Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

August 29, 2026 | Siddesh
Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!
Share Now:

ಕರ್ನಾಟಕ ಸರ್ಕಾರವು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ಕೊಳವೆಬಾವಿಯನ್ನು ಕೊರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ವರ್ಗದ ರೈತರಿಗೆ ಸಹಾಯಧನದಲ್ಲಿ ಕೊಳವೆಬಾವಿಯನ್ನು ನಿರ್ಮಾಣ ಮಾಡಿ ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ.

ಇದನ್ನೂ ಓದಿ: MBA Scholorship-ಎಂಬಿಎ, ಪಿಜಿಡಿಎಂ,ಪಿಜಿಪಿ ವಿದ್ಯಾರ್ಥಿಗಳಿಗೆ 8 ಲಕ್ಷದವರೆಗೆ ವಿದ್ಯಾರ್ಥಿವೇತನ!

ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ಸಲ್ಲಿಸುವ ವಿಧಾನ? ಕೊನೆಯ ದಿನಾಂಕ ಯಾವುದು? ಇನ್ನಿತರ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30 2026

Ganga Kalyana Subsidy Amount-ಗಂಗಾ ಕಲ್ಯಾಣ ಯೋಜನೆಯ ಸಹಾಯಧನ ವಿವರ:

ಗಂಗಾ ಕಲ್ಯಾಣ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಎಲ್ಲಾ ಅರ್ಹ ರೈತರಿಗೆ ಕೊಳವೆ ಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲು, ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ. ₹3.75 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಿರುತ್ತದೆ ಮತ್ತು ಇತರೆ ಜಿಲ್ಲೆಗಳಿಗೆ ರೂ.2.25 ಲಕ್ಷಗಳನ್ನು ನಿಗದಿಪಡಿಸಿರುತ್ತದೆ.

ಇದನ್ನೂ ಓದಿ: Fish Farming subsidy-ಮೀನುಗಾರಿಕೆ ಇಲಾಖೆಯಡಿ ಮೀನುಗಾರಿಕೆ ಸಲಕರಣೆ ಕಿಟ್ ಪಡೆಯಲು ಅರ್ಜಿ!

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಗಂಗಾ ಕಲ್ಯಾಣ ಯೋಜನೆಯಡಿ ಸಬ್ಸಿಡಿಯಲ್ಲಿ ಕೊಳವೆಬಾವಿ ಕೊರೆಸಲು ಕೆಳಕಂಡ ಅರ್ಹತಾ ಮಾನದಂಡಗಳನ್ನು ಹೊಂದಿರಬೇಕು:

ಅರ್ಜಿದಾರ ರೈತರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿಯನ್ನು ಸಲ್ಲಿಸಲು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರಾಗಿರಬೇಕು.

ಅರ್ಜಿದಾರರ ವಯಸ್ಸು ಕನಿಷ್ಟ 18 ವರ್ಷ ಹಾಗೂ ಗರಿಷ್ಟ 55 ವರ್ಷದ ಒಳಗಿರಬೇಕು.

ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಖುಷ್ಕಿ ಜಮೀನಿರಬೇಕು,ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಕನಿಷ್ಠ 1 ಎಕರೆ ಜಮೀನನ್ನು ಹೋದಿರತಕ್ಕದ್ದು.

ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ರೈತರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿದಾರರ ಕೌಟುಂಬದ ವಾರ್ಷಿಕ ಆದಾಯ ರೂ.6.00 ಲಕ್ಷ ಮೀರಬಾರದು.

ಇದನ್ನೂ ಓದಿ: Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

  1. ಆಧಾರ್ ಕಾರ್ಡ್ ಪ್ರತಿ
  2. ಆದಾಯ ಪ್ರಮಾಣಪತ್ರ
  3. ಜಾತಿ ಪ್ರಮಾಣಪತ್ರ
  4. ಇತ್ತೀಚಿನ ಆರ್‌ಟಿಸಿ ಪ್ರತಿ
  5. ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ
  6. ಬ್ಯಾಂಕ್ ಪಾಸ್ ಬುಕ್ ಪ್ರತಿ
  7. ಭೂ-ಕಂದಾಯ ಪಾವತಿಸಿದ ರಸೀದಿ
  8. ಸ್ವಯಂ ಘೋಷಣೆ ಪತ್ರ
  9. ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ

ಇದನ್ನೂ ಓದಿ: Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ!

How To Apply For Ganga Kalyana Scheme-ಅರ್ಜಿ ಸಲ್ಲಿಸುವುದು ಹೇಗೆ?

ಗಂಗಾ ಕಲ್ಯಾಣ ಯೋಜನೆಯಡಿ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಹರಿರುವ ಅರ್ಜಿದಾರರು ಎರಡು ವಿಧಾನವನ್ನು ಅನುಸರಿಸಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸಲು ಅರ್ಹರಿರುವ ಫಲಾನುಭವಿಗಳು ಅವಶ್ಯಕ ದಾಖಲಾತಿಗಳನ್ನು ಸಿದ್ದ ಮಾಡಿಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

Step-1: ಮೊದಲಿಗೆ ಇಲ್ಲಿ ನೀಡಿರುವ ಲಿಂಕ್ ಮೇಲೆ "Ganga Kalyana Online Application" ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Free Media Kit-ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಮೀಡಿಯಾ ಕಿಟ್: ಅರ್ಜಿ ಅಹ್ವಾನ!

ganga kalyana yojana

ಇದನ್ನೂ ಓದಿ: Sheep Farming Training-ಬೆಂಗಳೂರು ಕೃಷಿ ವಿವಿಯಿಂದ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಕಾಣುವ "ಗಂಗಾ ಕಲ್ಯಾಣ ಯೋಜನೆ" ಮುಂದೆ ಕಾಣಿಸುವ "ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ಇಲ್ಲಿ ಮೊದಲ ಬಾರಿಗೆ ಈ ವೆಬ್ಸೈಟ ಅನ್ನು ಪ್ರವೇಶ ಮಾಡುತ್ತಿರುವ ಅರ್ಜಿದಾರರು ಹೊಸ ಬಳಕೆದಾರರ ? ಇಲ್ಲಿ ನೋಂದಾಯಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ OTP ಅನ್ನು ಪಡೆದು ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಂಡು ಪಾಸ್ವರ್ಡ್ ರಚನೆ ಮಾಡಿಕೊಂಡು ಲಾಗಿನ್ ಅಗಿ.

Step-4: ಲಾಗಿನ್ ಅದ ಬಳಿಕ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಸಹಾಯಧನದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: