Fast Food Training-ಉಚಿತ ಫಾಸ್ಟ್ ಫುಡ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

April 30, 2026 | Siddesh
Fast Food Training-ಉಚಿತ ಫಾಸ್ಟ್ ಫುಡ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!
Share Now:

ಹಾವೇರಿ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ, ಹಾವೇರಿ ಘಟಕವು 'ಫಾಸ್ಟ್ ಫುಡ್ ಉದ್ಯಮಿ/Free Fast Food Training' ಎಂಬ ವಿನೂತನ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಇಂದಿನ ವೇಗದ ಬದುಕಿನಲ್ಲಿ ಆಹಾರೋದ್ಯಮವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ಷೇತ್ರವಾಗಿದ್ದು, ಈ ಕ್ಷೇತ್ರದಲ್ಲಿ ಪರಿಣತಿ ಪಡೆಯಲು ಬಯಸುವವರಿಗೆ ಇದು ಸುಸಂದರ್ಭವಾಗಿದೆ.

ಈ ತರಬೇತಿಯ ವಿಶೇಷತೆಯೆಂದರೆ ಆಯ್ದ ಅಭ್ಯರ್ಥಿಗಳಿಗೆ ಸಂಪೂರ್ಣ 12 ದಿನಗಳ ಕಾಲ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಕೇವಲ ತರಬೇತಿಯಷ್ಟೇ(Free Fast Food Training Application) ಅಲ್ಲದೆ, ಅಭ್ಯರ್ಥಿಗಳಿಗೆ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯವನ್ನೂ ಸಂಸ್ಥೆಯು ಒದಗಿಸಲಿದೆ. ತರಬೇತಿಯಲ್ಲಿ ಫಾಸ್ಟ್ ಫುಡ್ ತಯಾರಿಕೆ, ಗುಣಮಟ್ಟದ ನಿರ್ವಹಣೆ, ಗ್ರಾಹಕರ ಸೇವೆ ಮತ್ತು ಉದ್ಯಮವನ್ನು ಯಶಸ್ವಿಯಾಗಿ ಮುನ್ನಡೆಸುವ ಆರ್ಥಿಕ ಶಿಸ್ತಿನ ಬಗ್ಗೆ ತಜ್ಞರಿಂದ ಪ್ರಾಯೋಗಿಕ ಮಾಹಿತಿ ನೀಡಲಾಗುವುದು. ಸ್ವಂತ ಹೋಟೆಲ್ ಅಥವಾ ಕೆಫೆ ಪ್ರಾರಂಭಿಸುವ ಕನಸು ಕಂಡಿರುವ ಯುವಜನತೆಗೆ ಇದು ಭದ್ರ ಬುನಾದಿಯಾಗಲಿದೆ.

ಇದನ್ನೂ ಓದಿ: e-Swathu 2.0-ನಿಮ್ಮ ಆಸ್ತಿ, ನಿಮ್ಮ ಹಕ್ಕು: ಇ-ಸ್ವತ್ತು ಪಡೆಯಲು ಈಗ ಹೊಸ ಸರಳ ವ್ಯವಸ್ಥೆ ಜಾರಿ!

ತರಬೇತಿಗೆ ಸೇರಲು ಬಯಸುವ ಅಭ್ಯರ್ಥಿಗಳು ಕೆಲವು ಕನಿಷ್ಠ ಅರ್ಹತೆಗಳನ್ನು ಹೊಂದಿರಬೇಕು. 18 ರಿಂದ 45 ವರ್ಷ ವಯೋಮಿತಿಯೊಳಗಿನ ಕನ್ನಡ ಓದಲು ಮತ್ತು ಬರೆಯಲು ಬರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ತರಬೇತಿ ಶಿಬಿರವು ಮೇ 12, 2026 ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆಸಕ್ತರು ತಡಮಾಡದೆ ಮೇ 4, 2026 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ವಿಶೇಷವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಈ ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು.

Free Fast Food Training Details-ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು?

ಉಚಿತ ಫಾಸ್ಟ್ ಫುಡ್ ಉದ್ಯಮಿ ತರಬೇತಿಯನ್ನು ಪಡೆಯಲು ಯಾರೆಲ್ಲ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿಯನ್ನು ಮಾಡಿಕೊಂಡು ಈ ತರಬೇತಿಯನ್ನು ಪಡೆಯಬಹುದು ಎನ್ನುವ ವಿವರ ಹೀಗಿದೆ:

ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
18 ರಿಂದ 45 ವರ್ಷ ವಯೋಮಿತಿಯಲ್ಲಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಕನ್ನಡ ಓದಲು ಮತ್ತು ಬರೆಯಲು ಬರುವಂತ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಬಿಪಿಎಲ್ ಕಾರ್ಡ ಅನ್ನು ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: RTE ಕರ್ನಾಟಕ ಪ್ರವೇಶಾತಿ 2026-27: ಖಾಸಗಿ ಶಾಲೆಯಲ್ಲಿ ಉಚಿತ ಸೀಟ್ ಪಡೆಯಲು ಅರ್ಜಿ ಆಹ್ವಾನ!

Free Fast Food Training

ಇದನ್ನೂ ಓದಿ: Vasati Shale Admission-ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿ ಆರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ!

Free Fast Food Training Application-ಅರ್ಜಿ ಸಲ್ಲಿಸುವುದು ಹೇಗೆ?

ಈ ತರಬೇತಿಯನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಣಿಯನ್ನು ಮಾಡಿಕೊಳ್ಳಲು ಈ 8660219375 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.

  • Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 ಮೇ 2026
  • Fast Food Training Starting Date-ತರಬೇತಿ ಪ್ರಾರಂಭ ದಿನಾಂಕ: 12 ಮೇ 2026

Training Center Address-ತರಬೇತಿ ಕೇಂದ್ರದ ವಿಳಾಸ:

ಉಚಿತ ಫಾಸ್ಟ್ ಫುಡ್ ಉದ್ಯಮಿ ತರಬೇತಿಯನ್ನು ಬ್ಯಾಂಕ್ ಅಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಹಾವೇರಿಯಲ್ಲಿ ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Agriculturist Quota-ಕೃಷಿ ಕೋಟಾ ವಿದ್ಯಾರ್ಥಿಗಳ ಗಮನಕ್ಕೆ: ಕೃಷಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ!

Documents-ತರಬೇತಿಯಲ್ಲಿ ಭಾಗವಹಿಸಲು ಅವಶ್ಯಕ ದಾಖಲೆಗಳು:

ಉಚಿತ ಫಾಸ್ಟ್ ಫುಡ್ ಉದ್ಯಮಿ ತರಬೇತಿಯನ್ನು ಪಡೆಯಲು ಅಭ್ಯರ್ಥಿಗಳು ಒದಗಿಸಬೇಕಾದ ಅಗತ್ಯ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

ಅಭ್ಯರ್ಥಿಯ ಆಧಾರ್ ಕಾರ್ಡ
ಬ್ಯಾಂಕ್ ಪಾಸ್ ಬುಕ್
ಅಭ್ಯರ್ಥಿಯ ಪೋಟೋ
ರೇಶನ್ ಕಾರ್ಡ

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: