Skill Training-24 ದಿನಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ!

April 15, 2026 | Siddesh
Skill Training-24 ದಿನಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ!
Share Now:

ಕೊಪ್ಪಳ: ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ಕಾರ್ಯ ನಿರ್ವಹಿಸುವ ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರದ(ಸಿಡಾಕ್) ವತಿಯಿಂದ(Skill Training Karnataka) ಪರಿಶಿಷ್ಟ ಪಂಗಡ ವರ್ಗದ ಮಹಿಳೆಯರಿಗೆ 24 ದಿನಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್(Free Fashion Design Course) ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಜ್ಯದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಮತ್ತು ಸ್ವಂತ ಉದ್ಯೋಗದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಸರ್ಕಾರವು ಹಲವು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಭಾಗವಾಗಿ, ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ವತಿಯಿಂದ ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ ವಿಶೇಷ ತರಬೇತಿ(Free Fashion Designing Training) ಆಯೋಜಿಸಲಾಗಿದೆ.

ಇದನ್ನೂ ಓದಿ: Danta Bhagya-ರಾಜ್ಯಾದ್ಯಂತ ದಂತ ಭಾಗ್ಯ ಯೋಜನೆ ಜಾರಿ! ಯಾವೆಲ್ಲ ಸೌಲಭ್ಯ ಪಡೆಯಬಹುದು?

ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಪ್ಪಳ ಜಿಲ್ಲೆ ಇವರ ಪ್ರಕಟಣೆಯ ಪ್ರಕಾರ, ಮಹಿಳೆಯರಲ್ಲಿ ಉದ್ಯಮಶೀಲತಾ ಮನೋಭಾವನೆಯನ್ನು(Government Free Training For Women) ಬೆಳೆಸಲು 24 ದಿನಗಳ ಕಾಲ ತಜ್ಞರಿಂದ "ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್" ಕುರಿತು ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಈ ಕಾರ್ಯಕ್ರಮವು ಕೇವಲ ತರಬೇತಿಗೆ ಸೀಮಿತವಾಗದೆ, ಅಭ್ಯರ್ಥಿಗಳು ತಮ್ಮದೇ ಆದ ಸಣ್ಣ ಉದ್ಯಮವನ್ನು ಪ್ರಾರಂಭಿಸಲು ಬೇಕಾದ ಮಾರ್ಗದರ್ಶನವನ್ನೂ ನೀಡಲಿದೆ ಎಂದು ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ತರಬೇತಿ ಶಿಬಿರವು ಕೊಪ್ಪಳ ನಗರ ವ್ಯಾಪ್ತಿಯಲ್ಲಿ ನಡೆಯಲಿದ್ದು, ಆಯ್ದ ಅಭ್ಯರ್ಥಿಗಳಿಗೆ(Free Tailoring Classes) ಪ್ರಾಯೋಗಿಕ ಜ್ಞಾನದ ಜೊತೆಗೆ ಸರ್ಕಾರದಿಂದ ಲಭ್ಯವಿರುವ ವಿವಿಧ ಸೌಲಭ್ಯಗಳು ಮತ್ತು ಸಾಲ ಸೌಲಭ್ಯಗಳ ಮಾಹಿತಿಯನ್ನು ಒದಗಿಸಲಾಗುತ್ತದೆ. ಹೊಲಿಗೆ ವೃತ್ತಿಯಲ್ಲಿ ಹೊಸತನವನ್ನು ಹುಡುಕುತ್ತಿರುವ ಮತ್ತು ಫ್ಯಾಶನ್ ಕ್ಷೇತ್ರದಲ್ಲಿ ಬೆಳೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಯುವತಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಇದನ್ನೂ ಓದಿ: Bapuji Seva Kendra-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ನೂತನ ವ್ಯವಸ್ಥೆ ಜಾರಿ!

Who Can Apply-ಯಾರು ಭಾಗವಹಿಸಬಹುದು?

ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರದ(ಸಿಡಾಕ್) ವತಿಯಿಂದ ಪ್ರಸ್ತುತ ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಯಲ್ಲಿ ಭಾಗವಹಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

  • ಪರಿಶಿಷ್ಟ ಪಂಗಡ ವರ್ಗದ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  • ಕರ್ನಾಟಕ ರಾಜ್ಯದ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
  • 18 ರಿಂದ 35 ವರ್ಷದ ಒಳಗಿನ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
  • ಅರ್ಜಿದಾರರು ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

ಇದನ್ನೂ ಓದಿ: Free School Admission-ಗವಿಸಿದ್ದೇಶ್ವರ ವಸತಿ ಶಾಲೆಯಲ್ಲಿ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನ!

How To Apply For Free Tailoring Training-ಅರ್ಜಿ ಸಲ್ಲಿಸುವುದು ಹೇಗೆ?

ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಯನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಮಹಿಳಾ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು 7204016012 ಸಂಖ್ಯೆಗೆ ಕರೆ ಮಾಡಿ ನೋಂದಣಿಯನ್ನು ಮಾಡಿಕೊಳ್ಳಬಹುದು.

Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಎಪ್ರಿಲ್ 2026

Free Fashion Designing Training-ತರಬೇತಿಯಲ್ಲಿ ಯಾವೆಲ್ಲ ವಿಷಯದ ಬಗ್ಗೆ ಮಾಹಿತಿ ತಿಳಿಸಲಾಗುತ್ತದೆ:

ಅರ್ಜಿಯನ್ನು ಸಲ್ಲಿಸಿ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಈ ಕೆಳಗಿನ ಪಟ್ಟಿಯಲ್ಲಿರುವ ವಿಷಯದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ:

ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ಕುರಿತು ಪ್ರಯೋಗಿಕ ತರಬೇತಿ.
ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು.
ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಸ್ವಂತ ಉದ್ಯೋಗವನ್ನು ಆರಂಭಿಸಲು ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಮಾಹಿತಿ.

ಇದನ್ನೂ ಓದಿ: PUC Marks Card-ಪಿಯುಸಿ ಅಂಕಪಟ್ಟಿಯನ್ನು ಮೊಬೈಲ್‌ನಲ್ಲೇ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ!

Self-employment Training-ತರಬೇತಿ ಎಲ್ಲಿ ನಡೆಯುತ್ತದೆ?

ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಭೇತಿಯು ಜಿಲ್ಲಾ ಕೈಗಾರಿಕಾ ಕೇಂದ್ರ(DIC) ಕೊಪ್ಪಳ ಜಿಲ್ಲೆಯ ಕೇಂದ್ರದಿಂದ ಆಯೋಜನೆ ಮಾಡಲಾಗಿದ್ದು ಕೊಪ್ಪಳ ಜಿಲ್ಲೆಯ ನಗರ ವ್ಯಾಪ್ತಿಯಲ್ಲಿ ಈ ತರಬೇತಿಯನ್ನು ಆಯೋಜನೆ ಮಾಡಲಾಗಿದೆ.

Documents-ತರಬೇತಿಯಲ್ಲಿ ಭಾಗವಹಿಸಲು ಅವಶ್ಯವಿರುವ ದಾಖಲೆಗಳು:

  • ಅಭ್ಯರ್ಥಿಯ ಆಧಾರ್ ಕಾರ್ಡ
  • ಪೋಟೋ
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಪ್ರಮಾಣ ಪತ್ರ
  • ರೇಶನ್ ಕಾರ್ಡ್ ಪ್ರತಿ
  • ಮೊಬೈಲ್ ನಂಬರ್

ಇದನ್ನೂ ಓದಿ: BPL Card-14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಕಾರ್ಯ ಚುರುಕು! ಇಲ್ಲಿದೆ ರದ್ದಾದ ಕಾರ್ಡ ಪಟ್ಟಿ!

ಇದು ಉಚಿತ ತರಬೇತಿಯಾಗಿದ್ದು, ಸೀಮಿತ ಸೀಟುಗಳು ಲಭ್ಯವಿರುತ್ತವೆ. ಆಸಕ್ತರು ಕೂಡಲೇ ನೋಂದಣಿ ಮಾಡಿಕೊಳ್ಳಲು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: