SSP Scholarship-2026: ವಿದ್ಯಾರ್ಥಿವೇತನ ಪಡೆಯಲು ಎಲ್ಲಾ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

August 10, 2026 | Siddesh
SSP Scholarship-2026: ವಿದ್ಯಾರ್ಥಿವೇತನ ಪಡೆಯಲು ಎಲ್ಲಾ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!
Share Now:

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರೆಸಿಕೊಂಡು ಹೋಗಲು ರಾಜ್ಯ ಸರಕಾರದಿಂದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳನ್ನು ಅನುಷ್ಥಾನ ಮಾಡಲಾಗುತ್ತಿದ್ದು ಪ್ರಸ್ತುತ SSP ತಂತ್ರಾಂಶದ ಮೂಲಕ ಹಲವು ಇಲಾಖೆಯ ವಿದ್ಯಾರ್ಥಿವೇತನವನ್ನು(Scholarship) ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಜ್ಯ ಸರಕಾರದ ಎಲ್ಲಾ ಇಲಾಖೆ ಮತ್ತು ಯೋಜನೆಯ ವಿದ್ಯಾರ್ಥಿವೇತನವನ್ನು(Scholarship Application) ಪಡೆಯಲು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸರಳ ವಿಧಾನವನ್ನು ಒದಗಿಸಲು ಹಾಗೂ ಒಂದೇ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಲು ಸಂಬಂದಪಟ್ಟ ಇಲಾಖೆಯಿಂದ SSP ಜಾಲತಾಣವನ್ನು ಅಭಿವೃದ್ದಿಪಡಿಸಿದ್ದು ವಿವಿಧ ಯೋಜನೆಯಡಿ ವಿದ್ಯಾರ್ಥಿವೇತನವನ್ನು ಪ್ರಸ್ತುತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Land RTC-ಜಮೀನಿನ ಪಹಣಿಯ ಹಿಸ್ಸಾ ಸಂಖ್ಯೆ ಎಂದರೇನು? ಹಿಸ್ಸಾ ಸಂಖ್ಯೆ ಹೇಗೆ ಬರುತ್ತದೆ?ಇಲ್ಲಿದೆ ಅಗತ್ಯ ಮಾಹಿತಿ!

ಇಂದಿನ ಈ ಲೇಖನದಲ್ಲಿ SSP Scholarship ಅನ್ನು ಪಡೆಯಲು ವಿದ್ಯಾರ್ಥಿಗಳು ಯಾವೆಲ್ಲ ಕ್ರಮಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅವಶ್ಯವಾಗಿ ಬೇಕಾಗುವ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಇನ್ನಿತರೆ ಅಗತ್ಯವಾದ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

SSP Scholarship Last Date-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 31 ಆಗಸ್ಟ್ 2026

How To Apply-ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿಗಳು ಎರಡು ವಿಧಾನವನ್ನು ಅನುಸರಿ ಅರ್ಜಿಯನ್ನು ಸಲ್ಲಿಸಬಹುದು ಒಂದು ನೇರವಾಗಿ ತಮ್ಮ ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್/ಕಂಪ್ಯೂಟರ್ ಸೆಂಟರ್ ಅನ್ನು ಭೇಟಿ ಮಾಡಿ ಅಗತ್ಯ ದಾಖಲೆ ಮತ್ತು ಮಾಹಿತಿಯನ್ನು ಒದಗಿಸಿ ಅರ್ಜಿ ಸಲ್ಲಿಸಬಹುದು.

ಅಥವಾ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮನೆಯಲ್ಲಿರುವ ಮೊಬೈಲ್ ಮೂಲವೇ ಅರ್ಜಿಯನ್ನು ಆನ್ಲೈನ್ ನಲ್ಲಿ ಸಲ್ಲಿಸಬಹುದು.

ಇದನ್ನೂ ಓದಿ: Ration Card-ರೇಷನ್ ಕಾರ್ಡ್‍ದಾರರ ಗಮನಕ್ಕೆ: ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಜಂಟಿಯಾಗಿ ವಿತರಣೆ!

SSP Scholarship Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ವಿದ್ಯಾರ್ಥಿಗಳು ರಾಜ್ಯ ಸರಕಾರದ ಎಲ್ಲಾ ಇಲಾಖೆಯ ವಿದ್ಯಾರ್ಥಿವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ ಒದಗಿಸಲು SSP ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಎಲ್ಲಾ ಇಲಾಖೆ ಮತ್ತು ಎಲ್ಲಾ ವರ್ಗಕ್ಕೆ ತರಗತಿಗೆ ಸಂಬಂಧಪಟ್ಟ ವಿದ್ಯಾರ್ಥಿವೇತನಕ್ಕೆ ಈ ಒಂದು ವೆಬ್ಸೈಟ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ.

Step-1: ವಿದ್ಯಾರ್ಥಿಗಳು ಮೊದಲಿಗೆ ಈ "SSP Scholarship Online Application" ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ SSP Scholarship ಜಾಲತಾಣವನ್ನು ಪ್ರವೇಶ ಮಾಡಬೇಕು.

SSP Scholarship 2026

Step-2: ಈಗಾಗಲೇ ಈ ಜಾಲತಾಣವನ್ನು ಪ್ರವೇಶ ಮಾಡಿ ಖಾತೆಯನ್ನು ರಚನೆ ಮಾಡಿಕೊಂಡಿರುವವರು ನೇರವಾಗಿ ತರಗತಿವಾರು ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಹೊಸದಾಗಿ ಖಾತೆಯನ್ನು ರಚನೆ ಮಾಡಿಕೊಳ್ಳಲು ಈ ಪುಟದಲ್ಲಿ ಮೇಲೆ ಎಡಬದಿಯಲ್ಲಿ ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ಮಾಹಿತಿಯನ್ನು ಹಾಕಿ ಖಾತೆಯನ್ನು ರಚನೆ ಮಾಡಿಕೊಂಡು ಲಾಗಿನ್ ಅಗಿ.

Step-3: ಇದಾದ ಬಳಿಕ ಇಲ್ಲಿ ತರಗತಿವಾರು ವೆಬ್ ಲಿಂಕ್ ಅನ್ನು ಮುಖಪುಟದಲ್ಲಿ ಹಾಕಲಾಗಿದ್ದು ನಿಮಗೆ ಸಂಬಂಧಪಟ್ಟ ತರಗತಿಯ ಲಿಂಕ್ ಮೇಲೆ ಕ್ಲಿಕ್ ಮಾಡಿ.

Step-4: ನಂತರ ಲಾಗಿನ್ ಅಗಿ ಇಲ್ಲಿ ಕೇಳುವ ಎಲ್ಲಾ ವಿವರ ಮತ್ತು ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Scholorship Amount-BE/B.Tech ವಿದ್ಯಾರ್ಥಿಗಳಿಗೆ ₹70,250 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Documents For SSP Scholarship-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ:

1) ವಿದ್ಯಾರ್ಥಿಯ ಆಧಾರ್ ಕಾರ್ಡ.
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
3) ಶಾಲಾ/ಕಾಲೇಜು ದಾಖಲಾತಿ ದಾಖಲೆ.
4) ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ.
5) ಮೊಬೈಲ್ ನಂಬರ್.

ಇದನ್ನೂ ಓದಿ: VAO Last Date-ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

SSP Scholarship Amount-ಎಷ್ಟು ವಿದ್ಯಾರ್ಥಿವೇತನ ಪಡೆಯಬಹುದು?

ರಾಜ್ಯ ಸರಕಾರದಿಂದ ಈಗಾಗಲೇ ಇಲಾಖಾವಾರು ಹಾಗೂ ತರಗತಿವಾರು ವಿದ್ಯಾರ್ಥಿವೇತನ ಮೊತ್ತವನ್ನು ನಿಗದಿಪಡಿಸಲಾಗಿದ್ದು ಸಂಬಂದಪಟ್ಟ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿ ವಿದ್ಯಾರ್ಥಿವೇತನದ ಮೊತ್ತದ ಮಾಹಿತಿಯನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು ಇಲಾಖಾವಾರು ವಿದ್ಯಾರ್ಥಿವೇತನದ ಸಹಾಯವಾಣಿ ಮೊಬೈಲ್ ಸಂಖ್ಯೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ- Scholarship Helpline Numbers

Bank Account Aadhar Link-ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಕಡ್ಡಾಯ:

ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯ ಆರ್ಥಿಕ ನೆರವನ್ನು ಫಲಾನುಭವಿಗ ಒದಗಿಸಲು ಸರ್ಕಾರವು DBT ತಂತ್ರಾಂಶವನ್ನು ಬಳಕೆ ಮಾಡುವುದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ಮೊತ್ತವನ್ನು ಪಡೆಯಲು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅನ್ನು ಮಾಡಿರಬೇಕು.

SSP Scholarship Helpline-ವಿದ್ಯಾರ್ಥಿವೇತನದ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ:

  • ಸಹಾಯವಾಣಿ- 1902
  • ಅಧಿಕೃತ ವೆಬ್ಸೈಟ್- Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: