Azolla Unit Subsidy-ರಾಜ್ಯದಲ್ಲಿ ಜಾನುವಾರುಗಳಿಗೆ 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ!

September 9, 2026 | Siddesh
Azolla Unit Subsidy-ರಾಜ್ಯದಲ್ಲಿ ಜಾನುವಾರುಗಳಿಗೆ 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ!
Share Now:

ರಾಜ್ಯದಲ್ಲಿ ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವನ್ನು ಒದಗಿಸುವ ಸಲುವಾಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು ಅಜೋಲಾ ಉತ್ಪಾದನಾ ಘಟಕಗಳನ್ನು ಉತ್ತೇಜಿಸಲು ಮಹತ್ವದ ಯೋಜನೆ ಹಮ್ಮಿಕೊಂಡಿದೆ. ಮಳೆಯ ಅಭಾವ, ಹಸಿರು ಮೇವಿನ ಕೊರತೆ ಹಾಗೂ ವ್ಯತ್ಯಾಸದ ಸಂದರ್ಭಗಳಲ್ಲಿ ಪ್ರೋಟೀನ್, ಖನಿಜಾಂಶಗಳು ಸೇರಿದಂತೆ ಉತ್ತಮ ಪೌಷ್ಟಿಕಾಂಶಗಳನ್ನು ಹೊಂದಿರುವ ಅಜೋಲಾವನ್ನು ಪೂರಕ ಆಹಾರವಾಗಿ ಬಳಸಬಹುದಾಗಿದೆ.

ಈ ಯೋಜನೆಯಡಿ ರಾಜ್ಯದ ಎಲ್ಲಾ 31 ಜಿಲ್ಲೆಗಳ 240 ತಾಲ್ಲೂಕುಗಳಲ್ಲಿ ಒಟ್ಟು 3,78,00,000 ರೂಪಾಯಿಗಳ ವೆಚ್ಚದಲ್ಲಿ 12,000 ಅಜೋಲಾ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಜಿಲ್ಲಾವಾರು ಭೌತಿಕ ಮತ್ತು ಆರ್ಥಿಕ ಗುರಿಯನ್ನು ನಿಗದಿಪಡಿಸಲಾಗಿದೆ. ಪ್ರತಿ ಘಟಕ ಸ್ಥಾಪನೆಗೆ ಅಂದಾಜು 3,150 ರೂಪಾಯಿ ವೆಚ್ಚವಾಗಲಿದೆ.

ಬೆಳಗಾವಿ ಜಿಲ್ಲೆಯಲ್ಲಿ 15 ತಾಲ್ಲೂಕುಗಳಿದ್ದು 750 ಘಟಕಗಳಿಗೆ 23,62,500 ರೂಪಾಯಿ ನಿಗದಿಪಡಿಸಲಾಗಿದೆ. ವಿಜಯಪುರ ಜಿಲ್ಲೆಯ 13 ತಾಲ್ಲೂಕುಗಳಿಗೆ 650 ಘಟಕಗಳಿಗೆ 20,47,500 ರೂಪಾಯಿ ಹಾಗೂ ಉತ್ತರ ಕನ್ನಡ ಜಿಲ್ಲೆಯ 12 ತಾಲ್ಲೂಕುಗಳಿಗೆ 600 ಘಟಕಗಳಿಗೆ 18,90,000 ರೂಪಾಯಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಕಲಬುರಗಿ ಜಿಲ್ಲೆಯ 11 ತಾಲ್ಲೂಕುಗಳಿಗೆ 550 ಘಟಕಗಳಿಗಾಗಿ 17,32,500 ರೂಪಾಯಿ ವೆಚ್ಚವಾಗಲಿದೆ.

ಇದನ್ನೂ ಓದಿ: Samudaya Bhavana-ಸಮುದಾಯ ಭವನ ನಿರ್ಮಾಣ ಮಾಡಲು ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

ಬಾಗಲಕೋಟೆ ಜಿಲ್ಲೆಯ 10 ತಾಲ್ಲೂಕು ಮತ್ತು ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಿಗೆ ತಲಾ 500 ಘಟಕಗಳಂತೆ ತಲಾ 15,75,000 ರೂಪಾಯಿಗಳನ್ನು ನಿಗದಿಗೊಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ 9 ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆಯ 9 ತಾಲ್ಲೂಕು ಹಾಗೂ ಮೈಸೂರು ಜಿಲ್ಲೆಯ 9 ತಾಲ್ಲೂಕುಗಳಿಗೆ ತಲಾ 450 ಘಟಕಗಳನ್ನು ಸ್ಥಾಪಿಸಲು ತಲಾ 14,17,500 ರೂಪಾಯಿ ಕಾಯ್ದಿರಿಸಲಾಗಿದೆ.

ಬೀದರ್ ಜಿಲ್ಲೆಯ 8 ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆಯ 8 ತಾಲ್ಲೂಕು, ಧಾರವಾಡ ಜಿಲ್ಲೆಯ 8 ತಾಲ್ಲೂಕು, ಹಾಸನ ಜಿಲ್ಲೆಯ 8 ತಾಲ್ಲೂಕು, ಹಾವೇರಿ ಜಿಲ್ಲೆಯ 8 ತಾಲ್ಲೂಕು ಮತ್ತು ರಾಯಚೂರು ಜಿಲ್ಲೆಯ 8 ತಾಲ್ಲೂಕುಗಳಿಗೆ ತಲಾ 400 ಘಟಕಗಳನ್ನು ಹಂಚಿಕೆ ಮಾಡಲಾಗಿದ್ದು, ಪ್ರತಿಯೊಂದು ಜಿಲ್ಲೆಗೆ ತಲಾ 12,60,000 ರೂಪಾಯಿ ಅನುದಾನ ನೀಡಲಾಗಿದೆ.

ಗದಗ ಜಿಲ್ಲೆಯ 7 ತಾಲ್ಲೂಕು, ಕೊಪ್ಪಳ ಜಿಲ್ಲೆಯ‌ 7 ತಾಲ್ಲೂಕು, ಮಂಡ್ಯ ಜಿಲ್ಲೆಯ 7 ತಾಲ್ಲೂಕು, ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕು ಮತ್ತು ಉಡುಪಿ ಜಿಲ್ಲೆಯ 7 ತಾಲ್ಲೂಕುಗಳಿಗೆ ತಲಾ 350 ಘಟಕಗಳಿಗೆ ತಲಾ 11,02,500 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!

ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕು, ದಾವಣಗೆರೆ ಜಿಲ್ಲೆಯ 6 ತಾಲ್ಲೂಕು, ಕೋಲಾರ ಜಿಲ್ಲೆಯ 6 ತಾಲ್ಲೂಕು, ವಿಜಯನಗರ ಜಿಲ್ಲೆಯ 6 ತಾಲ್ಲೂಕು ಹಾಗೂ ಯಾದಗಿರಿ ಜಿಲ್ಲೆಯ 6 ತಾಲ್ಲೂಕುಗಳಿಗೆ ತಲಾ 300 ಘಟಕಗಳ ಗುರಿ ನೀಡಲಾಗಿದ್ದು, ತಲಾ 9,45,000 ರೂಪಾಯಿ ವೆಚ್ಚವಾಗಲಿದೆ.

ಬೆಂಗಳೂರು ನಗರ ಜಿಲ್ಲೆಯ 5 ತಾಲ್ಲೂಕು, ಬಳ್ಳಾರಿ ಜಿಲ್ಲೆಯ 5 ತಾಲ್ಲೂಕು, ಚಾಮರಾಜನಗರ ಜಿಲ್ಲೆಯ‌ 5 ತಾಲ್ಲೂಕು, ಕೊಡಗು ಜಿಲ್ಲೆಯ 5 ತಾಲ್ಲೂಕು ಮತ್ತು ರಾಮನಗರ 5 ತಾಲ್ಲೂಕುಗಳಿಗೆ ತಲಾ 250 ಘಟಕ ಸ್ಥಾಪನೆಗೆ ತಲಾ 7,87,500 ರೂಪಾಯಿ ನೀಡಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಿಗೆ 200 ಘಟಕ ಸ್ಥಾಪಿಸಲು 6,30,000 ರೂಪಾಯಿ ವೆಚ್ಚ ಮಾಡಲಾಗುವುದು.

ಇದನ್ನೂ ಓದಿ: JK Tyre Scholarship-JK ಟೈರ್ ಶಿಕ್ಷಾ ಸಾರಥಿ ಯೋಜನೆಯಡಿ 25,000 ವಿದ್ಯಾರ್ಥಿವೇತನ! ಇನ್ನೂ 5 ದಿನ ಬಾಕಿ!

ತಾಂತ್ರಿಕ ಹಾಗೂ ವೆಚ್ಚದ ವಿವರ:

ಈ ಅಜೋಲಾ ಘಟಕಗಳನ್ನು ರೈತರ ಮನೆ ಅಥವಾ ಕೊಟ್ಟಿಗೆಯ ಸಮೀಪವೇ ಕಡಿಮೆ ಸ್ಥಳದಲ್ಲಿ ನಿರ್ಮಿಸಬಹುದಾಗಿದೆ. ಸುಮಾರು 10 ಅಡಿ ಉದ್ದ, 4 ಅಡಿ ಅಗಲ ಹಾಗೂ 1 ಅಡಿ ಆಳದ (2.60 ಮೀ. x 1.60 ಮೀ.) ಅಳತೆಯಲ್ಲಿ ಘಟಕವನ್ನು ನಿರ್ಮಿಸಲಾಗುತ್ತದೆ.

ಪ್ರತಿ ಘಟಕದ ಒಟ್ಟು ವೆಚ್ಚವಾದ 3,150 ರೂಪಾಯಿಯಲ್ಲಿ ಸಾಮಗ್ರಿ ಹಾಗೂ ಕೂಲಿ ವೆಚ್ಚ ಸೇರಿದೆ. ಯುವಿ-ಸ್ಟೆಬಿಲೈಸ್ಡ್ ಎಚ್‌ಡಿಪಿಇ ಶೀಟ್ (450 GSM, 10x6 ಅಡಿ) – 1,350 ರೂಪಾಯಿ, ಶೇಕಡಾ 80 ರಷ್ಟು ನೆರಳು ಬಲೆ (Shade Net) ಮತ್ತು ಬಿದಿರು/ಜಿಐ ಫ್ರೇಮ್ – 650 ರೂಪಾಯಿ, ಫಲವತ್ತಾದ ಮಣ್ಣು, ಸಗಣಿ ಮತ್ತು ಸೂಪರ್ ಫಾಸ್ಫೇಟ್ ಮಿಶ್ರಣ – 250 ರೂಪಾಯಿ, ಅಜೋಲಾ ತಳಿ/ಬೀಜ (Starter Culture/Inoculum) 2 ಕೆಜಿ – 200 ರೂಪಾಯಿ (ಸಾಮಗ್ರಿಗಳ ಒಟ್ಟು ವೆಚ್ಚ: 2,450 ರೂಪಾಯಿ), ಸ್ಥಳ ಸಿದ್ಧತೆ, ತೊಟ್ಟಿ ಅಳವಡಿಕೆ, ಸಂರಕ್ಷಣೆ ಮತ್ತು ಬೀಜ ಬಿತ್ತನೆ ಕೆಲಸಕ್ಕಾಗಿ 2 ಮಾನವ ದಿನಗಳ ಕೂಲಿ ವೆಚ್ಚ (ದರ ದಿನಕ್ಕೆ 350 ರೂ. ನಂತೆ) – 700 ರೂಪಾಯಿ.

ಇದನ್ನೂ ಓದಿ: Tata Capital Scholorship-ಟಾಟಾ ಕ್ಯಾಪಿಟಲ್ ವತಿಯಿಂದ ಡಿಪ್ಲೊಮಾ, ಐಟಿಐ 18,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

ಅನುಷ್ಠಾನ ಮತ್ತು ಮಾರ್ಗದರ್ಶಿ ಸೂತ್ರಗಳು:

ಜಿಲ್ಲೆಗೆ ನಿಗದಿಪಡಿಸಿದ ಗುರಿಯನ್ನು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿವಾರು ಹಂಚಿಕೆ ಮಾಡಿ, ಸೂಕ್ತ ಸ್ಥಳ ಮತ್ತು ನೀರಿನ ಲಭ್ಯತೆ ಇರುವ ಜಾನುವಾರು ಸಾಕಣೆದಾರರನ್ನು ಆದ್ಯತೆಯ ಮೇಲೆ ಆಯ್ಕೆ ಮಾಡಲಾಗುವುದು. ಕಲುಷಿತ ನೀರಿನಲ್ಲಿ ಅಜೋಲಾ ಬೆಳೆಸಿದರೆ ಮಾಲಿನ್ಯಕಾರಕಗಳ ಅಪಾಯವಿರುವುದರಿಂದ ಕೇವಲ ಸ್ವಚ್ಛ ನೀರು ಲಭ್ಯವಿರುವ ಸ್ಥಳಗಳನ್ನಷ್ಟೇ ಆಯ್ಕೆ ಮಾಡಲಾಗುತ್ತದೆ. ಫಲಾನುಭವಿಗಳಿಗೆ ಅಜೋಲಾ ಉತ್ಪಾದನೆ, ಕೊಯ್ದು, ಸ್ವಚ್ಛತೆ, ಸಂಸ್ಕರಣೆ ಹಾಗೂ ಜಾನುವಾರುಗಳಿಗೆ ನೀಡುವ ಕುರಿತು ತಾಂತ್ರಿಕ ತರಬೇತಿ ನೀಡಲಾಗುತ್ತದೆ.

ಯೋಜನೆಯನ್ನು VB-G RAM G ಮಾರ್ಗಸೂಚಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆಗೊಳಪಟ್ಟು ಅನುಷ್ಠಾನಗೊಳಿಸಲಾಗುತ್ತದೆ. ಪ್ರತಿಯೊಂದು ಘಟಕದ ಫಲಾನುಭವಿಯ ವಿವರಗಳು, ಆಧಾರ್, ಜಿಪಿಎಸ್ ಸ್ಥಳ (GPS Location), ಕಾರ್ಯನಿರ್ವಹಣೆಯ ಮೊದಲು ಮತ್ತು ನಂತರದ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ದಾಖಲಿಸಲಾಗುತ್ತದೆ. ಜಿಲ್ಲಾ ಉಪ ನಿರ್ದೇಶಕರು ಮಾಸಿಕ ವೇಳಾಪಟ್ಟಿ ಸಿದ್ಧಪಡಿಸಿ ಅನುಷ್ಠಾನಗೊಳಿಸಲಿದ್ದು, ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಪ್ರಗತಿ ವರದಿಯನ್ನು ರಾಜ್ಯ ಕಚೇರಿಗೆ ಸಲ್ಲಿಸಬೇಕೆಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ: Women SHG Subsidy-ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

ರೈತರು ಇದರ ಪ್ರಯೋಜನವನ್ನು ಪಡೆಯುವುದು ಹೇಗೆ?

ಅಜೋಲಾ ಘಟಕವನ್ನು ತಮ್ಮ ಜಮೀನಿನಲ್ಲಿ ನಿರ್ಮಾಣ ಮಾಡಿಕೊಳ್ಳಲು ಆಸಕ್ತಿಯನ್ನು ಹೊಂದಿರುವ ರೈತರು ಕೂಡಲೇ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿ ಅಥವಾ ನಿಮ್ಮ ತಾಲ್ಲೂಕಿನ ಪಶು ಅಸ್ಪತ್ರೆಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಿ ಘಟಕವನ್ನು ಸ್ಥಾಪನೆ ಮಾಡಿಕೊಳ್ಳಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: