Reliance Foundation Scholarship-ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷದವರೆಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

August 18, 2026 | Siddesh
Reliance Foundation Scholarship-ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷದವರೆಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!
Share Now:

2026-2027 ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಲು ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನದ(Reliance Foundation Scholarship) ಅಡಿಯಲ್ಲಿ ವಿದ್ಯಾರ್ಥಿಗಳಿಗೆ 2 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು, ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಿದೆ.

ಪ್ರಸ್ತುತ ಇಂದಿನ ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸಲು ಯಾವೆಲ್ಲಾ ಹಂತಗಳನ್ನು ಅನುಸರಿಸಬೇಕು? ಅರ್ಜಿ ಸಲ್ಲಿಸಲು ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Last Date To APply-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಯಾವುದು?

ಅಂತಿಮ ದಿನಾಂಕ: 5 ಅಕ್ಟೋಬರ್ 2026

ಇದನ್ನೂ ಓದಿ: Farmer Award Application-ಮುಂಗಾರು ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ!ರೂ 50,000/- ದ ವರೆಗೆ ಬಹುಮಾನ ನಿಗದಿ!

Who Can Apply-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಅಭ್ಯರ್ಥಿಯು 12 ನೇ ತರಗತಿಯ ಪರೀಕ್ಷೆಗಳಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 15 ಲಕ್ಷಕ್ಕಿಂತ ಕಡಿಮೆ ಇರಬೇಕು.

ಪ್ರಸ್ತುತ ಯಾವುದೇ ಸ್ಟ್ರೀಮ್‌ನಲ್ಲಿ ನಿಯಮಿತ, ಪೂರ್ಣ ಸಮಯದ ಪದವಿ ಕೋರ್ಸ್‌ನ 1 ನೇ ವರ್ಷಕ್ಕೆ (ಶೈಕ್ಷಣಿಕ ವರ್ಷ 2026-27) ದಾಖಲಾಗಿರಬೇಕು.

ಕಡ್ಡಾಯವಾದ ಯೋಗ್ಯತಾ ಪರೀಕ್ಷೆಯನ್ನು ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Diploma In Organic Farming-ಬೆಂಗಳೂರು ಕೃಷಿ ವಿವಿಯಿಂದ 2 ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ!

Scholorship Amount-ಈ ಯೋಜನೆಯ ಅಡಿಯಲ್ಲಿ ಪಡೆದುಕೊಳ್ಳುವ ಪ್ರಯೋಜನಗಳಾವುವು?

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಕಾರ್ಯಕ್ರಮದ ಅವಧಿಯಲ್ಲಿ 2,00,000 ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

Documnets Required-ವಿದ್ಯಾರ್ಥಿವೇತನವನ್ನು ಪಡೆಯಲು ಯಾವೆಲ್ಲಾ ದಾಖಲಾತಿಗಳನ್ನು ಒದಗಿಸಬೇಕು?

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card
  • 10 & 12 ತರಗತಿ ಅಂಕಪಟ್ಟಿ/Marks Card
  • ವಿಳಾಸ ಪ್ರಮಾಣ ಪತ್ರ/Recedential Adress
  • ಪ್ರಸ್ತುತ ಕಾಲೇಜು ದಾಖಲಾತಿ ಪತ್ರ/Entrance Certificate
  • ಆದಾಯ ಪ್ರಮಾಣ ಪತ್ರ/Income Certificate
  • ಬ್ಯಾಂಕ್ ಪಾಸ್ ಪುಸ್ತಕ/Bank Pass book
  • ಪಾನ್ ಕಾರ್ಡ/Pan Card
  • ಫೋಟೊ/Photo Copy

ಇದನ್ನೂ ಓದಿ: Free CCTV Training-ಉಚಿತ ಸಿಸಿಟಿವಿ ಅಳವಡಿಕೆ ತರಬೇತಿ: ನಿರುದ್ಯೋಗಿ ಯುವಕರಿಗೆ ಬಂಪರ್ ಅವಕಾಶ!

scholorship amount

ಇದನ್ನೂ ಓದಿ: Azim Premji Scholarship-ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ! ವಿದ್ಯಾರ್ಥಿನಿಯರಿಗೆ ₹30,000 ವಿದ್ಯಾರ್ಥಿವೇತನ!

Online APplication Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ?

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ವಿದ್ಯಾರ್ಥಿಗಳು ಮೊದಲು ಇಲ್ಲಿ ನೀಡಿರುವ ಈ ಲಿಂಕ್ "Click Here" ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು. ವಿದ್ಯಾರ್ಥಿಗಳು ಈ ವೆಬ್ಸೈಟ್ ಅನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ಸಿದ್ದ ಮಾಡಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ Log In ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: Free Sewing Machine Scheme-ಈ ಜಿಲ್ಲೆಯ ಕುಶಲಕರ್ಮಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!

For More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: