GKVK Krishi Mele-2026: ಅಕ್ಟೋಬರ್ 15 ರಿಂದ 18 ರ ವರೆಗೆ ಜಿಕೆವಿಕೆಯಲ್ಲಿ ‘ಬೆಂಗಳೂರು ಕೃಷಿಮೇಳ-2026′

June 10, 2026 | Siddesh
GKVK Krishi Mele-2026: ಅಕ್ಟೋಬರ್ 15 ರಿಂದ 18 ರ ವರೆಗೆ ಜಿಕೆವಿಕೆಯಲ್ಲಿ ‘ಬೆಂಗಳೂರು ಕೃಷಿಮೇಳ-2026′
Share Now:

ಬೆಂಗಳೂರು: ಪ್ರಸ್ತುತ 60 ವರ್ಷಗಳ ವಜ್ರ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು(GKVK) ಈ ವರ್ಷದ ಕೃಷಿಮೇಳವನ್ನು ಅತ್ಯಂತ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಸಜ್ಜಾಗುತ್ತಿದೆ. ಹಸಿರು ಆವರಣವಾದ ಜಿಕೆವಿಕೆ (GKVK) ಮೈದಾನದಲ್ಲಿ 2026ರ ಅಕ್ಟೋಬರ್ 15 ರಿಂದ 18 ರವರೆಗೆ ನಾಲ್ಕು ದಿನಗಳ ಕಾಲ ಈ ಬೃಹತ್ ಕೃಷಿಮೇಳವು ಜರುಗಲಿದೆ. ಈ ಬಾರಿ ವಿಶ್ವವಿದ್ಯಾನಿಲಯಕ್ಕೆ 60 ವರ್ಷ ತುಂಬಿರುವ ಹಿನ್ನೆಲೆಯಲ್ಲಿ, ಎಂದಿಗಿಂತಲೂ ಹೆಚ್ಚು ವಿನೂತನ ತಂತ್ರಜ್ಞಾನಗಳು ಮತ್ತು ವೈವಿಧ್ಯಮಯ ಪ್ರದರ್ಶನಗಳೊಂದಿಗೆ ಮೇಳವನ್ನು ಹಮ್ಮಿಕೊಳ್ಳಲು ಸಕಲ ಸಿದ್ಧತೆಗಳು ನಡೆದಿವೆ.

ಈ ಬಾರಿಯ ಕೃಷಿಮೇಳವನ್ನು(Krishi Mela) “ವೈವಿದ್ಯಮಯ ಕೃಷಿ: ಮುಂದಿನ ಪೀಳಿಗೆಗೆ” ಎಂಬ ವಿಶೇಷ ಶೀರ್ಷಿಕೆಯಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಕೃಷಿ ಕ್ಷೇತ್ರದಲ್ಲಿ ಭವಿಷ್ಯದ ಸಾಧ್ಯತೆಗಳು ಮತ್ತು ನೂತನ ತಂತ್ರಜ್ಞಾನಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ತರ ಪ್ರಯತ್ನವನ್ನು ಈ ಮೇಳದಲ್ಲಿ ಮಾಡಲಾಗುತ್ತಿದೆ. ಇಂದಿನ ಯುವ ಪೀಳಿಗೆ ಕೃಷಿಯತ್ತ ಆಕರ್ಷಿತರಾಗುವಂತೆ ಮಾಡಲು ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಅವರಿಗೆ ತಲುಪಿಸಲು ಈ ಶೀರ್ಷಿಕೆ ಪೂರಕವಾಗಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ಮೇಳದಲ್ಲಿ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಹಲವು ಉಪಯುಕ್ತ ಮಾಹಿತಿ ಮತ್ತು ವಸ್ತುಪ್ರದರ್ಶನಗಳನ್ನು ಏರ್ಪಡಿಸಲಾಗಿದೆ.

ಇದನ್ನೂ ಓದಿ: Police Police Constable-ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

ಕೃಷಿ ಆಸಕ್ತರು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕೃಷಿಮೇಳದ(Krishi Mela Bangalore)ಸದುಪಯೋಗ ಪಡಿಸಿಕೊಳ್ಳಬೇಕಾಗಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಹಿರಿಯ ವಾರ್ತಾತಜ್ಞರು ಹಾಗೂ ಮುಖ್ಯಸ್ಥರಾದ ಡಾ. ಕೆ.ಪಿ. ರಘುಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬೃಹತ್ ಮೇಳವು ಕೇವಲ ಪ್ರದರ್ಶನಕ್ಕೆ ಸೀಮಿತವಾಗಿರದೆ, ರೈತರ ಜ್ಞಾನಾರ್ಜನೆಗೆ ಮತ್ತು ಕೃಷಿ ಪ್ರವಾಸೋದ್ಯಮದ ಬೆಳವಣಿಗೆಗೆ ದೊಡ್ಡ ವೇದಿಕೆಯಾಗಲಿದೆ ಎಂದು ಅವರು ಆಶಿಸಿದ್ದಾರೆ.

Bangalore Krishi Mela 2026 Date-ಅಕ್ಟೋಬರ್ 15 ರಿಂದ 18ರ ವರೆಗೆ ಬೆಂಗಳೂರು ಕೃಷಿಮೇಳ:

ಬೆಂಗಳೂರು ಕೃಷಿ ವಿವಿ ಆವರಣದಲ್ಲಿ “ವೈವಿದ್ಯಮಯ ಕೃಷಿ: ಮುಂದಿನ ಪೀಳಿಗೆಗೆ” ಎಂಬ ವಿಶೇಷ ಶೀರ್ಷಿಕೆಯಡಿಯಲ್ಲಿ ಅಕ್ಟೋಬರ್ 15 ರಿಂದ 18 ರವರೆಗೆ ಒಟ್ಟು 4 ದಿನಗಳ ಕಾಲ ಈ ಬೃಹತ್ ಕೃಷಿಮೇಳವನ್ನು ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: PC Job Notification-3,395 ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟ!

Krishi Mela Details-ಕೃಷಿಮೇಳದ ಪ್ರಮುಖ ಆಕರ್ಷಣೆಗಳು ಮತ್ತು ವಿಶೇಷತೆಗಳು:

1) ಬೃಹತ್ ವಸ್ತು ಪ್ರದರ್ಶನ ಮತ್ತು ಬೆಳೆ ಪ್ರಾತ್ಯಕ್ಷಿಕೆಗಳು:

ಕೃಷಿ ತಂತ್ರಜ್ಞಾನ ಹಾಗೂ ವಿವಿಧ ಸುಧಾರಿತ ತಳಿಗಳ ನೇರ ವೀಕ್ಷಣೆಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ.

2) ವಿಜ್ಞಾನಿಗಳಿಂದ ನೇರ ಪರಿಹಾರ:

ಕೃಷಿ ವಿಜ್ಞಾನಿ ಮತ್ತು ತಜ್ಞರೊಂದಿಗೆ ಚರ್ಚಾಗೋಷ್ಠಿಗಳು ಹಾಗೂ ಸಲಹಾ ಸೇವೆಗಳ ಮೂಲಕ ರೈತರು ತಮ್ಮ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ನೇರ ಪರಿಹಾರ ಮತ್ತು ಮಾರ್ಗದರ್ಶನ ಪಡೆಯಬಹುದು.

3) ಸಾಧಕರಿಗೆ ಗೌರವ:

ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಪ್ರಗತಿಪರ ಕೃಷಿಕರನ್ನು ಗುರುತಿಸಿ, ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.

ಇದನ್ನೂ ಓದಿ: Scholarship Application-ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.

4) ಆಧುನಿಕ ಕೃಷಿ ಪದ್ಧತಿಗಳ ಪರಿಚಯ:

ಹವಾಮಾನ ಚತುರ ಕೃಷಿ, ಸಾವಯವ ಮತ್ತು ನೈಸರ್ಗಿಕ ಕೃಷಿ, ಆಧುನಿಕ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳು ಮತ್ತು ಮಣ್ಣು ರಹಿತ ಕೃಷಿ (Hydroponics) ಕುರಿತು ವಿಶೇಷ ಮಾಹಿತಿ ನೀಡಲಾಗುತ್ತದೆ.

5) ಯಂತ್ರೋಪಕರಣಗಳು ಮತ್ತು ಸಂಸ್ಕೃತಿ:

ಕೃಷಿ ಯಂತ್ರೋಪಕರಣಗಳ ಬೃಹತ್ ಪ್ರದರ್ಶನ, ಕೃಷಿ ಪ್ರವಾಸೋದ್ಯಮದ ಪರಿಕಲ್ಪನೆ ಹಾಗೂ ಗ್ರಾಮೀಣ ಕಲೆ ಮತ್ತು ಸಂಸ್ಕೃತಿಯ ಅನಾವರಣ ಈ ಬಾರಿಯ ಮೇಳದ ಪ್ರಮುಖ ಆಕರ್ಷಣೆಗಳಾಗಿವೆ.

GKVK Website-ಕೃಷಿ ಮೇಳದ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: