Labour Department-ಸಚಿವ ಸಂಪುಟದಲ್ಲಿ ಮಹ್ವತದ ನಿರ್ಣಯ 115.8 ಕೋಟಿ ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಣೆಗೆ ತೀರ್ಮಾನ!

May 2, 2026 | Siddesh
Labour Department-ಸಚಿವ ಸಂಪುಟದಲ್ಲಿ ಮಹ್ವತದ ನಿರ್ಣಯ 115.8 ಕೋಟಿ ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಣೆಗೆ ತೀರ್ಮಾನ!
Share Now:

ಬೆಂಗಳೂರು: ರಾಜ್ಯದ ಕಾರ್ಮಿಕ ವರ್ಗದ ಹಿತರಕ್ಷಣೆ ಮತ್ತು ಅವರ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ (30.04.2026) ನಡೆದ ಸಚಿವ ಸಂಪುಟ ಸಭೆಯಲ್ಲಿ(Karnataka Government Cabinet Meeting) ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತ ಶಾಲಾ ಕಿಟ್ ವಿತರಿಸುವ ಬೃಹತ್ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆಗಾಗಿ ಸರ್ಕಾರವು ಒಟ್ಟು 115.84 ಕೋಟಿ ರೂಪಾಯಿಗಳನ್ನು ವ್ಯಯಿಸಲಿದೆ.

ಕರ್ನಾಟಕ ರಾಜ್ಯ ಸರಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ(Cabinet Meeting) ರಾಜ್ಯದ ಕಾರ್ಮಿಕ ವರ್ಗಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು 115.8 ಕೋಟಿ ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಣೆ ಮಾಡಲು ನಿರ್ಣಯವನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: LPG Price Hike-ವಾಣಿಜ್ಯ ಸಿಲಿಂಡರ್ ಬೆಲೆ 993 ರೂ. ದಿಢೀರ್ ಏರಿಕೆ: ಹೋಟೆಲ್ ಉದ್ಯಮಕ್ಕೆ ಬೆಲೆ ಏರಿಕೆಯ ಬಿಸಿ!

ಇದಲ್ಲದೇ ಇನ್ನಿತರೆ ಪ್ರಮುಕ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು ಗುರುವಾರದಂದು ನಡೆದ ಸಚಿವ ಸಂಪುಟ ಸಭೆಯ ಸಂಪೂರ್ಣ ಮಾಹಿತಿಯನ್ನು ಇಂದಿನ ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಈ ಶಾಲಾ ಕಿಟ್ ವಿತರಣೆಯು ಕಾರ್ಮಿಕರ(Karnataka Labour Department) ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದಲ್ಲದೆ, ಅವರ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಉತ್ತೇಜನ ನೀಡಲಿದೆ. ಕೇವಲ ಕಾರ್ಮಿಕ ಇಲಾಖೆ(Karmika Ilake Yojane) ಮಾತ್ರವಲ್ಲದೆ, ಆರೋಗ್ಯ, ಸಾರಿಗೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಹತ್ತಾರು ಜನಪರ ನಿರ್ಣಯಗಳನ್ನು ಈ ಸಭೆಯಲ್ಲಿ ಕೈಗೊಳ್ಳಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈ ಸಭೆಯು ಅತ್ಯಂತ ನಿರ್ಣಾಯಕವಾಗಿತ್ತು.

ವಿಜಯಪುರದಲ್ಲಿ ಕೈಗಾರಿಕಾ ಘಟಕ ಸ್ಥಾಪನೆ, ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗೆ ಅನುಮೋದನೆ ಹಾಗೂ ವಿವಿಧ ಜಿಲ್ಲೆಗಳಲ್ಲಿ ಮೂಲಸೌಕರ್ಯ ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುವುದು ಸೇರಿದಂತೆ, ಸಂಪುಟವು ಒಟ್ಟು ಹತ್ತು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದೆ.

ಇದನ್ನೂ ಓದಿ: LIC Policy-ಮಕ್ಕಳ ಶಿಕ್ಷಣಕ್ಕೆ LIC ಯಿಂದ ಮೂರು ಯೋಜನೆಗಳು: ನಿಮ್ಮ ಮಗುವಿನ ಭವಿಷ್ಯಕ್ಕೆ ಯಾವುದು ಬೆಸ್ಟ್?

Karnataka Government Cabinet Decisions-ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳ ಪಟ್ಟಿ:

  • ಸುಸ್ಥಿರ ಪ್ರಯಾಣಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಹೈದರಾಬಾದ್ - ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯ ಅನುಷ್ಠಾನಕ್ಕೆ ಅಧಿಕೃತ ಅನುಮೋದನೆ ನೀಡಲಾಗಿದೆ.
  • ರಾಷ್ಟ್ರೀಯ ಉಚಿತ ಆರೋಗ್ಯ ಪತ್ತೆ ಕಾರ್ಯಕ್ರಮದಡಿ 6 ಜಿಲ್ಲಾಸ್ಪತ್ರೆಗಳಿಗೆ 81 ಕೋಟಿ ರೂಪಾಯಿ ವೆಚ್ಚದಲ್ಲಿ 6 ಎಂ.ಆರ್.ಐ (MRI) ಯಂತ್ರಗಳನ್ನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
  • ಅಪರೂಪದ ಜನ್ಮಜಾತ ಮತ್ತು ಚಯಾಪಚಯ ಅಸ್ವಸ್ಥತೆಗಳ ಪತ್ತೆಗಾಗಿ 5.58 ಕೋಟಿ ರೂಪಾಯಿ ವೆಚ್ಚದಲ್ಲಿ 'ಸಾರ್ವಜನಿಕ ನವಜಾತ ಶಿಶು ತಪಾಸಣೆ' ಯೋಜನೆಯನ್ನು ಜಾರಿಗೆ ತರಲು ಸಮ್ಮತಿ ಸೂಚಿಸಲಾಗಿದೆ.

ಇದನ್ನೂ ಓದಿ: Fast Food Training-ಉಚಿತ ಫಾಸ್ಟ್ ಫುಡ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Karnataka Government Cabinet Meeting

ಇದನ್ನೂ ಓದಿ: RTE ಕರ್ನಾಟಕ ಪ್ರವೇಶಾತಿ 2026-27: ಖಾಸಗಿ ಶಾಲೆಯಲ್ಲಿ ಉಚಿತ ಸೀಟ್ ಪಡೆಯಲು ಅರ್ಜಿ ಆಹ್ವಾನ!

  • ಕೆಎಸ್‌ಡಿಎಲ್ (KSDL) ಸಂಸ್ಥೆಯು ವಿಜಯಪುರದ ಇಟ್ಟಂಗಿಹಾಳ ಕೈಗಾರಿಕಾ ಪ್ರದೇಶದಲ್ಲಿ 50 ಎಕರೆ ಜಮೀನಿನಲ್ಲಿ 227.91 ಕೋಟಿ ರೂಪಾಯಿ ವೆಚ್ಚದಲ್ಲಿ ಸೋಪು ಮತ್ತು ಮಾರ್ಜಕ ಉತ್ಪಾದನಾ ಘಟಕ ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ.
  • ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನಲ್ಲಿ ಹೊಸ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 73.75 ಕೋಟಿ ರೂ. ಅನುದಾನ.
  • ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ನೂತನ ಕಟ್ಟಡದ ಹೆಚ್ಚುವರಿ ಕಾಮಗಾರಿಗಳಿಗೆ 20 ಕೋಟಿ ರೂ. ಅನುಮೋದನೆ.
  • ದಕ್ಷಿಣ ಕನ್ನಡದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ 13 ಕೋಟಿ ರೂ. ಬಿಡುಗಡೆ.

ಇದನ್ನೂ ಓದಿ: e-Swathu 2.0-ನಿಮ್ಮ ಆಸ್ತಿ, ನಿಮ್ಮ ಹಕ್ಕು: ಇ-ಸ್ವತ್ತು ಪಡೆಯಲು ಈಗ ಹೊಸ ಸರಳ ವ್ಯವಸ್ಥೆ ಜಾರಿ!

  • ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) 80 ನಗರ ಸಾರಿಗೆ ಬಸ್‌ಗಳನ್ನು ಖರೀದಿಸಲು 32 ಕೋಟಿ ರೂಪಾಯಿಗಳಿಗೆ ಅನುಮೋದನೆ ನೀಡಲಾಗಿದೆ.
  • ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 2026-27 ಮತ್ತು 2027-28ನೇ ಸಾಲಿಗೆ 600 ಕೋಟಿ ರೂಪಾಯಿಗಳ ಬೃಹತ್ ಕ್ರಿಯಾ ಯೋಜನೆಯನ್ನು ರೂಪಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: