B.E, B.Tech Scholorship-ಬಿ.ಟೆಕ್, ಬಿ.ಇ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

September 15, 2026 | Siddesh
B.E, B.Tech Scholorship-ಬಿ.ಟೆಕ್, ಬಿ.ಇ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!
Share Now:

2026-2027 ನೇ ಸಾಲಿನ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನದ ಅಡಿಯಲ್ಲಿ ಐಡಿಎಫ್‌ಸಿ ಫರ್ಸ್ಟ್ ಬ್ಯಾಂಕ್‌ನ ವತಿಯಿಂದ ನಾಲ್ಕು ವರ್ಷಗಳ ಬಿಇ ಅಥವಾ ಬಿ.ಟೆಕ್ ಕಾರ್ಯಕ್ರಮದ ಅವಧಿಗೆ ವರ್ಷಕ್ಕೆ 1 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ನೆರವಾಗಲಿದ್ದು, ಈ ಮೂಲಕ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಖರ್ಚುಗಳನ್ನು ನಿರ್ವಹಿಸಿಕೊಳ್ಳುವುದರ ಜೊತೆಗೆ, ಯಾವುದೇ ಆರ್ಥಿಕ ಅಡಚಣೆಯಿಲ್ಲದೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಅನುಕೂಲಕರವಾಗಿದೆ.

ಇದನ್ನೂ ಓದಿ: kotak kanya Scholorship-ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯಡಿ 1.5 ಲಕ್ಷ ವಿದ್ಯಾರ್ಥಿವೇತನ!

ಈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಇನ್ನಿತರ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Uses Of this Scholorship-ಈ ಯೋಜನೆಯ ಅಡಿಯಲ್ಲಿ ಒದಗುವ ಪ್ರಯೋಜನಗಳಾವುವು?

ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳು 1 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

Last date to apply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಸೆಪ್ಟೆಂಬರ್ 2026

ಇದನ್ನೂ ಓದಿ: SBI Platinum Scholarship-ಪದವಿಪೂರ್ವ ವಿದ್ಯಾರ್ಥಿಗಳಿಗೆ SBI ಪ್ಲಾಟಿನಂ ಜುಬಿಲಿ ವತಿಯಿಂದ 75,000 ವಿದ್ಯಾರ್ಥಿವೇತನ!

who Can Apply-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ ವಿದ್ಯಾರ್ಥಿಯು ಭಾರತದ ನಾಗರಿಕನಾಗಿರಬೇಕು.

ಬಿ.ಟೆಕ್ ಅಥವಾ ಬಿ.ಇ ಕಾರ್ಯಕ್ರಮದ ಮೊದಲ ವರ್ಷದಲ್ಲಿ (ಶೈಕ್ಷಣಿಕ ವರ್ಷ 2026-27) ದಾಖಲಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯದ ಮಿತಿಯು 6 ಲಕ್ಷಕ್ಕಿಂತ ಕಡಿಮೆ ಇರಬೇಕು.

ವಿದ್ಯಾರ್ಥಿಯು ತಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಮಾನ್ಯ ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು.

IDFC FIRST ಬ್ಯಾಂಕ್ ಉದ್ಯೋಗಿಗಳು ಮತ್ತು ಅವರ ಕುಟುಂಬ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಅಭ್ಯರ್ಥಿಗಳು ಮೊದಲ ಪರಿಣಾಮ ಪಟ್ಟಿಯಲ್ಲಿ ಸೇರಿಸಲಾದ ಕಾಲೇಜುಗಳಲ್ಲಿ ಒಂದಕ್ಕೆ ಪ್ರವೇಶ ಪಡೆದಿರಬೇಕು. (ಅರ್ಹ ಕಾಲೇಜುಗಳ ಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ ).

ಇದನ್ನೂ ಓದಿ: Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • ಪ್ರವೇಶ ಪುರಾವೆ
  • ಶುಲ್ಕ ರಶೀದಿಯ ಪ್ರತಿ
  • 10 ನೇ ತರಗತಿ ಅಂಕಪಟ್ಟಿ
  • ಆದಾಯ ಪ್ರಮಾಣಪತ್ರ
  • ಮೊಬೈಲ್ ನಂಬರ್

How To Apply-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: JK Tyre Scholarship-JK ಟೈರ್ ಶಿಕ್ಷಾ ಸಾರಥಿ ಯೋಜನೆಯಡಿ 25,000 ವಿದ್ಯಾರ್ಥಿವೇತನ! ಇನ್ನೂ 5 ದಿನ ಬಾಕಿ!

scholorship

ಇದನ್ನೂ ಓದಿ: Tata Capital Scholorship-ಟಾಟಾ ಕ್ಯಾಪಿಟಲ್ ವತಿಯಿಂದ ಡಿಪ್ಲೊಮಾ, ಐಟಿಐ 18,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Step-1: ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "IDFC FIRST Bank Engineering Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Women SHG Subsidy-ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

More Information-ವಿದ್ಯಾರ್ಥಿಗಳು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ: Read More

Tags:
WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: