Beauty Parlour Training-ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಅಹ್ವಾನ!

July 4, 2026 | Siddesh
Beauty Parlour Training-ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಅಹ್ವಾನ!
Share Now:

ಬೆಂಗಳೂರು ಗ್ರಾಮಾಂತರ: ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಬಯಸುವ ನಿರುದ್ಯೋಗಿ ಮಹಿಳೆಯರಿಗೆ ಕೆನರಾ ಬ್ಯಾಂಕ್ ಮಹತ್ತರ ಅವಕಾಶವೊಂದನ್ನು ಕಲ್ಪಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ 'ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ' (RSETI) ವತಿಯಿಂದ ಜುಲೈ ತಿಂಗಳ ಮೂರನೇ ವಾರದಿಂದ ಆರಂಭವಾಗುವಂತೆ 35 ದಿನಗಳ ಕಾಲ ಉಚಿತ ಬ್ಯೂಟಿ ಪಾರ್ಲರ್ ತರಬೇತಿ(Beauty Parlour Training) ಶಿಬಿರವನ್ನು ಆಯೋಜಿಸಲಾಗಿದೆ. ಸ್ವಯಂ ಉದ್ಯೋಗಿಗಳಾಗಿ ಆರ್ಥಿಕ ಸ್ವತಂತ್ರ ಗಳಿಸಲು ಇಚ್ಛಿಸುವ ಮಹಿಳೆಯರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಆಸಕ್ತ ಹಾಗೂ ಅರ್ಹ ಮಹಿಳಾ ಅಭ್ಯರ್ಥಿಗಳು ದಿನಾಂಕ 09 ಜುಲೈ 2026ರ ಗುರುವಾರ ಬೆಳಿಗ್ಗೆ 10:00 ಗಂಟೆಗೆ ತಮ್ಮ ವಿದ್ಯಾರ್ಹತೆ ಮತ್ತು ವಿಳಾಸದ ಮೂಲ ದಾಖಲಾತಿಗಳೊಂದಿಗೆ "ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ" ಅಲ್ಲಿ ನಡೆಯುವ ನೇರ ಸಂದರ್ಶನಕ್ಕೆ(Beauty Parlour Training Application) ಹಾಜರಾಗಬಹುದು. ಒಂದು ವೇಳೆ ನಿಗದಿತ ದಿನದಂದು ಖುದ್ದಾಗಿ ಹಾಜರಾಗಲು ಅಸಾಧ್ಯವಾದಲ್ಲಿ, ದಿನಾಂಕ 09/07/2026ರ ಒಳಗಾಗಿ ಸಂಸ್ಥೆಯ ಅಧಿಕೃತ ದೂರವಾಣಿ ಸಂಖ್ಯೆಗಳಾದ 8970476050, 6363139123, 9886935603, 9591514154, 9686248369 ಕ್ಕೆ ಸಂಪರ್ಕಿಸಿ ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Gruhajyothi New Update-ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಪಡೆಯಲು ತಪ್ಪದೇ ಈ ಮಾಹಿತಿ ತಿಳಿಯಿರಿ!

ಪ್ರಸ್ತುತ ಇಂದಿನ ಲೇಖನದಲ್ಲಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ಪಡೆಯಲು ಯಾರೆಲ್ಲ ನೋಂದಣಿಯನ್ನು ಮಾಡಿಕೊಳ್ಳಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು ಯಾವುವು? ತರಬೇತಿ ಕೇಂದ್ರದ ವಿಳಾಸ ಯಾವುದು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Who Can Apply For Beauty Parlour Training-ಯಾರ‍ೆಲ್ಲ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • 18 ರಿಂದ 45 ವರ್ಷ ವಯೋಮಿತಿಯೊಳಗಿನ ನಿರುದ್ಯೋಗಿ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು.
  • ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Documents For Beauty Parlour Training-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯನ್ನು ಹೊಂದಿರುವ ರೈತರು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ:

  • ಅಭ್ಯರ್ಥಿಯ ಆಧಾರ್ ಕಾರ್ಡ
  • ಪಾನ್ ಕಾರ್ಡ
  • ಬ್ಯಾಂಕ್ ಪಾಸ್ ಬುಕ್
  • ರೇಶನ್ ಕಾರ್ಡ್

ಇದನ್ನೂ ಓದಿ: NMMS ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

Training Center Address-ತರಬೇತಿ ಕೇಂದ್ರದ ವಿಳಾಸ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.

Interview Date-ನೇರ ಸಂದರ್ಶನದ ದಿನಾಂಕ:

ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು 09 ಜುಲೈ 2026 (ಗುರುವಾರ)ರ ಬೆಳಿಗ್ಗೆ 10:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Voter list-2026: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ತಪ್ಪದೇ ಈ ಮಾಹಿತಿ ತಿಳಿಯಿರಿ!

Free Beauty Parlour Training-ಸಂಪೂರ್ಣ ಉಚಿತ ತರಬೇತಿ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ 'ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ' (RSETI) ವತಿಯಿಂದ ಪ್ರಸ್ತುತ ಆಯೋಜನೆ ಮಾಡಿರುವ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯು ಸಂಪೂರ್ಣ ಉಚಿತವಾಗಿದ್ದು ತರಬೇಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿ ಕೇಂದ್ರದಲೇ ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಆಯೋಜನೆ ಮಾಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Training Certificate-ಪ್ರಮಾಣ ಪತ್ರ ವಿತರಣೆ:

ತರಬೇತಿಯಲ್ಲಿ ಭಾಗವಹಿಸಿ ತರಬೇತಿಯನ್ನು ಪೂರ್ಣಗೊಳಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸಂಸ್ಥೆಯಿಂದ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ ಇದರಿಂದ ತರಬೇತಿಯನ್ನು ಪಡೆದು ಬ್ಯಾಂಕ್ ಮೂಲಕ ಸಾಲವನ್ನು ಪಡೆದು ಉದ್ದಿಮೆಯನ್ನು ಪ್ರಾರಂಭಿಸಲು ಈ ಪ್ರಮಾಣ ಪತ್ರವು ಸಹಕಾರಿಯಾಗಿದೆ.

ಇದನ್ನೂ ಓದಿ: District Ministers-ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ!

PMEGP Scheme-35% ಸಬ್ಸಿಡಿಯಲ್ಲಿ ಉದ್ದಿಮೆ ಪ್ರಾರಂಭಿಸಲು ಅವಕಾಶ:

ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ಪಡೆದ ಬಳಿಕ ತಮ್ಮದೇ ಆದ ಸ್ವಂತ ಬ್ಯೂಟಿ ಪಾರ್ಲರ್ ಅನ್ನು ಪ್ರಾರಂಭಿಸಲು ಯೋಜನೆಯನ್ನು ಹೊಂದಿರುವ ಅಭ್ಯರ್ಥಿಗಳು PMEGP ಯೋಜನೆ ಅಡಿಯಲ್ಲಿ ಗರಿಷ್ಥ 35% ವರಗೆ ಸಬ್ಸಿಡಿಯನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ನಿಮ್ಮ ಜಿಲ್ಲೆಯ DIC/ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: