Free Mushroom Training-ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಕೆನರಾ ಬ್ಯಾಂಕ್‌ನಿಂದ ಉಚಿತ ಅಣಬೆ ಬೇಸಾಯ ತರಬೇತಿ!

April 25, 2026 | Siddesh
Free Mushroom Training-ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಕೆನರಾ ಬ್ಯಾಂಕ್‌ನಿಂದ ಉಚಿತ ಅಣಬೆ ಬೇಸಾಯ ತರಬೇತಿ!
Share Now:

ಬೆಂಗಳೂರು: ಸ್ವಾವಲಂಬಿ ಜೀವನ ನಡೆಸಲು ಬಯಸುವ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಹೊಸಕೋಟೆಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RSETI) ಹತ್ತು ದಿನಗಳ ಕಾಲ ಉಚಿತ 'ಅಣಬೆ ಬೇಸಾಯ/Free Mushroom Training' ತರಬೇತಿ ಶಿಬಿರವನ್ನು ಆಯೋಜಿಸಿದೆ. ಕೃಷಿ ಕ್ಷೇತ್ರದಲ್ಲಿ ಲಾಭದಾಯಕ ಉಪಕಸುಬಾಗಿ ಗುರುತಿಸಿಕೊಂಡಿರುವ ಅಣಬೆ ಕೃಷಿಯನ್ನು ವೈಜ್ಞಾನಿಕವಾಗಿ ಹೇಗೆ ಮಾಡಬೇಕು ಎಂಬುದನ್ನು ಈ ಶಿಬಿರದಲ್ಲಿ ಕಲಿಸಿಕೊಡಲಾಗುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಈ ಸಂಸ್ಥೆಯು, ಕೇವಲ ತರಬೇತಿಯನ್ನಷ್ಟೇ(Mushroom Farming) ಅಲ್ಲದೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಹತ್ತು ದಿನಗಳ ಕಾಲ ಉಚಿತ ಊಟ ಮತ್ತು ವಸತಿ ಸೌಕರ್ಯವನ್ನು ಸಹ ಒದಗಿಸಲಿದೆ. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 50 ವರ್ಷದೊಳಗಿನ ಆಸಕ್ತ ಪುರುಷ ಮತ್ತು ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ: Scholarship Application-ಪದವಿಪೂರ್ವ ತರಗತಿ ವಿದ್ಯಾರ್ಥಿಗಳಿಗೆ ₹60,000 ವಿದ್ಯಾರ್ಥಿ ವೇತನ ಪಡೆಯಲು ಇಲ್ಲಿದೆ ಅವಕಾಶ!

ಅಣಬೆ ಕೃಷಿಯು ಅಲ್ಪ ಅವಧಿಯಲ್ಲಿ, ಕಡಿಮೆ ಜಾಗದಲ್ಲಿ ಹೆಚ್ಚಿನ ಲಾಭ ತಂದುಕೊಡುವ ಉದ್ಯೋಗವಾಗಿದೆ. ಆಧುನಿಕ ಆಹಾರ ಪದ್ಧತಿಯಲ್ಲಿ ಅಣಬೆಗೆ(Anabe Krishi) ಹೆಚ್ಚಿನ ಬೇಡಿಕೆ ಇರುವುದರಿಂದ, ತರಬೇತಿ ಪಡೆದ ನಂತರ ಸ್ವಂತ ಉದ್ಯಮ ಆರಂಭಿಸಲು ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಲಿದೆ. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವತಿಯಿಂದ ಅಧಿಕೃತ ಪ್ರಮಾಣ ಪತ್ರವನ್ನು ವಿತರಿಸಲಾಗುವುದು, ಇದು ಮುಂದಿನ ದಿನಗಳಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಪಡೆಯಲು ನೆರವಾಗಲಿದೆ.

Mushroom Traning Details-ತರಬೇತಿ ವಿವರಗಳು ಮತ್ತು ಅರ್ಹತೆ:

  • ತರಬೇತಿ ಅವಧಿ: 11-05-2026 ರಿಂದ (10 ದಿನಗಳು)
  • ವಯೋಮಿತಿ: 18 ರಿಂದ 50 ವರ್ಷಗಳು.
  • ಅರ್ಹತೆ: ಅಭ್ಯರ್ಥಿಗಳು ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
  • ಸೌಲಭ್ಯಗಳು: ಉಚಿತ ತರಬೇತಿ, ಉಚಿತ ವಸತಿ ಮತ್ತು ಊಟದ ವ್ಯವಸ್ಥೆ.

ಇದನ್ನೂ ಓದಿ: Bannerghatta Trip-ಕೆ.ಎಸ್.ಟಿ.ಡಿ.ಸಿ ಯಿಂದ ಬನ್ನೇರುಘಟ್ಟ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್ ಬಿಡುಗಡೆ!

anabe krishi

ಇದನ್ನೂ ಓದಿ: AO and AAO Recruitment-ಕೃಷಿ ಇಲಾಖೆಯಲ್ಲಿ ಬೃಹತ್ ನೇಮಕಾತಿ: 600ಕ್ಕೂ ಹೆಚ್ಚು ಹುದ್ದೆಗಳಿಗೆ ಕೆಇಎಯಿಂದ ಅರ್ಜಿ ಆಹ್ವಾನ!

Training Interview-ನೇರ ಸಂದರ್ಶನ:

ಆಸಕ್ತ ಅಭ್ಯರ್ಥಿಗಳು ದಿನಾಂಕ 05-05-2026 (ಮಂಗಳವಾರ) ಬೆಳಿಗ್ಗೆ 10:00 ಗಂಟೆಗೆ ತಮ್ಮ ವಿದ್ಯಾರ್ಹತೆ ಮತ್ತು ವಿಳಾಸದ ಮೂಲ ದಾಖಲೆಗಳೊಂದಿಗೆ (ಆಧಾರ್ ಕಾರ್ಡ್, ರೇಷನ್ ಕಾರ್ಡ್ ಇತ್ಯಾದಿ) ಸೊಣ್ಣಹಳ್ಳಿಪುರದ ತರಬೇತಿ ಸಂಸ್ಥೆಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

Who Can Apply-ತರಬೇತಿಯಲ್ಲಿ ಭಾಗವಹಿಸುವುದು ಹೇಗೆ?

ಒಂದು ವೇಳೆ ನಿಗದಿತ ದಿನದಂದು ನೇರವಾಗಿ ಹಾಜರಾಗಲು ಸಾಧ್ಯವಾಗದಿದ್ದರೆ, 05-05-2026ರ ಒಳಗೆ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ದೂರವಾಣಿ ಸಂಖ್ಯೆ  8970476050, 9591514154, 9686248369,̳̳6363139123, 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ: Free Poulty Farming Training-ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Training Center Address-ತರಬೇತಿ ಕೇಂದ್ರದ ವಿಳಾಸ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI), ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.

ಸ್ವಂತ ಉದ್ಯೋಗ ಮಾಡುವ ಛಲವಿರುವ ಅರ್ಹ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಲು ಸಂಸ್ಥೆಯು ಪ್ರಕಟಣೆಯ ಮೂಲಕ ಕರೆ ನೀಡಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: