Police Police Constable-ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

June 9, 2026 | Siddesh
Police Police Constable-ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!
Share Now:

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,395 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಲಾಗಿದ್ದು ಇಲಾಖೆಯು ನೇಮಕಾತಿ(Police Police Constable) ಪ್ರಕ್ರಿಯೆಗೆ ಚಾಲನೆ ನೀಡುತ್ತಿದ್ದು, ಗಣನೀಯ ಸಂಖ್ಯೆಯ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಪಾರದರ್ಶಕ ಹಾಗೂ ನಿಯಮಾನುಸಾರ ನಡೆಯಲಿದ್ದು, ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಕಟ್ಟುನಿಟ್ಟಿನ ದಾಖಲಾತಿ ಪರಿಶೀಲನೆಯನ್ನು ಒಳಗೊಂಡಿರುತ್ತದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ವಿದ್ಯಾರ್ಹತೆಯನ್ನು(Police Constable Notification) ಹೊಂದಿರಬೇಕಾದುದು ಕಡ್ಡಾಯವಾಗಿದೆ. ನಿಗದಿತ ವಯೋಮಿತಿಯೊಳಗಿನ ಆಸಕ್ತರು ಇಲಾಖೆಯ ಅಧಿಕೃತ ಜಾಲತಾಣದ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: PC Job Notification-3,395 ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟ!

ಆದರೆ, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸುಲಭವಾಗಿ ಮುಗಿಯಬೇಕಾದರೆ ಮತ್ತು ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಬೇಕಾದರೆ, ಅಭ್ಯರ್ಥಿಗಳು ಇಲಾಖೆ ಸೂಚಿಸಿರುವ ಕೆಲವು ಅತ್ಯಗತ್ಯ ಪ್ರಮಾಣಪತ್ರಗಳನ್ನು(Police Constable Job) ಮೊದಲೇ ಪಡೆದು ಸಿದ್ಧವಾಗಿಟ್ಟುಕೊಳ್ಳುವುದು ಅತ್ಯಂತ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಹಾಗೂ ನಂತರದ ಪರಿಶೀಲನೆಗೆ ಬೇಕಾಗುವ ಆ ಪ್ರಮುಖ ದಾಖಲೆಗಳ ಸಂಪೂರ್ಣ ವಿವರವಾದ ಪಟ್ಟಿ ಇಲ್ಲಿದೆ.

Required Documents For Police Police Constable Application-ಅರ್ಜಿ ಸಲ್ಲಿಸುವಾಗ ನಿಮ್ಮ ಬಳಿ ಇರಬೇಕಾದ ಕಡ್ಡಾಯ ದಾಖಲೆಗಳ ವಿವರ:

1) ಆಧಾರ್ ಕಾರ್ಡ್ (Aadhaar Card): ಅಭ್ಯರ್ಥಿಯ ಗುರುತಿನ ಮತ್ತು ವಿಳಾಸದ ಪ್ರಮುಖ ಪುರಾವೆಯಾಗಿ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ.

2) ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪದವಿ ಪ್ರಮಾಣಪತ್ರ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಪಡೆದಿರುವ, ಆಯಾ ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಎಲ್ಲಾ ವಿಷಯಗಳ/ಸೆಮಿಸ್ಟರ್‌ಗಳ ಅಂಕಪಟ್ಟಿಗಳು ಹಾಗೂ ಘಟಿಕೋತ್ಸವದ ಪ್ರಮಾಣಪತ್ರ (Degree Certificate) ಅಥವಾ ಪಿಸಿಐ (PDC) ಹೊಂದಿರಬೇಕು.

ಇದನ್ನೂ ಓದಿ: Scholarship Application-ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.

3) ಜನ್ಮ ದಿನಾಂಕದ ಪುರಾವೆ: ಹುಟ್ಟಿದ ದಿನಾಂಕವನ್ನು ನಮೂದಿಸಿರುವ ಎಸ್‌ಸ್‌ಎಲ್‌ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣಪತ್ರ, ಶಾಲೆಯ ವರ್ಗಾವಣೆ ಪ್ರಮಾಣಪತ್ರ (TC) ಅಥವಾ ಜನನ ದಿನಾಂಕವನ್ನು ತೋರಿಸುವ ಸಂಚಿತ ದಾಖಲೆಯ ಉದ್ಧೃತ ಭಾಗವನ್ನು ಹೊಂದಿರಬೇಕು.

4) ಮಾಜಿ ಸೈನಿಕ ಮೀಸಲಾತಿ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ): ಸೈನಿಕ ಸೇವೆಯಿಂದ ಬಿಡುಗಡೆಯಾದ ಪ್ರಮಾಣಪತ್ರ ಮತ್ತು ಪಿಂಚಣಿ/ಗ್ರಾಚ್ಯುಟಿ ಪಡೆಯುತ್ತಿರುವ ಪ್ರಮಾಣಪತ್ರ. ಒಂದು ವೇಳೆ ಮಾಜಿ ಸೈನಿಕರ ಅವಲಂಬಿತರಾಗಿದ್ದಲ್ಲಿ, ಮಾಜಿ ಸೈನಿಕರು ಸೇವೆಯಲ್ಲಿದ್ದಾಗ ಮೃತಪಟ್ಟಿದ್ದರೆ ಅಥವಾ ಶಾಶ್ವತವಾಗಿ ಅಂಗವಿಕಲರಾದ (Permanently Disabled) ಪ್ರಮಾಣಪತ್ರವನ್ನು ಹೊಂದಿರಬೇಕು.

5) ಜಾತಿ ಮತ್ತು ಆದಾಯ ಪ್ರಮಾಣಪತ್ರ: ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ ಮತ್ತು ಪ್ರವರ್ಗ-3ಬಿ ಮೀಸಲಾತಿ ಕೋರುವ ಅಭ್ಯರ್ಥಿಗಳು ಪ್ರಸ್ತುತ ಚಾಲ್ತಿಯಲ್ಲಿರುವ ನಮೂನೆಗಳಲ್ಲಿ ಪ್ರಮಾಣಪತ್ರಗಳನ್ನು ಪಡೆದಿಟ್ಟುಕೊಂಡಿರಬೇಕು.

ಇದನ್ನೂ ಓದಿ: Free Bus Pass-ವಿದ್ಯಾರ್ಥಿ ಸಮೂಹಕ್ಕೆ ‘ಸಿಹಿ ಸುದ್ದಿ’: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಭಾಗ್ಯ!

6) ಗ್ರಾಮೀಣ ಮೀಸಲಾತಿ ಪ್ರಮಾಣಪತ್ರ (Rural Reservation): ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ಅರ್ಹತೆಯ (GM) ಅಭ್ಯರ್ಥಿಗಳು ನಮೂನೆ-1 ರಲ್ಲಿ ಮಾತ್ರ ಹಾಗೂ ಮೀಸಲಾತಿ ಕೋರಿದ SC, ST, ಪ್ರವರ್ಗ-1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ನಮೂನೆ-2 ರಲ್ಲಿ ಪ್ರಮಾಣಪತ್ರವನ್ನು ಹೊಂದಿರಬೇಕು.

7) ಕನ್ನಡ ಮಾಧ್ಯಮ ಮತ್ತು ವಿಶೇಷ ಚೇತನ ಮೀಸಲಾತಿ: ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಮಾಣಪತ್ರ (ಮೀಸಲಾತಿ ಕೋರಿದ್ದಲ್ಲಿ) ಮತ್ತು ವಿಶೇಷ ಚೇತನ (ಅಂಗವಿಕಲ) ಮೀಸಲಾತಿ ಕೋರುವ ಅಭ್ಯರ್ಥಿಗಳು ಅದಕ್ಕೆ ಸಂಬಂಧಿಸಿದ ಅಧಿಕೃತ ಪ್ರಮಾಣಪತ್ರವನ್ನು ಹೊಂದಿರಬೇಕು.

8) ಆಕ್ಷೇಪಣಾ ರಹಿತ ಪ್ರಮಾಣಪತ್ರ (NOC): ಈಗಾಗಲೇ ಬೇರೆ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಆಯ್ಕೆಯಾದಲ್ಲಿ, ನಿಗದಿಪಡಿಸಿದಲ್ಲಿ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಕ್ಕೆ ಸಲ್ಲಿಸಲು ಆಕ್ಷೇಪಣಾ ರಹಿತ ಪ್ರಮಾಣಪತ್ರವನ್ನು (No Objection Certificate) ಪಡೆದಿಟ್ಟುಕೊಳ್ಳಬೇಕು.

ಇದನ್ನೂ ಓದಿ: Pension Scheme-14 ಲಕ್ಷ ಜನರ ಮಾಸಿಕ ಪಿಂಚಣಿ ಸ್ಥಗಿತ! ಕಾರಣವೇನು? ಇಲ್ಲಿದೆ ಸಂಪೂರ್ಣ ವಿವರ!

ಗಮನಿಸಿ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿಯೇ ಈ ಮೇಲಿನ ಎಲ್ಲಾ ಚಾಲ್ತಿಯಲ್ಲಿರುವ ಪ್ರಮಾಣಪತ್ರಗಳನ್ನು ಪಡೆದಿಟ್ಟುಕೊಂಡಿರಬೇಕು. ಕೊನೆಯ ದಿನಾಂಕದ ನಂತರ ಪಡೆದ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ. ನಿಯಮಾವಳಿಗಳನ್ನು ಸರಿಯಾಗಿ ಓದಿಕೊಂಡು ಇಂದೇ ನಿಮ್ಮ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ!

KEA Website-ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್ ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: