Guest Teachers Recruitment-ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಪ್ರಕಟ!

May 25, 2026 | Siddesh
Guest Teachers Recruitment-ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಪ್ರಕಟ!
Share Now:

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ 51,000 ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಮಹತ್ವದ ಅಧಿಕೃತ ಆದೇಶ ಹೊರಡಿಸಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಮೇ ತಿಂಗಳಿನಲ್ಲಿಯೇ ಶಾಲೆಗಳು ಪ್ರಾರಂಭವಾಗುತ್ತಿರುವುದರಿಂದ ಶಾಲಾ ಆರಂಭದ ದಿನದಿಂದಲೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು, ಶಾಲೆಗಳಲ್ಲಿ ಖಾಯಂ ಶಿಕ್ಷಕರು ನೇಮಕವಾಗುವವರೆಗೆ ಅಥವಾ ಪ್ರಸ್ತುತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ (ಯಾವುದು ಮೊದಲೋ ಅಲ್ಲಿಯವರೆಗೆ) ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅನುಮೋದನೆ(Guest Teachers Job In Karnataka)ನೀಡಿದೆ. ಈ ಆದೇಶಕ್ಕೆ ಆರ್ಥಿಕ ಇಲಾಖೆಯು ಸಹಮತಿ ನೀಡಿದ್ದು, ರಾಜ್ಯಪಾಲರ ಆಜ್ಞಾನುಸಾರ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಅಧಿಕೃತ ಆದೇಶ ಪತ್ರಕ್ಕೆ ಸಹಿ ಹಾಕಿದ್ದಾರೆ.

ಇದನ್ನೂ ಓದಿ: Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

ಈ ಯೋಜನೆಯಡಿ ನೇಮಕಗೊಳ್ಳುವ(Guest Teachers Job Application) ಒಟ್ಟು 51,000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅಗತ್ಯವಿರುವ ಅನುದಾನದ ವಿವರ ಹಾಗೂ ಜಿಲ್ಲಾ ಮತ್ತು ತಾಲೂಕುವಾರು ಹಂಚಿಕೆಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಿದೆ. ಶೈಕ್ಷಣಿಕ ವರ್ಷದ ಆರಂಭದಲ್ಲೇ ಅತಿಥಿ ಶಿಕ್ಷಕರು ಲಭ್ಯವಾಗುವುದರಿಂದ ಗ್ರಾಮೀಣ ಹಾಗೂ ನಗರ ಪ್ರದೇಶದ ಸರ್ಕಾರಿ ಶಾಲೆಗಳ ಬೋಧನಾ ಪ್ರಕ್ರಿಯೆ ಸುಗಮವಾಗಿ ನಡೆಯಲು ಹಾದಿ ಸುಲಭವಾದಂತಾಗಿದೆ.

Guest Teachers Vacancy Details-ಎಷ್ಟು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ?

ಸರ್ಕಾರದ ಆದೇಶದ ಪ್ರಕಾರ ಒಟ್ಟು 51,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಶಾಲಾವಾರು ವಿವರ ಈ ಕೆಳಗಿನಂತಿದೆ:

ಶಾಲೆಗಳ ವಿವರನೇಮಕಾತಿಗೆ ಸಹಮತಿಸಿರುವ ಅತಿಥಿ ಶಿಕ್ಷಕರ ಸಂಖ್ಯೆ
ಪ್ರಾಥಮಿಕ ಶಾಲೆಗಳು40,000
ಪ್ರೌಢಶಾಲೆಗಳು11,000
ಒಟ್ಟು ಹುದ್ದೆಗಳು51,000

ಇದನ್ನೂ ಓದಿ: FID Number-ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು FID ನಂಬರ್ ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಕಡ್ಡಾಯ!

Guest Teachers Job In Karnataka

ಇದನ್ನೂ ಓದಿ: BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

Guest Teacher Eligibility-ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?

ಸರ್ಕಾರದ ನಿಯಮಾವಳಿಗಳ ಪ್ರಕಾರ ಅತಿಥಿ ಶಿಕ್ಷಕರ ಹುದ್ದೆಗೆ ಈ ಕೆಳಗಿನ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ:

ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರು: ಪಿಯುಸಿ ಜೊತೆಗೆ ಡಿ.ಇಡಿ (D.Ed) ಅಥವಾ ಪದವಿ (Degree) ಜೊತೆಗೆ ಬಿ.ಇಡಿ (B.Ed) ತೇರ್ಗಡೆಯಾಗಿರಬೇಕು.

ಪ್ರೌಢಶಾಲಾ ಅತಿಥಿ ಶಿಕ್ಷಕರು: ಸಂಬಂಧಪಟ್ಟ ವಿಷಯಗಳಲ್ಲಿ ಪದವಿ (Graduation) ಮತ್ತು ಬಿ.ಇಡಿ (B.Ed) ಪದವಿ ಹೊಂದಿರಬೇಕು.

ಆದ್ಯತೆ: ಶಿಕ್ಷಕರ ಅರ್ಹತಾ ಪರೀಕ್ಷೆ (TET) ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಹಾಗೂ ಸ್ಥಳೀಯವಾಗಿ ಲಭ್ಯವಿರುವ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ: MPS Price-2026: ರೈತರಿಗೆ ಕೇಂದ್ರದ ಬಂಪರ್ ಕೊಡುಗೆ: ರಾಗಿ ಸೇರಿದಂತೆ 14 ಮುಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ!

ವಿಶೇಷ ಸೂಚನೆ:

ಜಿಲ್ಲಾ ಮತ್ತು ತಾಲೂಕುವಾರು ಖಾಲಿ ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಕುರಿತು ಆಯಾ ಜಿಲ್ಲೆಯ ಉಪನಿರ್ದೇಶಕರ ಕಚೇರಿ (DDPI) ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಕಚೇರಿಯಿಂದ ಶೀಘ್ರದಲ್ಲೇ ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುತ್ತದೆ ಎಂದು ಅಧಕೃತ ಆದೇಶದಲ್ಲಿ ತಿಳಿಸಲಾಗಿದೆ.

How To Apply-ಅರ್ಜಿ ಸಲ್ಲಿಸುವುದು ಹೇಗೆ?

ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ನಿಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಈ ಬಗ್ಗೆ ಮಾಹಿತಿಯನ್ನು ಪಡೆದು ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Life Insurance-₹456 ಇದ್ದರೆ ಸಾಕು ಕುಟುಂಬಕ್ಕೆ ₹4 ಲಕ್ಷದ ಭದ್ರತೆ! ಈ ವಿಮಾ ಯೋಜನೆಯ ಬಗ್ಗೆ ತಪ್ಪದೇ ತಿಳಿಯಿರಿ!

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: