Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!

September 6, 2026 | Siddesh
Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!
Share Now:

ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಪ್ರೋಗ್ರಾಂ 2026-2027 ನೇ ಸಾಲಿನಲ್ಲಿ 9 ರಿಂದ 12 ನೇ ತರಗತಿ ಹಾಗೂ ಪದವಿ ಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹೀಂದ್ರಾ ಲಿಮಿಟೆಡ್‌ನ ವತಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯ ಅಡಿಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅವರ ಮುಂದಿನ ಶಿಕ್ಷಣವನ್ನು ಯಾವುದೇ ಅಡೆಚಣೆಗಳಿಲ್ಲದೆ ಮುಂದುವರಿಸಲು ಸಹಾಯ ಮಾಡಲು ಈ ವಿದ್ಯಾರ್ಥಿವೇತನವನ್ನು ಜಾರಿಗೆ ತಂದಿದ್ದು, ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಿದೆ.

ಇದನ್ನೂ ಓದಿ: JK Tyre Scholarship-JK ಟೈರ್ ಶಿಕ್ಷಾ ಸಾರಥಿ ಯೋಜನೆಯಡಿ 25,000 ವಿದ್ಯಾರ್ಥಿವೇತನ! ಇನ್ನೂ 5 ದಿನ ಬಾಕಿ!

ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹತಾ ಮಾನದಂಡಗಳಾವುವು? ಅರ್ಜಿ ಸಲ್ಲಿಸಲು ದಾಖಲಾತಿಗಳಾವುವು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಕೊನೆಯ ದಿನಾಂಕ ಯಾವುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ್ ದಿನಾಂಕ: 21 ಸೆಪ್ಟೆಂಬರ್ 2026

ಈ ಕಾರ್ಯಕ್ರಮದ ಅಡಿಯಲ್ಲಿ ಒದಗುವ ಪ್ರಯೋಜನಗಳಾವುವು?

ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಪ್ರೋಗ್ರಾಂ ಯೋಜನೆಯಡಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ 5,500 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Tata Capital Scholorship-ಟಾಟಾ ಕ್ಯಾಪಿಟಲ್ ವತಿಯಿಂದ ಡಿಪ್ಲೊಮಾ, ಐಟಿಐ 18,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ‍ ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು 9 ರಿಂದ 12 ತರಗತಿ ಹಾಗೂ ಸಾಮಾನ್ಯ ಪದವಿಪೂರ್ವ ಕೋರ್ಸ್‌ಗಳನ್ನು (ಬಿಎ, ಬಿಎ ಹಾನರ್ಸ್, ಬಿಎಸ್ಸಿ ಅಥವಾ ಬಿ.ಕಾಂ.) ಮತ್ತು ಸಾಮಾನ್ಯ ಸ್ನಾತಕೋತ್ತರ ಕೋರ್ಸ್‌ಗಳನ್ನು (ಎಂಎ, ಎಂಎ ಹಾನರ್ಸ್, ಎಂ.ಎಸ್ಸಿ ಅಥವಾ ಎಂ.ಕಾಂ.) ಓದುತ್ತಿರುವ ಎಸ್‌ಸಿ, ಎಸ್‌ಟಿ ಅಥವಾ ಒಬಿಸಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯದ ಮಿತಿಯು 4 ಲಕ್ಷ ಮೀರಿರಬಾರದು.

ವಿದ್ಯಾರ್ಥಿಯ ಹಿಂದಿನ ವರ್ಷದ ಸೆಮಿಸ್ಟರ್‌ನಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು.

ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್ ಮತ್ತು ಬಡ್ಡಿ4ಸ್ಟಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಇದನ್ನೂ ಓದಿ: Women SHG Subsidy-ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ವಿದ್ಯಾರ್ಥಿನಿಯ ಆಧಾರ್ ಕಾರ್ಡ
  • ಪ್ರಸ್ತುತ ಪ್ರವೇಶ ಪತ್ರ
  • ಹಿಂದಿನ ವರ್ಷದ ಅಂಕಪಟ್ಟಿ
  • 10 ಹಾಗೂ 12 ತರಗತಿ ಅಂಕಪಟ್ಟಿ
  • ಸ್ನಾತಕೋತ್ತರ ವಿದ್ಯಾರ್ಥಿಗೆ ಪದವಿ ಅಂಕಪಟ್ಟಿ
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಪುಸ್ತಕ
  • ಮೊಬೈಲ್ ನಂಬರ್

ಇದನ್ನೂ ಓದಿ: Subsidy Schemes 2026: ಕರ್ನಾಟಕ ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

student scholorship

ಇದನ್ನೂ ಓದಿ: Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ?

ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್ ನ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗಳು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Step-1: ಆಸಕ್ತ ಅರ್ಹ ವಿದ್ಯಾರ್ಥಿಗಳು ಮೊದಲು ಇಲ್ಲಿ ನೀಡಿರುವ ಈ ಲಿಂಕ್ "Mahindra EmpowerHer Scholarship" ಮೇಲೆ ಕ್ಲಿಕ್ ಮಾಡಿ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು. ವಿದ್ಯಾರ್ಥಿಗಳು ಈ ವೆಬ್ಸೈಟ್ ಅನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚನೆ ಮಾಡಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರಗಳನ್ನು ನಮೂದಿಸಿ Log In ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ್ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: MBA Scholorship-ಎಂಬಿಎ, ಪಿಜಿಡಿಎಂ,ಪಿಜಿಪಿ ವಿದ್ಯಾರ್ಥಿಗಳಿಗೆ 8 ಲಕ್ಷದವರೆಗೆ ವಿದ್ಯಾರ್ಥಿವೇತನ!

ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: