Parivartan Programme-ಪರಿವರ್ತನ್ ECSS ಕಾರ್ಯಕ್ರಮ ವತಿಯಿಂದ ₹18,000 ವಿದ್ಯಾರ್ಥಿವೇತನ!ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

August 19, 2026 | Siddesh
Parivartan Programme-ಪರಿವರ್ತನ್ ECSS ಕಾರ್ಯಕ್ರಮ ವತಿಯಿಂದ ₹18,000 ವಿದ್ಯಾರ್ಥಿವೇತನ!ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!
Share Now:

ಪರಿವರ್ತನ್ ECSS ಕಾರ್ಯಕ್ರಮ 2026-27 ಸಾಲಿನ 1 ನೇ ತರಗತಿಯಿಂದ 12 ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ತನ್ನ CSR ಕಾರ್ಯಕ್ರಮವಾದ ಪರಿವರ್ತನದ ಮೂಲಕ 15,000 ರಿಂದ 18,000 ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮಧ್ಯಮ ಹಾಗೂ ಬಡ ವರ್ಗದ ಕುಟುಂಬಗಳ ವಿದ್ಯಾರ್ಥಿಗಳ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ಸಹಾಯವನ್ನು ನೀಡಲು ಈ ವೇತನವನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಂಡು ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು.

ಇದನ್ನೂ ಓದಿ: Reliance Foundation Scholarship-ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷದವರೆಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Scholorship Amount-ಈ ಯೋಜನೆಯ ಅಡಿಯಲ್ಲಿ ಒದಗುವ ಪ್ರಯೋಜನಗಳಾವುವು?

ಪರಿವರ್ತನ್ ECSS ಕಾರ್ಯಕ್ರಮ ವತಿಯಿಂದ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಈ ಕೆಳಕಂಡ ಪ್ರಯೋಜನವನ್ನು ಪಡೆಯುತ್ತಾರೆ:

A) 1 ರಿಂದ 6 ನೇ ತರಗತಿಗಳಿಗೆ: ₹15,000 ರೂಪಾಯಿ
B) 7 ರಿಂದ 12 ನೇ ತರಗತಿ, ಡಿಪ್ಲೊಮಾ, ಐಟಿಐ ಮತ್ತು ಪಾಲಿಟೆಕ್ನಿಕ್‌ಗೆ: ₹18,000 ರೂಪಾಯಿ

Last Date To Apply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 31 2026

ಇದನ್ನೂ ಓದಿ: Farmer Award Application-ಮುಂಗಾರು ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ!ರೂ 50,000/- ದ ವರೆಗೆ ಬಹುಮಾನ ನಿಗದಿ!

Who Can Apply-ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು?

  • ಅರ್ಜಿದಾರ ಅಭ್ಯರ್ಥಿಯು ಭಾರತದ ಖಾಯಂ ಪ್ರಜೆಯಾಗಿರಬೇಕು.
  • ವಿದ್ಯಾರ್ಥಿಯು ಪ್ರಸ್ತುತ 1 ರಿಂದ 12 ನೇ ತರಗತಿಗಳಲ್ಲಿ ದಾಖಲಾಗಿರಬೇಕು.
  • ಭಾರತದಲ್ಲಿ ಖಾಸಗಿ, ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಯಲ್ಲಿ ಡಿಪ್ಲೊಮಾ, ಐಟಿಐ ಅಥವಾ ಪಾಲಿಟೆಕ್ನಿಕ್ ಕೋರ್ಸ್ ಅನ್ನು ಕಲಿಯುತ್ತಿರಬೇಕು.
  • ಹಿಂದಿನ ವರ್ಷದ ಪರೀಕ್ಷೆಯಲ್ಲಿ ಕನಿಷ್ಟ 55% ಅಂಕಗಳನ್ನು ಗಳಿಸಿರಬೇಕು.
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷ ಮೀರಿರಬಾರದು.

ಗಮನಿಸಿ: ಡಿಪ್ಲೊಮಾ ವಿದ್ಯಾರ್ಥಿಗಳು12 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ದಾಖಲಾದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಇದನ್ನೂ ಓದಿ: Diploma In Organic Farming-ಬೆಂಗಳೂರು ಕೃಷಿ ವಿವಿಯಿಂದ 2 ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ!

Documents Required-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card

ಹಿಂದಿನ ವರ್ಷದ ಅಂಕಪಟ್ಟಿ/Marks Card

ಪ್ರಸ್ತುತ ಕಾಲೇಜು ದಾಖಲಾತಿ ಪತ್ರ/Entrance Certificate

ಆದಾಯ ಪ್ರಮಾಣ ಪತ್ರ/Income Certificate

ಬ್ಯಾಂಕ್ ಪಾಸ್ ಪುಸ್ತಕ/Bank Pass book

ಪಾನ್ ಕಾರ್ಡ/Pan Card

ಫೋಟೊ/Photo Copy

ಇದನ್ನೂ ಓದಿ: Free CCTV Training-ಉಚಿತ ಸಿಸಿಟಿವಿ ಅಳವಡಿಕೆ ತರಬೇತಿ: ನಿರುದ್ಯೋಗಿ ಯುವಕರಿಗೆ ಬಂಪರ್ ಅವಕಾಶ!

parivarthan scholorship

ಇದನ್ನೂ ಓದಿ: Azim Premji Scholarship-ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ! ವಿದ್ಯಾರ್ಥಿನಿಯರಿಗೆ ₹30,000 ವಿದ್ಯಾರ್ಥಿವೇತನ!

How To Apply-ಅರ್ಜಿ ಸಲ್ಲಿಸುವ ವಿಧಾನ?

Step-1: ಅರ್ಹ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "Scholorship Amount" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು. ವಿದ್ಯಾರ್ಥಿಗಳು ಈ ವೆಬ್ಸೈಟ್ ಅನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ಸಿದ್ದ ಮಾಡಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ Log In ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ್ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Free Sewing Machine Scheme-ಈ ಜಿಲ್ಲೆಯ ಕುಶಲಕರ್ಮಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!

ಇತರೆ ಮಾಹಿತಿಯನ್ನು ಪಡೆಯಲು ಲಿಂಕ್ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ: Click Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: