್ರ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದೆ. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಸಕ್ತ ಪೋಷಕರು ನಿಗದಿತ ಸಮಯದೊಳಗೆ ತಮ್ಮ ಮಕ್ಕಳ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಮಠದ ಶಿಸ್ತು, ಸಂಸ್ಕಾರಯುತ ಶಿಕ್ಷಣ ಹಾಗೂ ಆಧ್ಯಾತ್ಮಿಕ ಪರಿಸರದಲ್ಲಿ ಕಲಿಯಲು ಬಯಸುವ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ.

ಇದನ್ನೂ ಓದಿ: Coconut Farm Subsidy-ತೋಟಗಾರಿಕೆ ಇಲಾಖೆಯಿಂದ ತೆಂಗಿನ ತೋಟ ನಿರ್ಮಾಣಕ್ಕೆ ₹56,000 ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಸಲು ಇಚ್ಛಿಸುವವರು ಮಠದ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ಪ್ರಕಟಣೆಯಲ್ಲಿರುವ ಕ್ಯೂ-ಆರ್ ಕೋಡ್ (QR Code) ಸ್ಕ್ಯಾನ್ ಮಾಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಮೇ 20, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು ಹಾಗೂ ಅಗತ್ಯ ಮಾಹಿತಿಯೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಾಲಾ ಕಚೇರಿ ವೇಳೆಯಲ್ಲಿ ಆಡಳಿತ ಮಂಡಳಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

How To Apply-ಎಲ್ಲಿ ಅರ್ಜಿ ಸಲ್ಲಿಸಬೇಕು?

ಶ್ರೀ ಗವಿಸಿದ್ದೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯ ಶಾಲೆಯಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಇಲ್ಲಿ ನೀಡಿರುವ ಮಠದ ಅಧಿಕೃತ ತಂತ್ರಾಂಶವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಮೇ 2026

ಇದನ್ನೂ ಓದಿ: BPL Card-14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಕಾರ್ಯ ಚುರುಕು! ಇಲ್ಲಿದೆ ರದ್ದಾದ ಕಾರ್ಡ ಪಟ್ಟಿ!

Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

Step-1: ವಿದ್ಯಾರ್ಥಿಯು ಮೊದಲ ಹಂತದಲ್ಲಿ ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಶ್ರೀ ಗವಿಸಿದ್ದೇಶ್ವರ ಮಠದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: PUC Marks Card-ಪಿಯುಸಿ ಅಂಕಪಟ್ಟಿಯನ್ನು ಮೊಬೈಲ್‌ನಲ್ಲೇ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ!

Free School Admission (2)

ಇದನ್ನೂ ಓದಿ: 2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

Step-2: ಇದಾದ ನಂತರ ಇಲ್ಲಿ ಮುಖಪುಟದಲ್ಲಿ ಮೇಲೆ ಕಾಣಿಸುವ "ಪ್ರವೇಶ ಪರೀಕ್ಷೆ ಅರ್ಜಿ/Hostel Entracnce Test" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ಈ ಪೇಜ್ ನಲ್ಲಿ ವಿದ್ಯಾರ್ಥಿಯ ಪೋಟೋ ಅಪ್ಲೋಡ್ ಮಾಡಿಕೊಂಡು ಬಳಿಕ ಇಲ್ಲಿ ಕೇಳಿರುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೆಳಗೆ ಕಾಣಿಸುವ "ಅರ್ಜಿ ಸಲ್ಲಿಕೆ/Submit Application" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮುಂದಿನ ಪೇಜ್ ಪ್ರವೇಶ ಮಾಡಿ.

Step-4: ನಂತರ ಇಲ್ಲಿ ವಿದ್ಯಾರ್ಥಿಯ ಆಧಾರ್ ಕಾರ್ಡ ನಂಬರ್ ನಮೂದಿಸಿ ಇನ್ನಿತರೆ ಅವಶ್ಯಕ ಮಾಹಿತಿಯನ್ನು ಭರ್ತಿ ಮಾಡಿಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: SSLC Key Answer-SSLC ಪರೀಕ್ಷೆ 1ರ ಕೀ ಉತ್ತರಗಳು ಬಿಡುಗಡೆ: ಏಪ್ರಿಲ್ 24ಕ್ಕೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ!

ಪ್ರಮುಖ ಮಾಹಿತಿಗಳು:

ವಿಷಯವಿವರ
ಯಾರೆಲ್ಲ ಅರ್ಜಿ ಸಲ್ಲಿಸಬಹುದು?5 ರಿಂದ 9ನೇ ತರಗತಿಯ ಬಾಲಕರು (ಕನ್ನಡ ಮಾಧ್ಯಮ)
ಅರ್ಜಿ ಸಲ್ಲಿಸುವ ವಿಧಾನಆನ್‌ಲೈನ್ ಮೂಲಕ (ವೆಬ್‌ಸೈಟ್ ಅಥವಾ QR ಕೋಡ್)
ಅಧಿಕೃತ ವೆಬ್‌ಸೈಟ್https://sgh.gavimathkoppal.org/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-05-2026 (ಬುಧವಾರ)
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ08539-221026 ಅಥವಾ 9353037551

ಇದನ್ನೂ ಓದಿ: Toll Plazas New Rules-ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ನಗದು ವ್ಯವಹಾರಕ್ಕೆ ಬ್ರೇಕ್: ಏಪ್ರಿಲ್ 10 ರಿಂದ ಹೊಸ ನಿಯಮ ಜಾರಿ!

Required Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ವಿದ್ಯಾರ್ಥಿಗಳು ಶಾಲಾ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯಕವಾಗಿ ಒದಗಿಸಬೇಕಾದ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar
ಅಂಕಪಟ್ಟಿ/Marks Card
ವಿದ್ಯಾರ್ಥಿಯ ಪೋಟೋ/Student Photo
ಮೊಬೈಲ್ ನಂಬರ್/Mobile Number

"ನಾನು ಕಳೆದ ಮೂರು ವರ್ಷಗಳಿಂದ ಈ ವಸತಿ ನಿಲಯದಲ್ಲಿ ಓದುತ್ತಿದ್ದೇನೆ. ಇಲ್ಲಿ ಕೇವಲ ಪುಸ್ತಕದ ಪಾಠ ಮಾತ್ರವಲ್ಲದೆ, ಸಮಯ ಪ್ರಜ್ಞೆ ಮತ್ತು ಶಿಸ್ತನ್ನು ಕಲಿಸುತ್ತಾರೆ. ದಾಸೋಹದ ಪ್ರಸಾದ ನಮಗೆ ಓದಲು ಇನ್ನಷ್ಟು ಶಕ್ತಿ ನೀಡುತ್ತದೆ. ಇಲ್ಲಿನ ಶಿಕ್ಷಕರು ನಮ್ಮನ್ನು ಸ್ವಂತ ಮಕ್ಕಳಂತೆ ನೋಡಿಕೊಳ್ಳುತ್ತಾರೆ," ಎನ್ನುತ್ತಾರೆ ಇಲ್ಲಿನ ಹಾಲಿ ವಿದ್ಯಾರ್ಥಿ. -ಸಿದ್ದೇಶ್, ವಿದ್ಯಾರ್ಥಿ

ಶಾಲೆಯ ಆಡಳಿತಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, "ನಮ್ಮ ಸಂಸ್ಥೆಯು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಅರ್ಹ ಅಭ್ಯರ್ಥಿಗಳು ತಾಂತ್ರಿಕ ತೊಂದರೆ ತಪ್ಪಿಸಲು ಕೊನೆಯ ದಿನಾಂಕದವರೆಗೂ ಕಾಯದೆ ಶೀಘ್ರವಾಗಿ ಅರ್ಜಿ ಸಲ್ಲಿಸಿ. ಪಾರದರ್ಶಕವಾದ ಪ್ರವೇಶ ಪರೀಕ್ಷೆಯ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ," ಎಂದು ತಿಳಿಸಿದ್ದಾರೆ. -ಶಾಲೆಯ ಆಡಳಿತಾಧಿಕಾರಿಗಳು

For More Information-ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08539-221026 ಅಥವಾ 9553037551

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: