Vasati Shale Admission-ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿ ಆರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ!

April 26, 2026 | Siddesh
Vasati Shale Admission-ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿ ಆರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ!
Share Now:

ಬೆಂಗಳೂರು: ರಾಜ್ಯದ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಸರ್ಕಾರ ಆಸರೆಯಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಪ್ರತಿಷ್ಠಿತ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ(PUC Residential Colleges) 2026-27ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗುಣಮಟ್ಟದ ಶಿಕ್ಷಣದ ಜೊತೆಗೆ ವಸತಿ ಸೌಲಭ್ಯವನ್ನೂ ಬಯಸುವ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ.

ರಾಜ್ಯಾದ್ಯಂತ ಇರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಕಾಲೇಜುಗಳು ಸೇರಿದಂತೆ ಒಟ್ಟು 104 ಆಂಗ್ಲ ಮಾಧ್ಯಮ ಕಾಲೇಜುಗಳಲ್ಲಿ ಈ ಪ್ರವೇಶಾತಿ ನಡೆಯಲಿದೆ. ಈ ಬಾರಿ ವಿಜ್ಞಾನ ವಿಭಾಗದ ಕಡೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ PCMB (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ) ಅಥವಾ PCMC (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಕಂಪ್ಯೂಟರ್ ಸೈನ್ಸ್) ಸಂಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Free Mushroom Training-ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಕೆನರಾ ಬ್ಯಾಂಕ್‌ನಿಂದ ಉಚಿತ ಅಣಬೆ ಬೇಸಾಯ ತರಬೇತಿ!

ಒಟ್ಟು ಲಭ್ಯವಿರುವ 8,320 ಸೀಟುಗಳಿಗಾಗಿ ಪೈಪೋಟಿ ನಡೆಯಲಿದ್ದು, ಪ್ರತಿ ತರಗತಿಗೆ 80 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸರ್ಕಾರದ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿದ್ದಾರೆ. ಆಸಕ್ತರು ನಿಗದಿತ ಕಾಲಮಿತಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು:

ವಸತಿ ಕಾಲೇಜುಗಳಲ್ಲಿ ಪ್ರವೇಶವನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿವೆ:

ವಿದ್ಯಾರ್ಥಿಯು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತರೆ.
ಪ.ಜಾತಿ/ಪ.ವರ್ಗ/ಪ್ರವರ್ಗ-1 ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 2,50,000/- ಇರಬೇಕು.
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 1,00,000/- ಇರಬೇಕು.

ಇದನ್ನೂ ಓದಿ: Scholarship Application-ಪದವಿಪೂರ್ವ ತರಗತಿ ವಿದ್ಯಾರ್ಥಿಗಳಿಗೆ ₹60,000 ವಿದ್ಯಾರ್ಥಿ ವೇತನ ಪಡೆಯಲು ಇಲ್ಲಿದೆ ಅವಕಾಶ!

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 29, 2026

ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟದಿಂದಾಗಿ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ 104 ವಸತಿ ಕಾಲೇಜುಗಳಲ್ಲಿ ಅತ್ಯುತ್ತಮ ಮೂಲಸೌಕರ್ಯ ಹಾಗೂ ಬೋಧನಾ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.-ಕಾರ್ಯನಿರ್ವಹಕ ನಿರ್ದೇಶಕರು,ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ.

Vasati Shale Admission Online Application-ಅನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗ್?

ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಲು ಆಸಕ್ತಿಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲಿಗೆ ಈ Apply Now ವೆಬ್ಸೈಟ್ ಲಿಂಕ್ ಮೇಲ್ ಕ್ಲಿಕ್ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Bannerghatta Trip-ಕೆ.ಎಸ್.ಟಿ.ಡಿ.ಸಿ ಯಿಂದ ಬನ್ನೇರುಘಟ್ಟ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್ ಬಿಡುಗಡೆ!

ಇದನ್ನೂ ಓದಿ: AO and AAO Recruitment-ಕೃಷಿ ಇಲಾಖೆಯಲ್ಲಿ ಬೃಹತ್ ನೇಮಕಾತಿ: 600ಕ್ಕೂ ಹೆಚ್ಚು ಹುದ್ದೆಗಳಿಗೆ ಕೆಇಎಯಿಂದ ಅರ್ಜಿ ಆಹ್ವಾನ!

Step-2: ಇದಾದ ಬಳಿಕ ಈ ಪೇಜ್ ನಲ್ಲಿರುವ ಕೇಳಿರುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Free Poulty Farming Training-ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Required Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ವಸತಿ ಶಾಲೆಯ ಪ್ರವೇಶಕ್ಕೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯವಿರುವ ದಾಖಲೆಗಳ ಪಟ್ಟಿ ಹೀಗಿದೆ:

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • ವಿದ್ಯಾರ್ಥಿಯ SATS ಸಂಖ್ಯೆ
  • ವ್ಯಾಸಂಗ ಪ್ರಮಾಣ ಪತ್ರ
  • ಮೊಬೈಲ್ ನಂಬರ್

Helpline Number-ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ:

ಯಾವುದೇ ತಾಂತ್ರಿಕ ತೊಂದರೆಗಳಿದ್ದಲ್ಲಿ 9482000400 ಸಂಖ್ಯೆಯನ್ನು ಸಂಪರ್ಕಿಸಬಹುದು ಅಥವಾ ಹೆಚ್ಚಿನ ವಿವರಗಳಿಗಾಗಿ ಹತ್ತಿರದ ವಸತಿ ಕಾಲೇಜಿನ ಪ್ರಾಂಶುಪಾಲರನ್ನು ಭೇಟಿ ಮಾಡಬಹುದು.

Official Notification/ಅಧಿಕೃತ ಅಧಿಸೂಚನೆ-Download Now
PUC Residential Colleges List/ವಸತಿ ಶಾಲೆ ಪಟ್ಟಿ- Download Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: