PUC Scholorship-ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

July 10, 2026 | Siddesh
PUC Scholorship-ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!
Share Now:

2026-2027 ನೇ ಸಾಲಿನ ಡಾ. ರಾಜೇಂದ್ರ ಪ್ರಸಾದ್(Dr Rajendra Prasad Scholarship ) ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ₹30,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಇಂದಿನ ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲಾ ವಿದ್ಯಾರ್ಥಿಗಳು ಅರ್ಹರು? ಅರ್ಜಿಯನ್ನು ಸಲ್ಲಿಸಲು ಲಗತ್ತಿಸಬೇಕಾದ ದಾಖಲಾತಿಗಳಾವುವು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ಯೋಜನೆಯಡಿ ಯಾವೆಲ್ಲಾ ಪ್ರಯೋಜನವನ್ನು ಪಡೆಯಬಹುದು? ಇನ್ನಿತರ ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

ಅರ್ಜಿಯನ್ನು ಸಲ್ಲಿಸಲು ಅಂತಿಮ ದಿನಾಂಕ: ಇದೇ ತಿಂಗಳ 31 ಜುಲೈ 2026

Uses of this Scheme-ಈ ಕಾರ್ಯಕ್ರಮದ ಅಡಿಯಲ್ಲಿ ಒದಗುವ ಪ್ರಯೋಜನಗಳಾವುವು?

ಡಾ. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿವೇತನ ಕಾರ್ಯಕ್ರಮದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ಮ ಶುಲ್ಕ ರಚನೆಯನ್ನು ಅವಲಂಬಿಸಿ ₹30,000 ವರೆಗೆ ಒಂದು ಬಾರಿಯ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹರಿರುತ್ತಾರೆ.

ಇದನ್ನೂ ಓದಿ: KSOU Admission-2026-ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

Who Can Apply For This Scholorship-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ವಿದ್ಯಾರ್ಥಿಗಳು 2025 ಅಥವಾ 2026 ರಲ್ಲಿ 12 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಅರ್ಜಿದಾರರು ತಮ್ಮ ಹಿಂದಿನ ವರ್ಷದ ವ್ಯಾಸಂಗದಲ್ಲಿ ಕನಿಷ್ಠ 65% ಅಂಕಗಳನ್ನು ಪಡೆದಿರಬೇಕು.

ಅರ್ಜಿದಾರ ಅಭ್ಯರ್ಥಿಯ ಎಲ್ಲಾ ಮೂಲಗಳಿಂದ ಪೋಷಕರ ಒಟ್ಟು ವಾರ್ಷಿಕ ಆದಾಯವು ₹8 ಲಕ್ಷ ಮೀರಬಾರದು.

More Information-ಹೆಚ್ಚಿನ ಮಾಹಿತಿಗಾಗಿ:

ಸರ್ಕಾರಿ ಶಾಲೆಗಳಿಂದ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅಂಗವಿಕಲ ವಿದ್ಯಾರ್ಥಿಗಳಿಗೆ (ಪಿಡಬ್ಲ್ಯೂಡಿ) ಮೊದಲ ಆದ್ಯತೆ ನೀಡಲಾಗುತ್ತದೆ.
ಈಶಾನ್ಯ ಪ್ರದೇಶ ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Sasya Santhe 2026-ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಜುಲೈ 10 ರಿಂದ ಮೂರು ದಿನಗಳ ಕಾಲ ‘ಸಸ್ಯ ಸಂತೆ’

Documents Required-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳಾವುವು?

ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card

12ನೇ ತರಗತಿಯ ಅಂಕಪಟ್ಟಿ/PUC Marks Card

ಪೋಷಕರ ಆದಾಯ ಪ್ರಮಾಣಪತ್ರ/Income Certificate

ಪ್ರವೇಶ ಪುರಾವೆ (ಶಾಲೆ/ಕಾಲೇಜು ಐಡಿ ಅಥವಾ ಅನ್ವಯವಾಗಿದ್ದರೆ ಪ್ರವೇಶ ಪತ್ರ)/Entrance Certificate

ಶುಲ್ಕ ರಶೀದಿ ಅಥವಾ ಶುಲ್ಕ ರಚನೆ (ಅನ್ವಯಿಸಿದರೆ)/Fee Receipt

ಬ್ಯಾಂಕ್ ಖಾತೆ ವಿವರಗಳು/Bank Passbook

ಪಾಸ್‌ಪೋರ್ಟ್ ಸೈಜ್ ಪೋಟೋ/Photocopy

ಇದನ್ನೂ ಓದಿ: Karnataka Dam Level-ರಾಜ್ಯದ ಡ್ಯಾಂ ಗಳಿಗೆ ಹೆಚ್ಚಿದ ಒಳ ಹರಿವು!ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟದ ವಿವರ!

ಇದನ್ನೂ ಓದಿ: PM-Kisan Amount-ರಾಜ್ಯದಲ್ಲಿ 6 ಲಕ್ಷ ರೈತರಿಗೆ ಬಂದಿಲ್ಲ ಪಿಎಂ ಕಿಸಾನ್ ಹಣ!ತಪ್ಪದೇ ಈ ಮಾಹಿತಿ ತಿಳಿಯಿರಿ!

Dr Rajendra Prasad Scholarship Program Online Application-ಆನ್ಲೈನ್ ಮೂಲಕ ಹೇಗೆ ಅರ್ಜಿ ಸಲ್ಲಿಸಬಹುದು?

ಡಾ. ರಾಜೇಂದ್ರ ಪ್ರಸಾದ್ ಕಾರ್ಯಕ್ರಮದ ವತಿಯಿಂದ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೊನೆಯ ದಿನಾಂಕ ಮುಕ್ತಾಯ ಆಗುವುದರ ಒಳಗಾಗಿ ಈ ಕೆಳಗೆ ತಿಳಿಸಿರುವ ವಿಧಾನಗಳನ್ನು ಪಾಲನೆ ಮಾಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಆಸಕ್ತ ವಿದ್ಯಾರ್ಥಿಗಳು ಮೊದಲು ಇಲ್ಲಿ ನೀಡಿರುವ ಲಿಂಕ್ "Dr Rajendra Prasad Scholarship Application" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Adike Bele Vime-ಅಡಿಕೆ ಸೇರಿ ವಿವಿಧ ಬೆಳೆಗಳಿಗೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

More Information-ಇನ್ನಿತರ ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: