Fish Farming subsidy-ಮೀನುಗಾರಿಕೆ ಇಲಾಖೆಯಡಿ ಮೀನುಗಾರಿಕೆ ಸಲಕರಣೆ ಕಿಟ್ ಪಡೆಯಲು ಅರ್ಜಿ!

August 26, 2026 | Siddesh
Fish Farming subsidy-ಮೀನುಗಾರಿಕೆ ಇಲಾಖೆಯಡಿ ಮೀನುಗಾರಿಕೆ ಸಲಕರಣೆ ಕಿಟ್ ಪಡೆಯಲು ಅರ್ಜಿ!
Share Now:

2026-2027 ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಸಹಾಯಧನದಲ್ಲಿ ಮೀನುಗಾರಿಕೆ ಸಲಕರಣೆ ಕಿಟ್‌ಗಳನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮೀನು ಸಾಕಾಣಿಕೆ ಮಾಡಲು ಆಸಕ್ತಿ ಹೊಂದಿರುವ ರೈತರು ಹಾಗೂ ಮೀನುಗಾರರಿಗೆ ಸರ್ಕಾರದಿಂದ ಅವಕಾಶವನ್ನು ನೀಡಲಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶವನ್ನು ಹೆಚ್ಚಿಸುವುದರ ಜೊತೆಗೆ ರೈತರು ಉತ್ತಮ ಆದಾಯವನ್ನು ಪಡೆಯಲು ಉತ್ತಮ ಅವಕಾಶ ಇದಾಗಿದೆ.

ಇದನ್ನೂ ಓದಿ: Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು? ಈ ಯೋಜನೆಯನ್ನು ಜಾರಿಗೆ ತರಲು ಉದ್ದೇಶವೇನು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು ಹಾಗೇ ಸಲ್ಲಿಸುವ ವಿಧಾನಗಳಾವುವು? ಇನ್ನಿತರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Purpose Of This Scheme-ಈ ಯೋಜನೆಯನ್ನು ಜಾರಿಗೆ ತರಲು ಉದ್ದೇಶವೇನು?

ಇದರಿಂದ ಮೀನಿನ ಉತ್ಪಾದನೆ ಹಾಗೂ ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯಕಾರಿಯಾಗಿದೆ.

ಗ್ರಾಮೀಣ ಪ್ರದೇಶದಲ್ಲಿರುವ ಜನರಿಗೆ ಉದ್ಯೋಗವಕಾಶವನ್ನು ನೀಡಲು ಸಹಾಯಕಾರಿಯಾಗಿದೆ.

ರೈತರು ಕೃಷಿ ಗೆ ಅಷ್ಟೇ ಸೀಮಿತವಲ್ಲದೆ ಇತರ ವಲಯಗಳಲ್ಲಿಯೂ ಹೆಚ್ಚಿನ ಆದಾಯವನ್ನು ಗಳಿಸಬಹುದು.

ಮೀನುಗಾರರಿಗೆ ಅವಶ್ಯಕವಿರುವ ಮೂಲಭೂತ ಸೌಲಭ್ಯಗಳು ಮತ್ತು ವಿಮಾ ರಕ್ಷಣೆ ನೀಡುವುದು.

ಇದನ್ನೂ ಓದಿ: Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ!

Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

  • ಆಧಾರ್ ಕಾರ್ಡ್/Aadhar Card
  • ಪಹಣಿ/RTC
  • ಜಲಮೂಲ ಮಾಲೀಕತ್ವದ ದಾಖಲೆ
  • ಜಾತಿ ಹಾಗೂ ಆದಾಯ ಪ್ರಮಾಣಪತ್ರ( ಅಗತ್ಯವಿದ್ದಲ್ಲಿ)
  • ಬ್ಯಾಂಕ್ ಪಾಸ್‌ಬುಕ್ ಪ್ರತಿ/Bank Passbook
  • ಮೊಬೈಲ್ ನಂಬರ್/Mobile Number
  • ಫೋಟೊ/Photocopy

Subsidy Amount-ಈ ಯೋಜನೆಯ ಅಡಿಯಲ್ಲಿ ಪಡೆಯುವ ಸಹಾಯಧನವೆಷ್ಟು?

ಮೀನುಗಾರಿಕೆ ಇಲಾಖೆಯ ವತಿಯಿಂದ ಸಬ್ಸಿಡಿಯಲ್ಲಿ ಮೀನುಗಾರಿಕೆ ಸಲಕರಣೆ ಕಿಟ್‌ಗಳನ್ನು ಪಡೆಯಲು ಸರ್ಕಾರದಿಂದ ₹20,000 ದಿಂದ ₹1.20 ಲಕ್ಷದವರೆಗೆ ಆರ್ಥಿಕ ನೆರವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Free Media Kit-ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಮೀಡಿಯಾ ಕಿಟ್: ಅರ್ಜಿ ಅಹ್ವಾನ!

fish farming

ಇದನ್ನೂ ಓದಿ: Sheep Farming Training-ಬೆಂಗಳೂರು ಕೃಷಿ ವಿವಿಯಿಂದ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?

ಸಹಾಯಧನ ಪಡೆಯಲು ಎಲ್ಲಾ ವರ್ಗದ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ನೀರಿನ ಸಂಗ್ರಹಣಾ ಕೊಳ, ಖಾಸಗಿ ಕೆರೆ, ಕೃಷಿ ಹೊಂಡ ಹೊಂದಿರುವ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈಗಾಗಲೆ ಮೀನು ಸಾಕಾಣಿಕೆ ಮಾಡುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸ್ವಸಹಾಯ ಸಂಘಗಳು, ಸಹಕಾರಿ ಸಂಘಗಳು, ರೈತರ ಉತ್ಪಾದಕರ ಸಂಸ್ಥೆಗಳಿಗೆ (FPO) ಅರ್ಜಿಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Parivartan Programme-ಪರಿವರ್ತನ್ ECSS ಕಾರ್ಯಕ್ರಮ ವತಿಯಿಂದ ₹18,000 ವಿದ್ಯಾರ್ಥಿವೇತನ!ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

How To Apply-ಅರ್ಜಿ ಸಲ್ಲಿಸುವ ವಿಧಾನಗಳಾವುವು?

Step-1: ಅರ್ಹ ಅಭ್ಯರ್ಥಿಗಳು ನಿಮ್ಮ ತಾಲೂಕು ಅಥವಾ ಜಿಲ್ಲೆಯಲ್ಲಿರುವ ಮೀನುಗಾರಿಕೆ ಇಲಾಖೆಯ ಕಚೇರಿಯನ್ನು ನೇರವಾಗಿ ಭೇಟಿ ಮಾಡಬೇಕು.

Step-2: ಮೀನು ಮರಿ ಖರೀದಿಯ ಸಹಾಯಧನ ಯೋಜನೆಯ "Application Form" ಅನ್ನು ಪಡೆದುಕೊಂಡು ಅಲ್ಲಿ ಕೇಳಿರುವ ಎಲ್ಲಾ ವಿವರವನ್ನು ಭರ್ತಿ ಮಾಡಬೇಕು.

Step-3: ತದನಂತರ ಸಹಾಯಧನ ಪಡೆಯಲು ಅಗತ್ಯ ಇರುವ ಎಲ್ಲಾ ದಾಖಲಾತಿಗಳನ್ನು ಯೋಜನೆಗೆ ಸಂಭದಿಸಿದ ಅಧಿಕಾರಿಗಳಿಗೆ ನೀಡಬೇಕು.

ಇದನ್ನೂ ಓದಿ: Reliance Foundation Scholarship-ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷದವರೆಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

fishery deparment-ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ- Click Here

Helpline Number-ಸಹಾಯವಾಣಿ ಸಂಖ್ಯೆ-8277200300

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: