Gruhalakshmi Amount-ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್!

May 12, 2026 | Siddesh
Gruhalakshmi Amount-ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್!
Share Now:

ಬೆಂಗಳೂರು/ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ/Gruhalakshmi' ಯೋಜನೆಯ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್(Laxmi Hebbalkar) ಅವರು ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ಕಳೆದ ಕೆಲ ತಿಂಗಳಿಂದ ತಾಂತ್ರಿಕ ಕಾರಣ ಹಾಗೂ ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2,000 ಹಣವು ಸದ್ಯದಲ್ಲೇ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ.

ಬೆಳಗಾವಿ ಜಿಲ್ಲೆಯ ಬಾಕನೂರು ಗ್ರಾಮದಲ್ಲಿ ನಡೆದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಹಣ ಬಿಡುಗಡೆಯ(Gruhalakshmi Yojana) ಪ್ರಕ್ರಿಯೆ ಈಗಾಗಲೇ ಚಾಲನೆಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಪ್ರಸ್ತುತ ಇಂದಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆಗಿನ ಅಧಿಕೃತ ಮಾಹಿತಿ ಮತ್ತು ಫಲಾನುಭವಿಗಳು ತಮ್ಮ ಮೊಬೈಲ್ ನಲ್ಲೇ ಕೇವಲ ಒಂದೆರಡು ಕ್ಲಿಕ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ(Gruhalakshmi Status) ಮಾಹಿತಿಯನ್ನು ಹೇಗೆ ತಿಳಿಯಬಹುದು ಇದಕ್ಕಾಗಿ ಯಾವೆಲ್ಲ ವಿಧಾನಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

Gruhalakshmi Installment Release Date-ಎಷ್ಟು ತಿಂಗಳ ಹಣ ಬಾಕಿ ಇದೆ ಮತ್ತು ಯಾವಾಗ ಜಮಾ?

ಸಚಿವರ ಹೇಳಿಕೆಯಂತೆ, ಪ್ರಮುಖವಾಗಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಕಂತುಗಳು ಬಿಡುಗಡೆಗೆ ಬಾಕಿ ಇವೆ. ಮಾರ್ಚ್ ತಿಂಗಳ ಕಂತು ಮುಂದಿನ 4 ರಿಂದ 5 ದಿನಗಳಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗಲಿದ್ದು, ಏಪ್ರಿಲ್ ತಿಂಗಳ ಹಣವು ಅದರ ಬೆನ್ನಲ್ಲೇ ಅಂದರೆ ಸುಮಾರು 8 ರಿಂದ 10 ದಿನಗಳ ಅಂತರದಲ್ಲಿ ಬಿಡುಗಡೆಯಾಗಲಿದೆ ಎಂದು ಅವರು ಭರವಸೆ ನೀಡಿದ್ದಾರೆ. "ನಾವು ಕೇವಲ ಆಶ್ವಾಸನೆ ನೀಡುವುದಿಲ್ಲ, ಕೆಲಸ ಮಾಡಿ ತೋರಿಸುತ್ತೇವೆ" ಎಂದು ಹೇಳುವ ಮೂಲಕ ಯೋಜನೆಯ ನಿರಂತರತೆಯ ಬಗ್ಗೆ ಮಹಿಳೆಯರಲ್ಲಿ ಮೂಡಿದ್ದ ಗೊಂದಲಕ್ಕೆ ಸಚಿವರು ತೆರೆ ಎಳೆದಿದ್ದಾರೆ.

ಇದನ್ನೂ ಓದಿ: Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

ಪ್ರಮುಖ ಮಾಹಿತಿ:

ವಿಷಯವಿವರ
ಬಾಕಿ ಇರುವ ಕಂತುಗಳುಮಾರ್ಚ್ ಮತ್ತು ಏಪ್ರಿಲ್ 2026
ಮಾರ್ಚ್ ಹಣ ಬಿಡುಗಡೆಇಂದಿನಿಂದ 4-5 ದಿನಗಳಲ್ಲಿ
ಏಪ್ರಿಲ್ ಹಣ ಬಿಡುಗಡೆಇಂದಿನಿಂದ 8-10 ದಿನಗಳಲ್ಲಿ
ಮಾಸಿಕ ಮೊತ್ತ₹2,000

ಇದನ್ನೂ ಓದಿ: Male Munsuchane-ರಾಜ್ಯಾದ್ಯಂತ ವರುಣನ ಅಬ್ಬರ: ಮೇ 11ರವರೆಗೆ ಹಲವೆಡೆ ಭಾರೀ ಮಳೆ ಮುನ್ಸೂಚನೆ!

Gruhalakshmi Status Check On Mobile-ಮೊಬೈಲ್ ನಲ್ಲೇ ಗೃಹಲಕ್ಷ್ಮಿ ಹಣ ಜಮಾ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಫಲಾನುಭವಿಗಳು ತಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿಯಲು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಫಲಾನುಭವಿಗಳು ತಮ್ಮ ಮೊಬೈಲ್ ಮೂಲಕವೇ ಈ ಕೆಳಗಿನ ಹಂತಗಳನ್ನು ಅನುಸರಿಸಿ ಸ್ಟೇಟಸ್ ತಿಳಿಯಬಹುದು:

ವಿಧಾನ-1: DBT Karnataka ಮೊಬೈಲ್ ಅಪ್ಲಿಕೇಶನ್ ಬಳಸಿ ತಿಳಿಯಬಹುದು:

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಗೂಗಲ್ ಪ್ಲೈ ಸ್ಟೋರ್ ಅನ್ನು ಪ್ರವೇಶ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಡಿಬಿಟಿ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಬ್ಯಾಂಕ್ ಅಕೌಂಟ್ ಗೆ ಗೃಹಲಕ್ಷ್ಮಿ ಯೋಜನ ಹಣ ಜಮಾ ಅಗಿರುವುದನ್ನು ಒಂದೆರಡು ಕ್ಲಿಕ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಇದಕ್ಕಾಗಿ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ.

Step-1: ಫಲಾನುಭವಿಗಳು ಮೊದಲಿಗೆ ಈ Gruhalakshmi Status Check ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.

ಇದನ್ನೂ ಓದಿ: Lidkar Competition-ರಾಜ್ಯಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ-2026! ಪ್ರಥಮ ಬಹುಮಾನ ₹50,000!

Step-2: ಬಳಿಕ ಫಲಾನುಭವಿಯ ಆಧಾರ್ ನಂಬರ್ ಹಾಕಿ ಮೊಬೈಲ್ ಸಂಖ್ಯೆಗೆ ಬರುವ OTP ಅನ್ನು ನಮೂದಿಸಿ ಬಳಕೆದಾರ ಐಡಿಯನ್ನು ಸಕ್ರಿಯಗೊಳಿಸಿ ಪಾಸ್ವರ್ಡ್ ರಚಿಸಿಕೊಂಡು ಲಾಗಿನ್ ಅಗಬೇಕು.

Step-3: ಲಾಗಿನ್ ಅದ ನಂತರ ಪಾವತಿ ಸ್ಥಿತಿ ಬಟನ್ ಮೇಲೆ ಕ್ಲಿಕ್ ಮಾಡಿ ಗೃಹಲಕ್ಷ್ಮಿ ಯೋಜನೆ ಆಯ್ಕೆ ಮೇಲೆ ಕ್ಲಿಕ್ ಮಾಡಿ ಇಲ್ಲಿಯವರೆಗೆ ಈ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎನ್ನುವ ಮಾಹಿತಿಯನ್ನು ತಿಳಿಯಬಹುದು.

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ವಿಳಂಬದ ಬಗ್ಗೆ ರಾಜ್ಯದ ಹಲವು ಭಾಗಗಳಿಂದ ತಾಯಂದಿರು ವಿಚಾರಿಸುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು,ಕೆಲವು ತಾಂತ್ರಿಕ ಕಾರಣಗಳು ಹಾಗೂ ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿತ್ತು. ನಾವು ಕೊಟ್ಟ ಮಾತಿನಂತೆ ಯೋಜನೆಯನ್ನು ನಿರಂತರವಾಗಿ ನಡೆಸಿಕೊಂಡು ಹೋಗಲು ಬದ್ಧರಾಗಿದ್ದೇವೆ, ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಕಂತು 8 ರಿಂದ 10 ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಅಗಲಿದೆ.-ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ್,ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ.

ಇದನ್ನೂ ಓದಿ: Bhagyalakshmi Scheme-ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

ವಿಧಾನ-2: ಬ್ಯಾಂಕ್ ಸಹಾಯವಾಣಿಗೆ ಮಿಲ್ ಕಾಲ್ ಮಾಡಿ ತಿಳಿಯಬಹುದು:

ಗೃಹಲಕ್ಷ್ಮಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯಲ್ಲಿ ಈ ಹಿಂದೆ ಇರುವ ಬ್ಯಾಲೆನ್ಸ್ ಅನ್ನು ನೆನಪಿನಲ್ಲಿ ಇಟ್ಟುಕೊಂಡು ಬಳಿಕ ತಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಚೆಕ್ ಸಹಾಯವಾಣಿಗೆ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಮಿಸ್ ಕಾಲ್ ಮಾಡಿ ಪ್ರಸ್ತುತ ಇರುವ ಬ್ಯಾಲೆನ್ಸ್ ಅನ್ನು ಚೆಕ್ ಮಾಡುವ ಮೂಲಕ ಹಣ ಜಮಾ ಅಗಿರುವುದನ್ನು ಖಚಿತಪಡಿಸಿಕೊಳ್ಳಬಹುದು.

  • ಎಲ್ಲಾ ಬ್ಯಾಂಕಿನ ಸಹಾಯವಾಣಿ ಸಂಖ್ಯೆಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ- All Bank Balance Check Mobile Numbers

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: