Free Sheep Farming Training-ಉಚಿತ ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ: ನಿರುದ್ಯೋಗಿ ಯುವಜನತೆಗೆ ಸುವರ್ಣಾವಕಾಶ!

May 15, 2026 | Siddesh
Free Sheep Farming Training-ಉಚಿತ ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ: ನಿರುದ್ಯೋಗಿ ಯುವಜನತೆಗೆ ಸುವರ್ಣಾವಕಾಶ!
Share Now:

ಬೆಂಗಳೂರು: ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವತಂತ್ರ ಗಳಿಸಬಯಸುವ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RUDSETI) ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಿದೆ. ಕೃಷಿ ಪೂರಕ ಚಟುವಟಿಕೆಗಳಲ್ಲಿ ಆಸಕ್ತಿ ಇರುವವರಿಗಾಗಿ ಮೇ 18 ರಿಂದ ಸತತ 13 ದಿನಗಳ ಕಾಲ ಉಚಿತ ಕುರಿ ಸಾಕಾಣಿಕೆ(Uchita Kuri Sakanike Tarabeti) ಹಾಗೂ ಸಮಗ್ರ ಕೃಷಿ ತರಬೇತಿಯನ್ನು ನೀಡಲಾಗುವುದು ಎಂದು ಕೇಂದ್ರ ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಶಿಬಿರವು ಕೇವಲ ಕುರಿ ಸಾಕಾಣಿಕೆಗೆ ಸೀಮಿತವಾಗದೆ, ಆಧುನಿಕ ಕಾಲದ ಬೇಡಿಕೆಗೆ ತಕ್ಕಂತೆ ವೈಜ್ಞಾನಿಕ ರೀತಿಯಲ್ಲಿ ಹಸು, ಮೇಕೆ, ಹಂದಿ ಮತ್ತು ಕೋಳಿ ಸಾಕಾಣಿಕೆಯ(Sheep And Dairy Farming Training) ಬಗ್ಗೆ ಸಮಗ್ರ ಮಾಹಿತಿಯನ್ನು ಒಳಗೊಂಡಿದೆ. ಇದರೊಂದಿಗೆ ತೋಟಗಾರಿಕಾ ಬೆಳೆಗಳ ನಿರ್ವಹಣೆ ಮತ್ತು ಸಾವಯವ ಗೊಬ್ಬರ ತಯಾರಿಕೆಯಂತಹ ಉಪಯುಕ್ತ ಕೌಶಲಗಳನ್ನು ತಜ್ಞರಿಂದ ಪ್ರಾಯೋಗಿಕವಾಗಿ ಕಲಿಸಲಾಗುತ್ತದೆ. ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇಷಣೆ ಮಾಡಲು ಬಯಸುವವರಿಗೆ ಇದು ಅತ್ಯುತ್ತಮ ವೇದಿಕೆಯಾಗಿದೆ.

ಇದನ್ನೂ ಓದಿ: Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!

ವಿಶೇಷವೆಂದರೆ, ಈ 13 ದಿನಗಳ ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ(Free Sheep And Dairy Farming) ಸೌಕರ್ಯವನ್ನು ಸಂಪೂರ್ಣ ಉಚಿತವಾಗಿ ಕಲ್ಪಿಸಲಾಗುತ್ತದೆ. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 50 ವರ್ಷ ವಯೋಮಿತಿಯ ಪುರುಷರು ಮತ್ತು ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆಯಬಹುದು. ತರಬೇತಿಯ ಯಶಸ್ವಿ ಸಮಾರೋಪದ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಮಾನ್ಯತೆ ಪಡೆದ ಪ್ರಮಾಣಪತ್ರವನ್ನು ವಿತರಿಸಲಾಗುವುದು, ಇದು ಮುಂದಿನ ದಿನಗಳಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ.

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಉಚಿತ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಿ ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು ಎನ್ನುವ ವಿವರ ಈ ಕೆಳಗಿನಂತಿದೆ.

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
18 ರಿಂದ 50 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು,
ಕನ್ನಡ ಓದಲು ಮತ್ತು ಬರೆಯಲು ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಇರುತ್ತದೆ.

ಇದನ್ನೂ ಓದಿ: Ration Card Correction-ರಾಜ್ಯದ್ಯಂತ ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

Free Sheep Farming Training

ಇದನ್ನೂ ಓದಿ: Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

Sheep And Dairy Farming Training Center-ತರಬೇತಿ ಸ್ಥಳ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,
ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು,
ಬೆಂಗಳೂರು ಗ್ರಾಮಾಂತರ ಜಿಲ್ಲೆ.

Training Duration-ತರಬೇತಿ ಅವಧಿ:

ಉಚಿತ ಕುರಿ ಮತ್ತು ಹೈನುಗಾರಿಗೆ ತರಬೇತಿಯು 18/05/2026 ದಿನಾಂಕ ರಿಂದ ಪ್ರಾರಂಭವಾಗಿ ಒಟ್ಟು 13 ದಿನಗಳ ವರೆಗೆ ನಡೆಯಲಿದೆ.

ಇದನ್ನೂ ಓದಿ: Gruhalakshmi Amount-ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್!

Application Process-ತರಬೇತಿಗಾಗಿ ನೋಂದಣಿ ಮಾಡಿ:

ಸಂದರ್ಶನಕ್ಕೆ ನೇರವಾಗಿ ಹಾಜರಾಗಲು ಅಸಾಧ್ಯವಾದಲ್ಲಿ, ಆಸಕ್ತರು ದಿನಾಂಕ 18/05/2026ರ ಒಳಗೆ ಈ ಕೆಳಗಿನ ದೂರವಾಣಿ ಸಂಖ್ಯೆಗಳ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು:
8970476050, 9591514154, 9686248369, 6363139123, 9505894247

Documents For Training-ತರಬೇತಿಯಲ್ಲಿ ಭಾಗವಹಿಸಲು ಅವಶ್ಯವಿರುವ ದಾಖಲೆಗಳು:

ಉಚಿತ ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಅವಶ್ಯವಾಗಿ ಒದಗಿಸಬೇಕಾದ ಅಗತ್ಯ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ.

  • ಅಭ್ಯರ್ಥಿಯ ಆಧಾರ್ ಕಾರ್ಡ
  • ಕುಟುಂಬದ ರೇಶನ್ ಕಾರ್ಡ
  • ಮೊಬೈಲ್ ನಂಬರ್
  • ಬ್ಯಾಂಕ್ ಪಾಸ್ ಬುಕ್

ನಿಮ್ಮ ಗ್ರಾಮದ ಅಥವಾ ಪರಿಚಿತ ನಿರುದ್ಯೋಗಿ ಯುವಕ-ಯುವತಿಯರಿಗೆ ಈ ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಅವರ ಸ್ವಾವಲಂಬಿ ಬದುಕಿಗೆ ಆಸರೆಯಾಗಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: